ಈ ಜನಪ್ರಿಯ ಗೇಮಿಂಗ್ ಫೋನ್ ಬೆಲೆಯಲ್ಲಿ ಈಗ ಭಾರೀ ಇಳಿಕೆ!..ಆಫರ್ ತಿಳಿಯಿರಿ!
ಆಸುಸ್ ಕಂಪೆನಿ ಆಸುಸ್ ROG ಫೋನ್ 5s ಸ್ಮಾರ್ಟ್‌ಫೋನ್ ಜನಪ್ರಿಯ ಗೇಮಿಂಗ್ ಫೋನ್‌ಗಳಲ್ಲಿ ಒಂದಾಗಿದೆ. ಈ ಫೋನ್ ಈಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಮೊಬೈಲ್ ಗೇಮಿಂಗ್ ಪ್ರಿಯ ಗ್ರಾಹಕರನ್ನು ತನ್ನತ್ತ ಸೆಳೆದಿದೆ.
ಹೌದು, ಆಸುಸ್ ಕಂಪೆನಿಯ ಆಸುಸ್ ROG ಫೋನ್ 5s ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 28% ರಿಯಾಯಿತಿ ಪಡೆದಿದೆ. 8 GB RAM + 128GB ವೇರಿಯಂಟ್ 55,999ರೂ. ದರದಲ್ಲಿ ಕಾಣಸಿಕೊಂಡಿದ್ದು, ಆದ್ರೆ, ಗ್ರಾಹಕರು 39,999ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ದೊರೆಯುತ್ತದೆ. ಈ ಫೋನಿನ ಇತರೆ ಫೀಚರ್ಸ್ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಆಸುಸ್ ROG ಫೋನ್ 5s ಸ್ಮಾರ್ಟ್‌ಫೋನ್ 1,080 x 2,448 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸ್ಯಾಮ್‌ಸಂಗ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದುಕೊಂಡಿದೆ.
ಪ್ರೊಸೆಸರ್ ಯಾವುದು : ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಆಸುಸ್ ROG ಫೋನ್ 5s ಫೋನ್ 12GB RAM ಮತ್ತು 256 GB ಸ್ಟೋರೇಜ್ ಹೊಂದಿದೆ.
ಕ್ಯಾಮೆರಾ ಸೆನ್ಸಾರ್ ಹೇಗಿದೆ : ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೋನಿ IMX686 ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ : ಆಸುಸ್ ROG ಫೋನ್ 5s ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇವುಗಳು 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6 ಜೊತೆಗೆ 802.11 a/b/g/n/ac/ax, Wi-Fi ಡೈರೆಕ್ಟ್, ಬ್ಲೂಟೂತ್ v5.2, NFC, ಮತ್ತು a ಯುಎಸ್ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.
ROG ಫೋನ್ 5s ಪ್ರೊ ಫೋನ್ ಫೀಚರ್ಸ್ : ಈ ಫೋನ್ ಸಹ ಆಸುಸ್ ROG ಫೋನ್ 5s ಸ್ಮಾರ್ಟ್‌ಫೋನ್ 1,080x2,448 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸ್ಯಾಮ್‌ಸಂಗ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಜೊತೆಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.
ಅಲ್ಲದೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಆಗಿದೆ. ಹಾಗೆಯೇ ಇದು 24 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದರೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದಕ್ಕೆ ಪೂರಕವಾಗಿ 30W ವೇಗದ ಚಾರ್ಜಿಂಗ್ ಸೌಲಬ್ಯ ಪಡೆದಿದೆ.


Click it and Unblock the Notifications








