ಇಂದು ಆಸುಸ್ 8z ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!..ಆಫರ್ ಏನಿದೆ?
ಆಸುಸ್ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಆಸುಸ್ 8z ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೊದಲ ಸೇಲ್ ಇಂದು (ಮಾರ್ಚ್ 7) ಮಧ್ಯಾಹ್ನ 12 ರಿಂದ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ.

ಆಸುಸ್ ಕಂಪೆನಿ ನೂತನವಾಗಿ ಆಸುಸ್ 8z ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಮಾರ್ಚ್ 7) ನಡೆಯಲಿದೆ. ಈ ಫೋನ್ 8GB RAM ಮತ್ತು 128GB ವೇರಿಯಂಟ್ ಆಯ್ಕೆ ಹೊಂದಿದ್ದು, ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಹಾಗೆಯೇ ಈ ಫೋನ್ AMOLED ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಹಾಗಾದರೇ ಆಸುಸ್ 8z ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಆಸುಸ್ 8z ಸ್ಮಾರ್ಟ್‌ಫೋನ್ 5.9 ಇಂಚಿನ ಫುಲ್ HD+ ಸ್ಯಾಮ್‌ಸಂಗ್ E4 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದುಕೊಂಡಿದೆ.

ಪ್ರೊಸೆಸರ್ ಬಲ ಯಾವುದು
ಆಸುಸ್ 8z ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ZenUI 8 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಆಸುಸ್ 8z ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೋನಿ IMX363 ಸೆನ್ಸಾರ್ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 12 ಮೆಗಾ ಪಿಕ್ಸೆಲ್ ಸೋನಿ IMX663 ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಲೆನ್ಸ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಆಸುಸ್ 8z ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಿದೆ, ಇದು 30W ವೇಗದ ಚಾರ್ಜಿಂಗ್ ಮತ್ತು ಕ್ವಿಕ್ ಚಾರ್ಜ್ 4.0 ಮತ್ತು ಪವರ್ ಡೆಲಿವರಿ ಬೆಂಬಲವನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊ, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಅಂಡರ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ, ಈ ಫೋನ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಟ್ರಿಪಲ್ ಮೈಕ್ರೊಫೋನ್‌ಗಳೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಆಸುಸ್ 8z ಸ್ಮಾರ್ಟ್‌ಫೋನ್ ಬೆಲೆ ಏಕೈಕ 8GB + 128GB ಸ್ಟೋರೇಜ್ ರೂಪಾಂತರಕ್ಕೆ 42,999ರೂ ಹೊಂದಿದೆ. ಇನ್ನು ಈ ಫೋನ್ ಹೊರೈಜಾನ್ ಸಿಲ್ವರ್ ಮತ್ತು ಅಬ್ಸಿಡಿಯನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಲಭ್ಯ. ಈ ಫೋನ್ ಇಂದು (ಮಾರ್ಚ್ 7 ರಂದು) ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








