ಅಮೆಜಾನ್‌ನಿಂದ ಅಪ್‌ಗ್ರೇಡ್ ಡೇಸ್ ಸೇಲ್; ಸ್ಮಾರ್ಟ್‌ಫೋನ್‌ಗಳಿಗೆ 40% ವರೆಗೆ ಡಿಸ್ಕೌಂಟ್!

|

ಪ್ರಮುಖ ಇ-ಕಾಮರ್ಸ್‌ ತಾಣವಾದ ಅಮೆಜಾನ್‌ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಮುಕ್ತಾಯವಾಗಿದೆ. ಈ ಸೇಲ್‌ನಲ್ಲಿ ಹಲವಾರು ರೀತಿಯ ಗ್ಯಾಜೆಟ್‌ಗಳು ಭರ್ಜರಿ ಡಿಸ್ಕೌಂಟ್‌ನೊಂದಿಗೆ ಮಾರಾಟ ಆಗಿದ್ದವು. ನೀವೇನಾದರೂ ಈ ಆಫರ್ ಮಿಸ್‌ ಮಾಡಿಕೊಂಡಿದ್ದರೆ ಈಗ ಅಮೆಜಾನ್‌ ಮತ್ತೇ ಅಪ್‌ಗ್ರೇಡ್ ಡೇಸ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಮೇಲೆ ಆಕರ್ಷಕ ರಿಯಾಯಿತಿ ಘೋಷಣೆ ಮಾಡಿದೆ. ಇದರಲ್ಲಿ ಅತ್ಯಾಕರ್ಷಕ ಫೀಚರ್ಸ್‌ ಇರುವ ಸ್ಮಾರ್ಟ್‌ಫೋನ್‌ಗಳನ್ನು ಕೈಗೆಟಕುವ ಬೆಲೆಯಲ್ಲಿ ಖರೀದಿ ಮಾಡಬಹುದು.

ಅಮೆಜಾನ್‌

ಹೌದು, ಅಮೆಜಾನ್‌ನ ಈ ಅಪ್‌ಗ್ರೇಡ್ ಡೇಸ್ ಸೇಲ್‌ನಲ್ಲಿ ಒನ್‌ಪ್ಲಸ್‌, ರಿಯಲ್‌ಮಿ, ರೆಡ್ಮಿ ಸೇರಿದಂತೆ ಇನ್ನಿತರೆ ಪ್ರಮುಖ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು 40% ವರೆಗೆ ರಿಯಾಯಿತಿ ಪಡೆದುಕೊಂಡಿವೆ. ಇದಿಷ್ಟೇ ಅಲ್ಲದೆ, ಎಯು ಬ್ಯಾಂಕ್, ಫೆಡರಲ್ ಬ್ಯಾಂಕ್, ಆರ್‌ಬಿಎಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೇಲೆ 10% ತ್ವರಿತ ರಿಯಾಯಿತಿಯನ್ನು ಸಹ ಪಡೆಯಬಹುದಾಗಿದೆ. ಈ ಕೊಡುಗೆ ಅಕ್ಟೋಬರ್ 28 ರವರೆಗೆ ಇರಲಿದ್ದು, ವ ವಿನಿಮಯ ಕೊಡುಗೆ, ನೋ ಕಾಸ್ಟ್‌ ಇಎಂಐ ನಂತಹ ಸೌಲಭ್ಯಗಳನ್ನು ಸ್ಮಾರ್ಟ್‌ಫೋನ್‌ ಖರೀದಿದಾರರಿಗೆ ನೀಡಲಾಗಿದೆ. ಹಾಗಿದ್ರೆ ಯಾವ ಫೋನ್‌ ಎಷ್ಟು ಬೆಲೆ ಹೊಂದಿದೆ, ಫೀಚರ್ಸ್‌ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಐಕ್ಯೂ Z6 ಲೈಟ್ 5G

ಐಕ್ಯೂ Z6 ಲೈಟ್ 5G

ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್‌ 3,500ರೂ. ಗಳ ರಿಯಾಯಿತಿ ಪಡೆದಿದ್ದು, 15,499ರೂ. ಗಳಿಗೆ ಲಭ್ಯವಾಗಲಿದೆ. ಈ ಫೋನ್ 6.58 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜನ್ 1 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ.

ರೆಡ್ಮಿ ನೋಟ್ 11 ಪ್ರೊ + 5G

ರೆಡ್ಮಿ ನೋಟ್ 11 ಪ್ರೊ + 5G

ರೆಡ್ಮಿ ನೋಟ್ 11 ಪ್ರೊ + 5G ಫೋನ್ 6,000ರೂ. ರಿಯಾಯಿತಿ ಪಡೆದುಕೊಂಡಿದ್ದು, 20,999ರೂ. ಗಳಿಗೆ ಇದನ್ನು ಖರೀದಿ ಮಾಡಬಹುದಾಗಿದೆ. ಹಾಗೆಯೇ 6.67 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತದೆ.

ಒನ್‌ಪ್ಲಸ್ ನಾರ್ಡ್ CE 2 5G

ಒನ್‌ಪ್ಲಸ್ ನಾರ್ಡ್ CE 2 5G

ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ 1,000ರೂ. ಗಳ ರಿಯಾಯಿತಿ ಪಡೆದುಕೊಂಡಿದ್ದು, 24,999ರೂ. ಗಳಿಗೆ ಸಿಗಲಿದೆ. ಈ ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 900 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13

ಸ್ಯಾಮ್‌ಸಂಗ್ ಗ್ಯಾಲಕ್ಸಿ M13

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 4,500ರೂ. ಗಳ ರಿಯಾಯಿತಿ ಪಡೆದುಕೊಂಡಿದ್ದು, ನಿಮಗೆ 10,499ರೂ. ಗಳಲ್ಲಿ ಲಭ್ಯವಾಗಲಿದೆ. ಈ ಫೋನ್ 6.6 ಇಂಚಿನ ಫುಲ್ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, ಆಕ್ಟಾ ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ.

ರಿಯಲ್‌ಮಿ ನಾರ್ಜೋ 50i

ರಿಯಲ್‌ಮಿ ನಾರ್ಜೋ 50i

ರಿಯಲ್‌ಮಿ ನಾರ್ಜೋ 50i ಸ್ಮಾರ್ಟ್‌ಫೋನ್ 1,600ರೂ. ಗಳ ರಿಯಾಯಿತಿ ಪಡೆದುಕೊಂಡಿದ್ದು, 6,399ರೂ. ಗಳಿಗೆ ಇದನ್ನು ಖರೀದಿ ಮಾಡಬಹುದಾಗಿದೆ. ಇನ್ನುಳಿದಂತೆ ಈ ಫೋನ್ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, ಶಕ್ತಿಯುತ ಆಕ್ಟಾಕೋರ್ ಪ್ರೊಸೆಸರ್ ನಿಂದ ಕಾರ್ಯನಿರ್ವಹಿಸಲಿದೆ.

ರೆಡ್ಮಿ ನೋಟ್ 11T 5G

ರೆಡ್ಮಿ ನೋಟ್ 11T 5G

ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ 4,000ರೂ. ಗಳ ರಿಯಾಯಿತಿ ಪಡೆದುಕೊಂಡಿದ್ದು, 16,999ರೂ. ಗಳಿಗೆ ಸಿಗಲಿದೆ. ಹಾಗೆಯೇ 6.6 ಇಂದಿನ ಫುಲ್ HD+ ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 810 ಆಕ್ಟಾಕೋರ್ 5G ಚಿಪ್‌ಸೆಟ್‌ನಿಂದ ಕೆಲಸ ಮಾಡಲಿದೆ.

ರೆಡ್ಮಿ 11 ಪ್ರೈಮ್ 5G

ರೆಡ್ಮಿ 11 ಪ್ರೈಮ್ 5G

ರೆಡ್ಮಿ 11 ಪ್ರೈಮ್ 5G ಫೊನ್ 3,000ರೂ. ಗಳ ರಿಯಾಯಿತಿ ಪಡೆದುಕೊಡಿದ್ದು, 12,999ರೂ. ಗಳಲ್ಲಿ ಖರೀದಿ ಮಾಡಬಹುದಾಗಿದೆ. ಹಾಗೆಯೇ 6.58 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 700 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದೆ.

ರೆಡ್ಮಿ A1

ರೆಡ್ಮಿ A1

ರೆಡ್ಮಿ A1 ಸ್ಮಾರ್ಟ್‌ಫೋನ್ 2,700ರೂ. ಗಳ ರಿಯಾಯಿತಿ ಪಡೆದುಕೊಂಡಿದ್ದು, 6,299ರೂ. ಗಳಿಗೆ ಲಭ್ಯವಾಗಲಿದೆ. ಇನ್ನು 6.52 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಈ ಫೋನ್ ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ನ ಬಲ ಪಡೆದುಕೊಂಡಿದೆ.

Best Mobiles in India

English summary
Amazon, the leading e-commerce site, has started the Upgrade Days Sale. In this, an attractive offer has been given for smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X