ಐಫೋನ್ 12 ಖರೀದಿಸುವ ಗ್ರಾಹಕರಿಗೆ ಭಾರೀ ಸಿಹಿಸುದ್ದಿ!
ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಒಂದಿಲ್ಲೊಂದು ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತ ಸಾಗಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಸೇಲ್ ಆಯೋಜಿಸುತ್ತದೆ. ಅದೇ ರೀತಿ ಈಗ ಭರ್ಜರಿ ಐಫೋನ್ 12 ಫೋನಿಗೆ ಭಾರೀ ಡಿಸ್ಕೌಂಟ್ ತಿಳಿಸಿದೆ. ಇತ್ತೀಚಿಗೆ ಮುಕ್ತಾಯವಾದ ಬಿಗ್ ಬಿಲಿಯನ್ ಡೇಸ್ ಸೇಲ್ ಮೇಳವನ್ನು ಮಿಸ್ ಮಾಡಿಕೊಂಡ ಗ್ರಾಹಕರಿಗೆ ಫ್ಲಿಪ್‌ಕಾರ್ಟ್ ಈಗ ಮತ್ತೊಂದು ಅವಕಾಶ ನೀಡಿದೆ. ಅದುವೇ ದೀಪಾವಳಿ ಸೇಲ್.

ಹೌದು, ದೀಪಾವಳಿ ಹಬ್ಬದ ಅಂಗವಾಗಿ ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್ ಆಯೋಜಿಸಿದೆ. ಈ ಸೇಲ್ ಮೇಳ ಇದೇ ಅ. 17 ರಿಂದ ಶುರುವಾಗಿದ್ದು, ಅ.23ರ ವರೆಗೂ ಇರಲಿದೆ. ಈ ಸೇಲ್‌ನಲ್ಲಿ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಾಗಲಿವೆ. ಮುಖ್ಯವಾಗಿ ಐಫೋನ್ 12 ಮಾಡೆಲ್‌ಗೆ 11,000ರೂ.ಗಳ ಆಕರ್ಷಕ ಕೊಡುಗೆ ನೀಡಿದೆ. ಹೀಗಾಗಿ ಫ್ಲಿಪ್‌ಕಾರ್ಟ್‌ನಲ್ಲಿ 64GB ಸ್ಟೋರೇಜ್ ವೇರಿಯಂಟ್ನ ಐಫೋನ್ 12 ಮಾಡೆಲ್ 53,999ರೂ.ಗಳಿಗೆ ಸಿಗಲಿದೆ. ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸುವ ಗ್ರಾಹಕರಿಗೆ 3,000ರೂ.ಗಳ ರಿಯಾಯಿತಿ ಸಿಗಲಿದೆ. ಹಾಗಾದರೇ ಐಫೋನ್ 12 ಫೋನಿನ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 12 ಫೀಚರ್ಸ್
ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಐಫೋನ್ 13 ಫೀಚರ್ಸ್
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಈ ಫೋನ್ ಬ್ಯಾಟರಿ ಹಿಂದಿನ ಐಫೋನ್ 12 ಗಿಂತ ಉತ್ತಮವಾಗಿದೆ.
ಐಫೋನ್ 13 ಮಿನಿ ಫೋನ್ ಫೀಚರ್ಸ್
ಐಫೋನ್ 13 ಮಿನಿ ಫೋನ್ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. . 800nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.
ಐಫೋನ್ 13 ಪ್ರೊ ಫೋನ್ ಫೀಚರ್ಸ್
ಐಫೋನ್ 13 ಪ್ರೊ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್ ಮಾಡಬಹುದಾಗಿದೆ. ಇನ್ನು ಈ ನಾಲ್ಕು ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








