Home
ಸುದ್ದಿಜಾಲ

ದೇಶಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಆಸುಸ್‌ 8z ಸ್ಮಾರ್ಟ್‌ಫೋನ್‌! ಬೆಲೆ ಎಷ್ಟು?

ಆಸುಸ್‌ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ಈಗಾಗಲೇ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಆಸುಸ್‌ 8z ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕಾಂಪ್ಯಾಕ್ಟ್ ಫ್ಲ್ಯಾಗ್‌ಶಿಪ್‌ಗಾಗಿ ನೋಡುತ್ತಿರುವ ಗ್ರಾಹಕರನ್ನು ಕೇಂದ್ರೀಕರಿಸಿ ವಿನ್ಯಾಸಗೊಳಿಸಲಾಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

ಆಸುಸ್‌

ಹೌದು, ಆಸುಸ್‌ ಕಂಪೆನಿ ಭಾರತದಲ್ಲಿ ಹೊಸ ಆಸುಸ್‌ 8z ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5.9 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ OZO ಆಡಿಯೋ ಜೂಮ್ ಜೊತೆಗೆ ಟ್ರಿಪಲ್ ಮೈಕ್ರೊಫೋನ್ಗಳನ್ನು ಹೊಂದಿದೆ. ಇದು ವೀಡಿಯೊ ರೆಕಾರ್ಡಿಂಗ್ ಸಮಯದಲ್ಲಿ ಆಂಬಿಯೆಂಟ್‌ ನಾಯ್ಸ್‌ ಅನ್ನು ಕಡಿಮೆ ಮಾಡಲು ಸಹಾಯ ಮಾಡುವ ನಾಯ್ಸ್‌ ರೆಡ್ಯೂಕ್ಷನ್ ಟೆಕ್ನಾಲಜಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಆಸುಸ್‌ 8z ಸ್ಮಾರ್ಟ್‌ಫೋನ್‌ 5.9 ಇಂಚಿನ ಫುಲ್‌ HD+ ಸ್ಯಾಮ್‌ಸಂಗ್‌ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಆಸುಸ್‌ 8z ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ZenUI 8 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX363 ಸೆನ್ಸಾರ್ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೋನಿ IMX663 ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಲೆನ್ಸ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಆಸುಸ್‌ 8z ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಿದೆ, ಇದು 30W ವೇಗದ ಚಾರ್ಜಿಂಗ್ ಮತ್ತು ಕ್ವಿಕ್ ಚಾರ್ಜ್ 4.0 ಮತ್ತು ಪವರ್ ಡೆಲಿವರಿ ಬೆಂಬಲವನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊ, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಅಂಡರ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ, ಈ ಫೋನ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಟ್ರಿಪಲ್ ಮೈಕ್ರೊಫೋನ್‌ಗಳೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಆಸುಸ್‌ 8z ಸ್ಮಾರ್ಟ್‌ಫೋನ್‌ ಬೆಲೆ ಏಕೈಕ 8GB + 128GB ಸ್ಟೋರೇಜ್ ರೂಪಾಂತರಕ್ಕೆ 42,999ರೂ ಹೊಂದಿದೆ. ಇನ್ನು ಈ ಫೋನ್ ಹೊರೈಜಾನ್ ಸಿಲ್ವರ್ ಮತ್ತು ಅಬ್ಸಿಡಿಯನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದು ಮಾರ್ಚ್ 7 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Asus 8z price in India has been set at Rs. 42,999 for the lone 8GB + 128GB storage variant.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+