ಐಫೋನ್ 14 ಪ್ಲಸ್ ಬೆಲೆಯಲ್ಲಿ ಈಗ ಭರ್ಜರಿ ಡಿಸ್ಕೌಂಟ್!..ಖರೀದಿಸಬಹುದೇ?
ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಒಂದಿಲ್ಲೊಂದು ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತ ಸಾಗಿದೆ. ಇನ್ನು ಗ್ರಾಹಕರು ಸಹ ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ ಸೇಲ್ ಮೇಳ, ಡಿಸ್ಕೌಂಟ್ ಅಥವಾ ಇತರೆ ಕೊಡುಗೆಗಳ ನೋಡುತ್ತಾರೆ. ಅದಾಗ್ಯೂ, ಅಮೆಜಾನ್ ತಾಣದಲ್ಲಿ ಈಗ ಐಫೋನ್ 14 ಪ್ಲಸ್ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ವೆಬ್‌ಸೈಟ್ ಐಫೋನ್ 14 ಪ್ಲಸ್ ಸ್ಮಾರ್ಟ್‌ಫೊನ್ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಐಫೋನ್ 14 ಪ್ಲಸ್ 128GB ವೇರಿಯಂಟ್ 89,900ರೂ. ಆಗಿದ್ದು, 80,999ರೂ. ಗಳ ಪ್ರೈಸ್‌ನಲ್ಲಿ ಖರೀದಿಗೆ ಲಭ್ಯ. ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಸೌಲಭ್ಯಗಳು ಸಹ ಲಭ್ಯ.

ಇನ್ನು ಐಫೋನ್ 14 ಪ್ಲಸ್ ಸ್ಮಾರ್ಟ್‌ಫೊನ್ 128GB, 256GB ಹಾಗೂ 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಐಫೋನ್ ಬ್ಲೂ, ಮೀಡ್‌ನೈಟ್ ಬ್ಲ್ಯಾಕ್, ರೆಡ್, ಸ್ಟಾರ್‌ಲೈಟ್ ಕಲರ್ ಆಯ್ಕೆ ಪಡೆದಿದೆ. ಹಾಗಾದರೇ ಐಫೋನ್ 14 ಪ್ಲಸ್ ಹಾಗೂ ಐಫೋನ್ 14 ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಐಫೋನ್ 14 ಪ್ಲಸ್ ಫೀಚರ್ಸ್
ಐಫೋನ್ 14 ಪ್ಲಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಪಡೆದಿದ್ದು, OLED ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್ ಸಪೋರ್ಟ್ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಹಾಗೆಯೇ ಈ ಐಫೋನ್ 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಗೆ ಹೋಲಿಸಿದರೆ, ಈ ಫೋನ್ ದೀರ್ಘ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ಇದು ಐಫೋನ್ 14 ಪ್ಲಸ್ ಫೋನ್ ಸಹ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಸಪೋರ್ಟ್ ಪಡೆದಿದೆ.
ಐಫೋನ್ 14 ಫೋನ್ ಫೀಚರ್ಸ್
ಐಫೋನ್ 14 ಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್ ಸಪೋರ್ಟ್ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಆಯ್ಕೆ ಒಳಗೊಂಡಿದೆ.

ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್ ಫೀಚರ್ಸ್
ಐಫೋನ್ 14 ಪ್ರೊ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದ್ದು, ಮೊದಲ ಬಾರಿಗೆ ಆಲ್ವೇಸ್ ಆನ್ ಡಿಸ್‌ಪ್ಲೇ ನೀಡುತ್ತದೆ. ಅದೇ ರೀತಿ ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಹೊಂದಿದ್ದು, ಇದು ಸಹ ಆಲ್ವೇಸ್ ಆನ್ ಕಾರ್ಯವನ್ನು ಹೊಂದಿದೆ.
ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. 48 ಮೆಗಾ ಪಿಕ್ಸೆಲ್ ಅಗಲದ ಕ್ಯಾಮೆರಾ 2x ಟೆಲಿಫೋಟೋ ವೀಕ್ಷಣೆಯನ್ನು ಸಹ ನೀಡುತ್ತದೆ. ಐಫೋನ್ 14 ಪ್ರೊ ಆಕ್ಷನ್ ಮೋಡ್ ಅನ್ನು ನೀಡುತ್ತದೆ, ಇದು ಆಟೋಫೋಕಸ್, ಕ್ರ್ಯಾಶ್ ಡಿಟೆಕ್ಷನ್ ಮತ್ತು Emergency SOS via satellite ಸಂಪರ್ಕವನ್ನು ಬಳಸಿಕೊಂಡು ಸುಧಾರಿತ ಮುಂಭಾಗದ ಕ್ಯಾಮೆರಾ.


Click it and Unblock the Notifications








