ಅಮೆಜಾನ್ ವಿವೋ ಡೇಸ್ ಸೇಲ್ 2021: ವಿವೋ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ!
ಜನಪ್ರಿಯ ಇ-ಕಾಮರ್ಸ್ ದೈತ್ಯ ಅಮೆಜಾನ್ ರಿಪಬ್ಲಿಕ್ ಡೇ ಸೇಲ್ ಇತ್ತೀಚಿಗಷ್ಟೇ ಮುಕ್ತಾಯಗೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ರಿಯಾಯಿತಿ ಸೇಲ್ ಅನ್ನು ಪ್ರಾರಂಭಿಸಿದೆ. ಅಮೆಜಾನ್ ಇದೀಗ ಅಮೆಜಾನ್ ವಿವೋ ಡೇಸ್ 2021 ಸೇಲ್ ಅನ್ನು ಆಯೋಜಿಸಿದೆ. ಹೆಸರೇ ಸೂಚಿಸುವಂತೆ ವಿವೋ ಸ್ಮಾರ್ಟ್‌ಫೋನ್‌ಗಳಲ್ಲಿ ವಿವಿಧ ರಿಯಾಯಿತಿ ಮತ್ತು ಸೇಲ್ ಆಫರ್ ಅನ್ನು ಹೊಂದಿದೆ. ಇನ್ನು ಈ ಸೇಲ್‌ನಲ್ಲಿ ಹೊಸ ವಿವೋ V20 ಪ್ರೊ 5G, ವಿವೊ 20 2021, ಮತ್ತು ವಿವೋ ಸಂಸ್ಥೆಯ ಹಲವು ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿಯನ್ನು ನೀಡಲಾಗ್ತಿದೆ.

ಹೌದು, ಅಮೆಜಾನ್ ವಿವೋ ಸ್ಮಾರ್ಟ್‌ಫೋನ್ ಪ್ರಿಯರಿಗಾಗಿ ವಿವೋ ಡೇಸ್ 2021 ಸೇಲ್ ಅನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ V20 ಸರಣಿ. ವಿವೋ V20 ಪ್ರೊ 5G ಸ್ಮಾರ್ಟ್‌ಫೋನ್‌ಗಳು ಅಮೆಜಾನ್ ವಿವೋ ಡೇಸ್ 2021 ನಲ್ಲಿ 14% ರಿಯಾಯಿತಿ ಪಡೆದುಕೊಂಡಿವೆ. ಜೊತೆಗೆ, ವಿವೋ V20 2021 ಅಮೆಜಾನ್ ಮಾರಾಟದಲ್ಲಿ 11% ರಿಯಾಯಿತಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ V20 ಪ್ರೊ 5G
ಅಮೆಜಾನ್ ವಿವೋ ಡೇಸ್ ಸೇಲ್ 2021 ನಲ್ಲಿ ವಿವೋ V20 ಪ್ರೊ 5G ಸ್ಮಾರ್ಟ್‌ಫೋನ್ 14% ರಿಯಾಯಿತಿಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ ಇದೀಗ 29,999 ರೂ ಗಳಿಗೆ ಲಭ್ಯವಾಗಲಿದೆ. ಅಲ್ಲದೆ ಎಕ್ಸಚೇಂಜ್ ಆಫರ್‌ನಲ್ಲಿ ಹೆಚ್ಚುವರಿ 2,000 ರೂ.ರಿಯಾಯಿತಿ ಕೂಡ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು 20: 9 ರಚನೆಯ ಅನುಪಾತವನ್ನು ಹೊಂದಿದ್ದು, ಅಮೋಲೆಡ್ ಡಿಸ್‌ಪ್ಲೇ ಮಾದರಿ ಇದಾಗಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ 8 GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ವಿವೊ V20
ಅಮೆಜಾನ್ ಸೇಲ್‌ನಲ್ಲಿ ವಿವೋ v20 ಸ್ಮಾರ್ಟ್‌ಫೋನ್ ಬೆಲೆಯಲ್ಲಿ 11% ರಿಯಾಯಿತಿಯನ್ನು ನೀಡಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ 24,990 ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 2,400x1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ 6.44-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 730G ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಹೊಂದಿದೆ. ಇದಲ್ಲದೆ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ವಿವೋ V20SE
ಅಮೆಜಾನ್ ವಿವೋ ಡೇಸ್ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್ 16% ರಿಯಾಯಿತಿಯನ್ನು ಪಡೆದುಕೊಂಡಿದ್ದು, 20,990 ರೂ, ಬೆಲೆಗೆ ಲಭ್ಯವಾಗಲಿದೆ. ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಫುಲ್ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬಳಸಿ TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 48MP ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 4100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ವಿವೊ X50 ಪ್ರೊ
ವಿವೋ X50 ಸ್ಮಾರ್ಟ್‌ಫೋನ್ ಅಮೆಜಾನ್ ವಿವೋ ಡೇಸ್ ಸೇಲ್‌ನಲ್ಲಿ 9% ರಿಯಾಯಿತಿಯನ್ನು ಪಡೆದುಕೊಂಡಿದೆ. ಇದು 34,990 ರೂ ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ವಿವೊ Y51
ವಿವೋ Y51 ಸ್ಮಾರ್ಟ್‌ಫೋನ್ ಅಮೆಜಾನ್ ವಿವೋ ಡೇಸ್ ಸೇಲ್‌ನಲ್ಲಿ 18% ರಿಯಾಯಿತಿಯನ್ನು ಪಡೆದುಕೊಂಡಿದ್ದು, 17,990 ರೂ,ಬೆಲೆಯನ್ನು ಹೊಂದಿದೆ. ಇದು 2408 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟ್ರಾ ಕೋರ್ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








