ಐಫೋನ್ SE 2022 ಭಾರತದಲ್ಲಿ ಈಗ ಖರೀದಿಗೆ ಲಭ್ಯ!..ಕೊಡುಗೆ ಇದೆಯಾ?
ಜನಪ್ರಿಯ ಆಪಲ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಐಫೋನ್ SE 2022 (iPhone SE 2022) ಈಗ ಭಾರತದಲ್ಲಿ ಲಭ್ಯವಿದೆ. ಗ್ರಾಹಕರು ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕವೂ ಖರೀದಿಸಬಹುದು. ಇನ್ನು ಆಪಲ್ ಐಫೋನ್ SE 2022 ಫೋನಿನ 64GB ಆಂತರೀಕ ಸ್ಟೋರೇಜ್‌ನ ಆರಂಭಿಕ ವೇರಿಯಂಟ್ ಬೆಲೆಯು 43,900ರೂ. ಆಗಿದೆ.

ಹೌದು, ಬಹುನಿರೀಕ್ಷಿತ ಐಫೋನ್ SE 2022 (iPhone SE 2022) ಈಗ ಖರೀದಿಗೆ ಲಭ್ಯವಾಗಿದೆ. ಈ ಐಫೋನ್ 64GB 128GB ಮತ್ತು 256GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ 4.7 ಇಂಚಿನ ಡಿಸ್‌ಪ್ಲೇ ಪಡೆದಿದ್ದು, A 15 ಬಯೋನಿಕ್ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನುಳಿದಂತೆ ಐಫೋನ್ SE 2022 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಪಲ್ ಐಫೋನ್ SE (2022) 4.7 ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 750 x 1334 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರೆತೆಯು 326ppi ಆಗಿದ್ದು, 625 nits ವರೆಗೆ ಗರಿಷ್ಠ ಹೊಳಪನ್ನು ಹೊಂದಿದೆ. ಹಾಗೆಯೇ ಈ ಫೋನ್ A 15 ಬಯೋನಿಕ್ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಪ್ರೊಸೆಸರ್‌ಗೆ ಪೂರಕವಾಗಿ ಐಒಎಸ್ 15 ಬೆಂಬಲ ನೀಡಲಿದೆ. ಇದರೊಂದಿಗೆ ಈ ಐಫೋನ್ 64GB, 128GB ಮತ್ತು 256GB ಸ್ಟೋರೇಜ್ ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಲು ಯಾವುದೇ ಅವಕಾಶವನ್ನ ನೀಡಿಲ್ಲ.
ಇನ್ನು ಐಫೋನ್ SE (2022) ರಿಯರ್ ಸೆಟ್‌ಅಪ್‌ನಲ್ಲಿ ಸಿಂಗಲ್ ಕ್ಯಾಮೆರಾ ಹೊಂದಿದೆ. ಪ್ರಾಥಮಿಕ ಕ್ಯಾಮರಾವು 12 ಮೆಗಾ ಪಿಕ್ಸೆಲ್ ಸೆನ್ಸಾರ್ ಇದ್ದು, f/ 1.8 ಲೆನ್ಸ್ + ಒಐಎಸ್ ಹೊಂದಿದೆ. ಇದು ಡೀಪ್ ಫ್ಯೂಷನ್, ಸ್ಮಾರ್ಟ್ HDR 4 ಮತ್ತು ಫೋಟೋಗ್ರಾಫಿಕ್ ಸ್ಟೈಲ್ಸ್ ಸೇರಿದಂತೆ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ. ಇದು 60fps ವರೆಗೆ 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಹ ಬೆಂಬಲಿಸುತ್ತದೆ.

ಇನ್ನು ಸೆಲ್ಫಿಗಾಗಿ ಮುಂಬಾಗದಲ್ಲಿ 7 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಸೆಲ್ಫಿ ಕ್ಯಾಮೆರಾವು ನ್ಯಾಚುರಲ್, ಸ್ಟುಡಿಯೋ, ಬಾಹ್ಯರೇಖೆ, ಹಂತ, ಸ್ಟೇಜ್ ಮೊನೊ ಮತ್ತು ಹೈ-ಕೀ ಮೊನೊ ಎಂಬ ಆರು ಪರಿಣಾಮಗಳೊಂದಿಗೆ ಪೋರ್ಟ್ರೇಟ್ ಲೈಟಿಂಗ್ ಅನ್ನು ಬೆಂಬಲಿಸುತ್ತದೆ. ಇದು ಡೀಪ್ ಫ್ಯೂಷನ್, ಫೋಟೋಗಳಿಗಾಗಿ ಸ್ಮಾರ್ಟ್ HDR 4 ಮತ್ತು ಫೋಟೋಗ್ರಾಫಿಕ್ ಶೈಲಿಗಳನ್ನು ಸಹ ಒಳಗೊಂಡಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾದಿಂದ 1080p ವೀಡಿಯೊ ರೆಕಾರ್ಡಿಂಗ್ ಅನ್ನು ಸಕ್ರಿಯಗೊಳಿಸಿದೆ. ಟೈಮ್ ಲ್ಯಾಪ್ಸ್ ವೀಡಿಯೊ ಮತ್ತು ನೈಟ್ ಮೋಡ್ ಟೈಮ್ ಲ್ಯಾಪ್ಸ್‌ಗೆ ಸಹ ಬೆಂಬಲವಿದೆ.
ಆಪಲ್ ಐಫೋನ್ SE (2022) ಬ್ಯಾಟರಿ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿಯನ್ನ ಹಂಚಿಕೊಂಡಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋಈನ್ 5G, 4G VoLTE, Wi-Fi 5, ಬ್ಲೂಟೂತ್ v5, GPS/ A-GPS, NFC ಮತ್ತು ಲೈಟ್ನಿಂಗ್ ಪೋರ್ಟ್ ಸೇರಿದಂತೆ ಸಂಪರ್ಕ ಆಯ್ಕೆಗಳೊಂದಿಗೆ ಬರುತ್ತದೆ. ಹಾಗೆಯೇ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬ್ಯಾರೋಮೀಟರ್, ಮೂರು-ಆಕ್ಸಿಸ್ ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ. ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ.
ಬೆಲೆ ಎಷ್ಟು?
ಭಾರತದಲ್ಲಿ ಐಫೋನ್ SE (2022) ಬೆಲೆ 64GB ಮಾದರಿಗೆ 43,900ರೂ. ಐಫೋನ್ 128GB ವೇರಿಯಂಟ್‌ಗೆ 48,900ರೂ. ಮತ್ತು 256GB ವೇರಿಯಂಟ್‌ಗೆ ಮಾದರಿಗೆ 58,900ರೂ. ಆಗಿದೆ. ಹೊಸದಾಗಿ ಗ್ರೀನ್ ಬಣ್ಣಸ ಆಯ್ಕೆಯ ಪಡೆದಿದೆ. ಇದೇ ಮಾ.18 ರಿಂದ ಮಾರಾಟ ಆರಂಭಿಸಲಿದೆ.


Click it and Unblock the Notifications



