ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಅಸುಸ್ ROG ಫೋನ್ 3!
ಇದು ಟೆಕ್ನಾಲಜಿ ಜಮಾನ. ಟೆಕ್ನಾಲಜಿ ಮುಂದುವರೆದಷ್ಟು ಹೊಸ ಮಾದರಿಯ ಸ್ಮಾರ್ಟ್ ಪ್ರಾಡಕ್ಟ್‌ಗಳು ಟೆಕ್ ವಲಯಕ್ಕೆ ಲಗ್ಗೆ ಹಾಕುತ್ತಲೇ ಇವೆ. ಇದರ ಪರಿಣಾಮವಾಗಿ ಇಂದು ಜಗತ್ತಿನ ಎಲ್ಲೆಡೆ ಸ್ಮಾರ್ಟ್‌ಫೋನ್‌ಗಳು ರಿಂಗಣಿಸುತ್ತಲೇ ಇವೆ. ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಾದಂತೆ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗುತ್ತಲೇ ಇವೆ. ಇನ್ನು ನಿಮಗೆಲ್ಲಾ ತಿಳಿದಿರುವಂತೆ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದ್ದು, ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು ಸಹ ಮಾರುಕಟ್ಟೆಯಲ್ಲಿ ಲಬ್ಯವಿವೆ. ಇನ್ನು ಹಲವಾರು ಸ್ಮಾರ್ಟ್‌ಫೋನ್ ಕಂಪೆನಿಗಳು ತಮ್ಮ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಾ ಬಂದಿವೆ. ಇವುಗಳಲ್ಲಿ ಅಸುಸ್ ಕಂಪೆನಿ ಕೂಡ ಒಂದಾಗಿದ್ದು, ತನ್ನದೇ ಆದ ಜನಪ್ರಿಯತೆಯನ್ನ ಹೊಂದಿದೆ.

ಹೌದು, ಅಸುಸ್ ಕಂಪೆನಿ ಟೆಕ್ ವಲಯದಲ್ಲಿ ತನ್ನದೇ ಆದ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದ್ದು, ಇದೀಗ ತನ್ನ ಮತ್ತೊಂದು ಹೊಸ ಮಾದರಿಯ ಗೇಮಿಂಗ್ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. ಈಗಾಗಲೇ ಆರ್‌ಒಜಿ ಲೈನ್ ಗೇಮಿಂಗ್ ಲ್ಯಾಪ್‌ಟಾಪ್ ಮತ್ತು ಜೆನ್‌ಬುಕ್ಸ್‌ಗೆ ಹೆಸರುವಾಸಿಯಾದ ತೈವಾನೀಸ್ ಅಸುಸ್ ಇದೀಗ ತನ್ನ ಆರ್‌ಒಜಿ ಫೋನ್ 3 ಅನ್ನು ಪರಿಚಯಿಸಲು ಸಿದ್ದತೆ ನಡೆಸಿದೆ ಎಂದು ಹೇಳಲಾಗಿದೆ. ಅದರಲ್ಲೂ ಮೂರನೇ ತಲೆಮಾರಿನ ಸ್ಮಾರ್ಟ್‌ಫೋನ್ ಲೆನೊವೊ ಲೀಜನ್ ಗೇಮಿಂಗ್ ಸ್ಮಾರ್ಟ್‌ಫೋನ್‌ಗೆ ಪ್ರತಿಸ್ಪರ್ಧಿಯಾಗಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಒದಿರಿ.

ಅಸುಸ್ ಕಂಪೆನಿ ಬಿಡುಗಡೆ ಮಾಡಲಿರುವ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಯ ದಿನಾಂಕ ಹೊರತುಪಡಿಸಿ ಮುಂಬರುವ ಗೇಮಿಂಗ್ ಸ್ಮಾರ್ಟ್‌ಫೋನ್ ಬಗ್ಗೆ ಇನ್ನೂ ಏನೂ ಕೂಡ ದೃಡಪಟ್ಟಿಲ್ಲ. ಆದರೂ, ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಆಸುಸ್‌ನ ಮುಂಬರುವ ಗೇಮಿಂಗ್ ಫೋನ್ 6.59-ಇಂಚಿನ ಫುಲ್ ಹೆಚ್‌ಡಿ + ರೆಸಲ್ಯೂಶನ್ ಸ್ಕ್ರೀನ್ ಅನ್ನು ಹೊಂದಿರುತ್ತದೆ ಎಂದು ವರದಿಯಾಗಿದೆ. ಇನ್ನು ಈ ಸ್ಕ್ರೀನ್ 144Hz ವರೆಗಿನ ರಿಫ್ರೆಶ್ ರೇಟ್ ಅನ್ನು ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ, ಈ ಸ್ಮಾರ್ಟ್‌ಫೋನ್ 64 ಮೆಗಾಪಿಕ್ಸೆಲ್ ಸಾಮರ್ಥ್ಯದ ರಿಯರ್ ಕ್ಯಾಮೆರಾವನ್ನು ಸಹ ಹೊಂದಿದೆ ಎಂದು ಹೇಳಲಾಗ್ತಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಅಥವಾ ಸ್ನಾಪ್‌ಡ್ರಾಗನ್ 865+ ಪ್ರೊಸೆಸರ್ ಹೊಂದಿರುವ ಸಾಧ್ಯತೆ ಇದೆ. ಅಷ್ಟೇ ಅಲ್ಲ ಈ ಸ್ಮಾರ್ಟ್‌ಫೋನ್ 12GB RAM ಅಥವಾ 16GB RAM ಮತ್ತು 512GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರುವ ಸ್ಮಾರ್ಟ್‌ಫೋನ್ ಇದಾಗಿರಲಿದೆ ಎನ್ನಲಾಗ್ತಿದೆ.

ಅಲ್ಲದೆ ಈ ಸ್ಮಾರ್ಟ್‌ಫೋನ್ ಗೇಮಿಂಗ್ ಸ್ಮಾರ್ಟ್‌ಫೋನ್ ಆಗಿರುವುದರಿಂದ ಇದರಲ್ಲಿ ಕೂಲಿಂಗ್ ಟೆಕ್ನಾಲಜಿಯನ್ನ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು ಎಂದು ಸಹ ಹೇಳಲಾಗ್ತಿದೆ.

ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಅಮೋಲೆಡ್ ಪೇನ್ ಅನ್ನು ಸಹ ನಿರೀಕ್ಷಿಸಬಹುದಾಗಿದೆ. ಇನ್ನು ಇತ್ತೀಚೆಗೆ, ಬ್ಲೂಟೂತ್ ವೆಬ್‌ಸೈಟ್‌ನಲ್ಲಿ ASUS_I003D ಮತ್ತು ASUS_I003DD ಎಂಬ ಎರಡು ಮಾದರಿಗಳನ್ನು ಪಟ್ಟಿ ಮಾಡಲಾಗಿದೆ. ಇವುಗಳನ್ನು ಆರ್‌ಒಜಿ ಫೋನ್ 3 ಮಾದರಿಗಳೆಂದು ಹೇಳಿಕೊಳ್ಳಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಇದೇ ಜುಲೈ 22 ರಂದು ಬಿಡುಗಡೆ ಆಗುವ ಸಾಧ್ಯತೆ ಇದೆ.


Click it and Unblock the Notifications








