Home
ಸುದ್ದಿಜಾಲ

ದೈತ್ಯ ಆಸೂಸ್‌ ROG 3 ಗೇಮಿಂಗ್ ಸ್ಮಾರ್ಟ್‌ಫೋನ್‌ ಬಿಡುಗಡೆ!

ತೈವಾನ್‌ ಮೂಲದ ಆಸೂಸ್‌ ಟೆಕ್ ಕಂಪನಿಯು ಈಗಾಗಲೇ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಮುಖ್ಯವಾಗಿ ಗೇಮಿಂಗ್‌ ಬೆಂಬಲಿಸುವ ಲ್ಯಾಪ್‌ಟಾಪ್‌ ಹಾಗೂ ಸ್ಮಾರ್ಟ್‌ಫೋನ್‌ಗಳನ್ನು ಹೊಂದಿದೆ. ಈಗ ಕಂಪನಿಯು ಮತ್ತೊಂದು ಮೂರನೇ ಗೇಮಿಂಗ್‌ ಸ್ಮಾರ್ಟ್‌ಫೋನ್‌ ಅನ್ನು (ಜು.22ರಂದು) ಬಿಡುಗಡೆ ಮಾಡಿದೆ.

ಆಸೂಸ್‌ ROG 3

ಹೌದು, ಆಸೂಸ್‌ ಸಂಸ್ಥೆಯು ಆಸೂಸ್‌ ROG 3 ಗೇಮಿಂಗ್ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಇನ್ನು ಈ ದೈತ್ಯ ಫೋನ್‌ ಎರಡು ವೇರಿಯಂಟ್‌ ಮಾದರಿಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB RAM + 128GB ಮತ್ತು 12GB RAM + 256GB ಸಾಮರ್ಥ್ಯದಲ್ಲಿವೆ. ಕ್ವಾಲ್ಕಮ್ ಸ್ಯಾಮ್‌ಡ್ರಾಗನ್ 865+ SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಈ ಫೋನ್‌ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನಿನ ಬೆಲೆ ಎಷ್ಟು ಹಾಗೂ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಆಸೂಸ್‌ ROG 3 ಗೇಮಿಂಗ್ ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.59 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಮಾದರಿಯ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದ್ದು, 144Hz ರಿಫ್ರೇಶ್‌ ರೇಟ್ ಪಡೆದಿದೆ. ಇನ್ನು ಇದರೊಂದಿಗೆ HDR10+ ಸಪೋರ್ಟ್‌ ಹೊಂದಿದೆ ಜೊತೆಗೆ 2.5D ಗ್ಲಾಸ್‌ ಹಾಗೂ ಗೊರಿಲ್ಲಾ ಗ್ಲಾಸ್‌ 6 ಪಡೆದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಆಸೂಸ್‌ ROG 3 ಗೇಮಿಂಗ್ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ಯಾಮ್‌ಡ್ರಾಗನ್ 865+ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಓಎಸ್‌ ಬೆಂಬಲ ಪಡೆದಿದೆ. ಇದರೊಂದಿಗೆ ಆಡ್ರೆನೊ 650 GPU ಸಹ ಹೊಂದಿದೆ. 8GB RAM + 128GB ಮತ್ತು 12GB RAM + 256GB ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಆಸೂಸ್‌ ROG 3 ಗೇಮಿಂಗ್ ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ ಹಾಗೂ ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿ 24ಎಂಪಿ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಲೈಫ್‌

ಬ್ಯಾಟರಿ ಲೈಫ್‌

ಆಸೂಸ್‌ ROG 3 ಗೇಮಿಂಗ್ ಸ್ಮಾರ್ಟ್‌ಫೋನ್‌ 6000mAh ಬ್ಯಾಟರಿ ಸಪೋರ್ಟ್‌ ಪಡೆದಿದೆ. ಇದರೊಂದಿಗೆ 30W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಅನ್ನು ಒಳಗೊಂಡಿದೆ. ಇದರೊಂದಿಗೆ Hi-Res ಆಡಿಯೊ ಬೆಂಬಲ ಇದೆ ಹಾಗೂ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ ವಿ 5.1, ಜಿಪಿಎಸ್ / ಎ-ಜಿಪಿಎಸ್ / ನ್ಯಾವಿಕ್, ಯುಎಸ್ಬಿ ಟೈಪ್-ಸಿ, ಮತ್ತು 48-ಪಿನ್ ಸೈಡ್ ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಆಸೂಸ್‌ ROG 3 ಗೇಮಿಂಗ್ ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್‌ ಫೋನ್ ಬೆಲೆಯು 49,999ರೂ. ಆಗಿದೆ. ಹಾಗಯೇ 12GB RAM + 256GB ವೇರಿಯಂಟ್‌ ಬೆಲೆಯು 57,999ರೂ. ಆಗಿದೆ. ಇನ್ನು ಈ ಇದೇ ಅಗಷ್ಟ 6ರಂದು ಮಧ್ಯಾಹ್ನ 12ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಫಸ್ಟ್ ಸೇಲ್ ಆರಂಭಿಸಲಿದೆ.

Best Mobiles in India

English summary
ASUS smartphone has been launched in India at a starting price of Rs 49,999 (8GB RAM + 128GB).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+