Home
ಸುದ್ದಿಜಾಲ

ಭಾರತದಲ್ಲಿ ಅಸುಸ್‌ ROG 7 ಎಂಟ್ರಿಗೆ ಮುಹೂರ್ತ ಫಿಕ್ಸ್‌! ಫೀಚರ್ಸ್‌ ನಿರೀಕ್ಷೆ ಏನು?

ಗೇಮಿಂಗ್‌ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳಿಗೆ ಅಸುಸ್‌ ಕಂಪೆನಿ ಜನಪ್ರಿಯ ಬ್ರ್ಯಾಂಡ್‌ ಎನಿಸಿಕೊಂಡಿದೆ. ತನ್ನ ಭಿನ್ನ ಮಾದರಿಯ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನದೇ ಪ್ರಾಬಲ್ಯ ಸಾಧಿಸಿದೆ. ಇದೀಗ ತನ್ನ ಹೊಸ ಗೇಮಿಂಗ್‌ ಕೇಂದ್ರಿತ ಅಸುಸ್‌ ROG 7 ಅನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ.

ಹೌದು, ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್‌ 13ಕ್ಕೆ ಭಾರತದಲ್ಲಿ ಲಾಂಚ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌ ಆಗ್ತಿದ್ದ ಹಾಗೇ ಆನ್‌ಲೈನ್‌ನಲ್ಲಿ ಫೀಚರ್ಸ್‌ ಸೋರಿಕೆಯಾಗಿದೆ. ಹಾಗಾದ್ರೆ ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಅಸುಸ್‌ ROG 7 ಎಂಟ್ರಿಗೆ ಮುಹೂರ್ತ ಫಿಕ್ಸ್‌! ಫೀಚರ್ಸ್‌ ನಿರೀಕ್ಷೆ ಏನು

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಹೇಗಿರಲಿದೆ?

ಅಸುಸ್‌ ROG 7 ಸ್ಮಾರ್ಟ್‌ಫೋನ್‌ 6.85 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಹಾಗೆಯೇ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಪ್ರೊಟೆಕ್ಷನ್‌ನೊಂದಿಗೆ ಬರಲಿದೆ ಎನ್ನಲಾಗಿದೆ.

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಭಾರತದಲ್ಲಿ ಅಸುಸ್‌ ROG 7 ಎಂಟ್ರಿಗೆ ಮುಹೂರ್ತ ಫಿಕ್ಸ್‌! ಫೀಚರ್ಸ್‌ ನಿರೀಕ್ಷೆ ಏನು

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರುವ ಸಾದ್ಯತೆಯಿದೆ.

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌ ಏನಿರಲಿದೆ?

ಅಸುಸ್‌ ROG 7 ಸ್ಮಾರ್ಟ್‌ಫೋನ್‌ 6100 mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುವ ಸಾಧ್ಯತೆಯಿದೆ. ಇದು ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೊಮೀಟರ್ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಅಸುಸ್‌ ROG 7 ಎಂಟ್ರಿಗೆ ಮುಹೂರ್ತ ಫಿಕ್ಸ್‌! ಫೀಚರ್ಸ್‌ ನಿರೀಕ್ಷೆ ಏನು

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಬೆಲೆ ಏನಿರಬಹುದು?

ಅಸುಸ್‌ ROG 7 ಸ್ಮಾರ್ಟ್‌ಫೋನ್‌ ಭಾರತದಲ್ಲಿ 70,000ರೂ. ಕ್ಕಿಂತ ಹೆಚ್ಚು ಬೆಲೆಯಿರುತ್ತದೆ ಎಂದು ಊಹಿಸಲಾಗಿದೆ. ಇದು ಏಪ್ರಿಲ್‌ 13ಕ್ಕೆ ಭಾರತದಲ್ಲಿ ಲಾಂಚ್‌ ಆಗಲಿದ್ದು, ಸೇಲ್‌ ಡೇಟ್‌ ಬಿಡುಗಡೆಯ ನಂತರ ಬಹಿರಂಗವಾಗಲಿದೆ.

ಇನ್ನು ಅಸುಸ್‌ ಕಂಪೆನಿ ಕಳೆದ ವರ್ಷವಷ್ಟೇ ಭಾರತದಲ್ಲಿ ಆಸುಸ್‌ ROG ಫೋನ್ 6 ಸ್ಮಾರ್ಟ್‌ಫೋನ್‌ ಪರಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2448 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 165Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.
ಆಸುಸ್‌ ROG ಫೋನ್ 6 ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 71,999ರೂ.ಬೆಲೆಯನ್ನು ಹೊಂದಿದೆ.

Best Mobiles in India

English summary
Asus' next-gen gaming-centric smartphone, the Asus ROG 7, will launch globally, including in India, on April 13.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+