ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್!..ಆಫರ್ ತಿಳಿದ್ರೆ ವಾವ್ ಅಂತೀರಾ!?
ಆಪಲ್ ಮೊಬೈಲ್ ಸಂಸ್ಥೆಯ ಜನಪ್ರಿಯ ಐಫೋನ್‌ಗಳಲ್ಲಿ ಒಂದಾದ ಐಫೋನ್ 12 ಸ್ಮಾರ್ಟ್‌ಫೋನ್ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಐಫೋನ್ ಪ್ರಿಯರನ್ನು ಗಮನ ಸೆಳೆದಿದೆ. ಇದೀಗ ಈ ಐಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಸಖತ್ ರಿಯಾಯಿತಿ ಪಡೆದಿದ್ದು, ಗ್ರಾಹಕರು ಕುತೂಹಲದಿಂದ ಈ ಐಫೋನಿನತ್ತ ತಿರುಗಿ ನೋಡುವಂತಾಗಿದೆ.
ಹೌದು, ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಆಪಲ್ ಐಫೋನ್ 12 ಸ್ಮಾರ್ಟ್‌ಫೋನ್ 10% ರಷ್ಟು ಆಕರ್ಷಕ ರಿಯಾಯಿತಿ ಪಡೆದಿದ್ದು, 64GB ವೇರಿಯಂಟ್ ಮೊಬೈಲ್ 53,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಇದರೊಂದಿಗೆ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಕೊಡುಗೆಗಳು ಸಹ ಗ್ರಾಹಕರಿಗೆ ದೊರೆಯುತ್ತವೆ. ಈ ಫೋನ್ ಬ್ಲ್ಯಾಕ್, ಗ್ರೀನ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಈ ಐಫೋನ್ ಐಓಎಸ್ 14 ಓಎಸ್ ಸಪೋರ್ಟ್ ಪಡೆದಿದ್ದು, 64GB, 128GB ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಡಾಲ್ಬಿ ವಿಷನ್ ಹೆಚ್‌ಆರ್‌ಡಿ ವಿಡಿಯೋ ರೇಕಾರ್ಡಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನುಳಿದಂತೆ ಈ ಐಫೋನಿನ ಇತರೆ ಫೀಚರ್ಸ್ ಬಗ್ಗೆ ಹಾಗೂ ಇತ್ತೀಚಿನ ಜನಪ್ರಿಯ ಐಫೋನ್‌ಗಳ ಫೀಚರ್ಸ್ ಬಗ್ಗೆ ಒಂದು ನೋಟ ಮುಂದೆ ನೋಡೋಣ ಬನ್ನಿರಿ.
ಐಫೋನ್ 12 ಫೋನ್ ಫೀಚರ್ಸ್ : ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಸೆನ್ಸಾರ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಸಂವೇದಕಗಳನ್ನು ಹೊಂದಿವೆ.
ಹಾಗೆಯೇ ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಹಾಗೆಯೇ ಈ ಐಫೋನ್ IP68 ವಾಟರ್ ರೆಸಿಸ್ಟಂಟ್ ಸೌಲಭ್ಯ ಸಹ ಪಡೆದಿದೆ. ಇನ್ನು ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಗಳಲ್ಲಿ ಸಿಗಲಿದೆ.
ಐಫೋನ್ 12 ಮಿನಿ ಫೋನ್ ಫೀಚರ್ಸ್ ಮಾಹಿತಿ : ಐಫೋನ್ 12 ಮಿನಿ ಫೋನ್ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಈ ಐಫೋನ್ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಬಹುತೇಕ ಐಫೋನ್ 12 ಫೀಚರ್ಸ್‌ಗಳನ್ನು ಹೊಂದಿದ್ದು, ಗಾತ್ರದಲ್ಲಿ ಮಾತ್ರ ವ್ಯತ್ಯಾಸವಿದೆ. ಹಾಗೆಯೇ ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಐಫೋನ್ 13 ಫೋನ್ ಫೀಚರ್ಸ್ ಮಾಹಿತಿ
ಐಫೋನ್ 13 ಫೋನ್ ಫೀಚರ್ಸ್ : ಈ ಐಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ.
ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.
ಐಫೋನ್ 14 ಫೀಚರ್ಸ್ : ಐಫೋನ್ 14 ಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್ ಸಪೋರ್ಟ್ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಆಯ್ಕೆ ಒಳಗೊಂಡಿದೆ.


Click it and Unblock the Notifications








