ಐಫೋನ್‌ 14 ಪ್ರೊ, ಐಫೋನ್‌ 14 ಪ್ರೊ ಮ್ಯಾಕ್ಸ್‌ ಬಿಡುಗಡೆ!..ಇಲ್ಲಿದೆ ಸಂಪೂರ್ಣ ಮಾಹಿತಿ!

|

ಜನಪ್ರಿಯ ಆಪಲ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಐಫೋನ್ 14 ಸರಣಿಯನ್ನು ಇಂದು (ಸೆಪ್ಟೆಂಬರ್ 7 ರಂದು) ಬಿಡುಗಡೆ ಮಾಡಿದೆ. ಸಂಸ್ಥೆಯು (Far Out) 'ಫಾರ್ ಔಟ್' ಹೆಸರಿನಲ್ಲಿ ಕಾರ್ಯಕ್ರಮದ ಮೂಲಕ ಐಫೋನ್ 14 ಸರಣಿಯ ಮಾದರಿಗಳನ್ನು ಅಧಿಕೃತವಾಗಿ ಲಾಂಚ್ ಮಾಡಿದೆ. ಅಂದಹಾಗೇ ಆಪಲ್‌ ಐಫೋನ್ 14 ಸರಣಿಯು, ಐಫೋನ್ 14, ಐಫೋನ್ 14 ಪ್ಲಸ್‌ ಐಫೋನ್‌ 14 ಪ್ರೊ ಮತ್ತು ಐಫೋನ್‌ 14 ಪ್ರೊ ಮ್ಯಾಕ್ಸ್‌ ಮಾದರಿಗಳನ್ನು ಒಳಗೊಂಡಿದೆ.

ನಿರೀಕ್ಷೆಯಂತೆ

ಆಪಲ್‌ ಸಂಸ್ಥೆಯು ಆಯೋಜಿಸಿದ್ದ 'ಫಾರ್ ಔಟ್' ಹೆಸರಿನ ಕಾರ್ಯಕ್ರದಲ್ಲಿ ಇಂದು ಐಫೋನ್ 14 ಸರಣಿಯನ್ನು ಪರಿಚಯಿಸಿದೆ. ಈ ಸರಣಿಯು A16 ಬಯೋನಿಕ್ ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ನಿರೀಕ್ಷೆಯಂತೆ ನಿರೀಕ್ಷೆಯಂತೆ ಐಫೋನ್‌ 14 ಪ್ರೊ ( iPhone 14 Pro) ಮತ್ತು ಐಫೋನ್‌ 14 ಪ್ರೊ ಮ್ಯಾಕ್ಸ್‌ ( iPhone 14 Pro Max) ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಈ ಎರಡು ಫೋನ್‌ಗಳು ಕ್ಯಾಮೆರಾ, ಬ್ಯಾಟರಿ ಸೇರಿದಂತೆ ಹಲವು ವಿಭಾಗಗಳಲ್ಲಿ ಅಪ್‌ಡೇಟ್‌ ಪಡೆದಿವೆ.

ಹಿಂಭಾಗದ

ನೂತನ ಐಫೋನ್‌ 14 ಪ್ರೊ ಮತ್ತು ಐಫೋನ್‌ 14 ಪ್ರೊ ಮ್ಯಾಕ್ಸ್‌ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಹಿಂಭಾಗದ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ನಲ್ಲಿದೆ. ಇನ್ನು ಈ ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್‌ಗಳ ಫೀಚರ್ಸ್‌ ಏನು ಹಾಗೂ ಭಾರತದಲ್ಲಿ ಬೆಲೆ ಎಷ್ಟು? ಮಾರಾಟ ಯಾವಾಗ? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಫೀಚರ್ಸ್‌ ಹೇಗಿವೆ?

ಫೀಚರ್ಸ್‌ ಹೇಗಿವೆ?

ಐಫೋನ್ 14 ಪ್ರೊ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದ್ದು, ಮೊದಲ ಬಾರಿಗೆ ಆಲ್ವೇಸ್‌ ಆನ್ ಡಿಸ್‌ಪ್ಲೇ ನೀಡುತ್ತದೆ. ಅದೇ ರೀತಿ ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಹೊಂದಿದ್ದು, ಇದು ಸಹ ಆಲ್ವೇಸ್‌ ಆನ್ ಕಾರ್ಯವನ್ನು ಹೊಂದಿದೆ. ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. 48 ಮೆಗಾ ಪಿಕ್ಸೆಲ್ ಅಗಲದ ಕ್ಯಾಮೆರಾ 2x ಟೆಲಿಫೋಟೋ ವೀಕ್ಷಣೆಯನ್ನು ಸಹ ನೀಡುತ್ತದೆ. ಐಫೋನ್ 14 ಪ್ರೊ ಆಕ್ಷನ್ ಮೋಡ್ ಅನ್ನು ನೀಡುತ್ತದೆ, ಇದು ಆಟೋಫೋಕಸ್, ಕ್ರ್ಯಾಶ್ ಡಿಟೆಕ್ಷನ್ ಮತ್ತು Emergency SOS via satellite ಸಂಪರ್ಕವನ್ನು ಬಳಸಿಕೊಂಡು ಸುಧಾರಿತ ಮುಂಭಾಗದ ಕ್ಯಾಮೆರಾ.

ಐಫೋನ್

ಆಪಲ್‌ನ ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್ ಈ ಎರಡು ಫೋನ್‌ಗಳು A16 ಬಯೋನಿಕ್ ಚಿಪ್ ಪ್ರೊಸೆಸರ್ ಪವರ್ ಪಡೆದಿವೆ. ಆರು-ಕೋರ್ CPU ಹೊಂದಿದ್ದು. ಅಧಿಕ ಕಾರ್ಯಕ್ಷಮತೆಯ ಕೋರ್‌ಗಳನ್ನು ಒಳಗೊಂಡಿದೆ. ಇನ್ನು ಹೊಸ A16 ಚಿಪ್‌ಗಳು ಡೈನಾಮಿಕ್ ಐಲ್ಯಾಂಡ್ ಫೀಚರ್‌ ನಲ್ಲಿ ಕಂಡುಬರುವ ಮೃದುವಾದ ಅನಿಮೇಷನ್‌ಗಳಿಗೆ ಶಕ್ತಿ ತುಂಬಲು ಸಹಾಯ ಮಾಡುತ್ತದೆ.

ಬೆಲೆ ಎಷ್ಟು ಮತ್ತು ಲಭ್ಯತೆ?

ಬೆಲೆ ಎಷ್ಟು ಮತ್ತು ಲಭ್ಯತೆ?

ಹೊಸ ಐಫೋನ್ 14 ಪ್ರೊ ಫೋನ್ ಆರಂಭಿಕ ಬೆಲೆಯು $999 (ಭಾರತದಲ್ಲಿ ಆರಂಭಿಕ ಬೆಲೆ 1,29,900 ರೂ) ಆಗಿದೆ. ಅದೇ ರಿತಿ ಐಫೋನ್ 14 ಪ್ಲಸ್‌ ಬೆಲೆಯು $1,099 (ಭಾರತದಲ್ಲಿ ಆರಂಭಿಕ ಬೆಲೆ 1,39,900 ರೂ) ಆಗಿದೆ. ಐಫೋನ್ 14 ಪ್ರೊ ಸರಣಿಯ ಮುಂಗಡ-ಕೋರಿಕೆ ಲಭ್ಯತೆಯು ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗುತ್ತದೆ. ಆದರೆ ಫೋನ್‌ಗಳು ಸೆಪ್ಟೆಂಬರ್ 16 ರಿಂದ ಲಭ್ಯವಾಗಲಿವೆ. ಇನ್ನು ಈ ಫೋನ್‌ಗಳು ಫೋನ್‌ಗಳು ಸ್ಪೇಸ್ ಬ್ಲ್ಯಾಕ್, ಗೋಲ್ಡ್, ಸಿಲ್ವರ್ ಬಣ್ಣಗಳಲ್ಲಿ ಲಭ್ಯವಾಗಲಿವೆ.

Best Mobiles in India

English summary
Apple iPhone 14 Pro, iPhone 14 Pro Max launched: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X