ಐಫೋನ್ 12 ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ!..ಭರ್ಜರಿ ಉಳಿತಾಯ ಗ್ಯಾರಂಟಿ!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ಆಗಿರುವ ಫ್ಲಿಪ್‌ಕಾರ್ಟ್ ಒಂದಿಲ್ಲೊಂದು ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತ ಸಾಗಿದೆ. ಇನ್ನು ಗ್ರಾಹಕರು ಸಹ ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ ಸೇಲ್ ಮೇಳ, ಡಿಸ್ಕೌಂಟ್ ಅಥವಾ ಇತರೆ ಕೊಡುಗೆಗಳ ಗಮನಿಸುವುದು ಸಾಮಾನ್ಯವಾಗಿದೆ. ನೀವೇನಾದರೂ ಹೀಗೆ ಭರ್ಜರಿ ಡಿಸ್ಕೌಂಟ್‌ನಲ್ಲಿ ಐಫೋನ್ 12 ಖರೀದಿಸುವ ಪ್ಲ್ಯಾನ್ ಮಾಡಿದ್ರೆ, ಅದಕ್ಕೆ ಸದ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಅತ್ಯುತ್ತಮ ವೇದಿಕೆ ಎನಿಸಿವೆ.

ಹೌದು, ಸದ್ಯ ಫ್ಲಿಪ್‌ಕಾರ್ಟ್ ತಾಣದಲ್ಲಿ ಐಫೋನ್ 12 ಫೋನ್ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಐಫೋನ್ 12 ಫೋನ್ 79,900ರೂ. ಗಳ ಪ್ರೈಸ್ ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು. ಆದರೆ ಫ್ಲಿಪ್‌ಕಾರ್ಟ್ ತಾಣದಲ್ಲಿ 56,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 2,000ರೂ. ಡಿಸ್ಕೌಂಟ್ ದೊರೆಯುತ್ತದೆ.

ಹಾಗೆಯೇ ಸುಮಾರು 23,000ರೂ. ವರೆಗೂ (ಹಳೆಯ ಫೋನ್ ಸ್ಥಿತಿ ಆಧರಿಸಿ) ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ. ಈ ಫೋನ್ ಬ್ಲ್ಯಾಕ್, ಗ್ರೀನ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ ಐಫೋನ್ 12 ಫೋನ್, ಐಫೋನ್ 12 ಮಿನಿ ಹಾಗೂ ಐಫೋನ್ 13 ಫೋನಿನ ಫೀಚರ್ಸ್ ಬಗ್ಗೆ ಮುಂದಿನ ಸ್ಲೈಡ್‌ಗಳಲ್ಲಿ ತಿಳಿಯೋಣ ಬನ್ನಿರಿ.

ಐಫೋನ್ 12 ಫೋನ್ ಫೀಚರ್ಸ್
ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಸೆನ್ಸಾರ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಹಾಗೆಯೇ ಈ ಐಫೋನ್ IP68 ವಾಟರ್ ರೆಸಿಸ್ಟಂಟ್ ಸೌಲಭ್ಯ ಸಹ ಪಡೆದಿದೆ. ಇನ್ನು ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಗಳಲ್ಲಿ ಸಿಗಲಿದೆ.

ಐಫೋನ್ 12 ಮಿನಿ ಫೋನ್ ಫೀಚರ್ಸ್ ಮಾಹಿತಿ
ಐಫೋನ್ 12 ಮಿನಿ ಫೋನ್ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಈ ಐಫೋನ್ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಬಹುತೇಕ ಐಫೋನ್ 12 ಫೀಚರ್ಸ್‌ಗಳನ್ನು ಹೊಂದಿದ್ದು, ಗಾತ್ರದಲ್ಲಿ ಮಾತ್ರ ವ್ಯತ್ಯಾಸವಿದೆ. ಹಾಗೆಯೇ ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.
ಐಫೋನ್ 13 ಫೋನ್ ಫೀಚರ್ಸ್ ಮಾಹಿತಿ
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.


Click it and Unblock the Notifications








