ಭಾರತದಲ್ಲಿ ಆಸುಸ್‌ ROG ಫೋನ್ 5s ಬಿಡುಗಡೆ! ಬೆಲೆ ಎಷ್ಟು?

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಆಸುಸ್‌ ಕಂಪೆನಿ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಹಲವು ಆಕರ್ಷಕ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗೇಮಿಂಗ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ಆಸುಸ್‌ ROG ಫೋನ್ 5s ಮತ್ತು ROG ಫೋನ್ 5s ಪ್ರೊ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಎರಡು ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು ಟಾಪ್-ಎಂಡ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ.

ಆಸುಸ್‌ ROG ಫೋನ್ 5s ಮತ್ತು ROG ಫೋನ್ 5s ಪ್ರೊ

ಹೌದು, ಆಸುಸ್‌ ಕಂಪೆನಿ ಭಾರತದಲ್ಲಿ ಹೊಸ ಆಸುಸ್‌ ROG ಫೋನ್ 5s ಮತ್ತು ROG ಫೋನ್ 5s ಪ್ರೊ ಲಾಂಚ್‌ ಮಾಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು 6.78 ಇಂಚಿನ ಫುಲ್‌ HD+ ಸ್ಯಾಮ್‌ಸಂಗ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿವೆ. ಜೊತೆಗೆ 144Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇನ್ನು ಎರಡೂ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿವೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ಗಳು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಆಸುಸ್‌ ROG ಫೋನ್ 5s ಮತ್ತು ROG ಫೋನ್ 5s ಪ್ರೊ ಎರಡು ಸ್ಮಾರ್ಟ್‌ಫೋನ್‌ಗಳು 1,080x2,448 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸ್ಯಾಮ್‌ಸಂಗ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿವೆ. ಇದಲ್ಲದೆ 1ms ರೆಸ್ಪಾನ್ಸ್‌ ಟೈಂ, 24ms ಟಚ್ ಲೇಟೆನ್ಸಿ, HDR10+ ಬೆಂಬಲ ಮತ್ತು 1200 ವರೆಗೆ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದಲ್ಲದೆ ಈ ಎರಡೂ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದುಕೊಂಡಿವೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಆದರೆ ಆಸುಸ್‌ ROG ಫೋನ್ 5s ಫೋನ್‌ 12GB RAM ಮತ್ತು 256GB ಸ್ಟೋರೇಜ್‌ ಹೊಂದಿದೆ. ಹಾಗೆಯೇ ಆಸುಸ್‌ ROG ಫೋನ್ 5s ಪ್ರೊ 18GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿವೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಈ ಎರಡೂ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್‌, ಎರಡನೇ ಕ್ಯಾಮೆರಾ 13-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಆಸುಸ್‌ ROG ಫೋನ್ 5s ಮತ್ತು ROG ಫೋನ್ 5s Pro ಸ್ಮಾರ್ಟ್‌ಫೋನ್‌ಗಳು 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿವೆ. ಇವುಗಳು 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6 ಜೊತೆಗೆ 802.11 a/b/g/n/ac/ax, Wi-Fi ಡೈರೆಕ್ಟ್, ಬ್ಲೂಟೂತ್ v5.2, NFC, ಮತ್ತು a ಯುಎಸ್ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಇ-ದಿಕ್ಸೂಚಿ, ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಅಂಡರ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಗೈರೊಸ್ಕೋಪ್ ಮತ್ತು ಏರ್‌ಟ್ರಿಗ್ಗರ್ 5 ಮತ್ತು ಗ್ರಿಪ್ ಪ್ರೆಸ್‌ಗಾಗಿ ಅಲ್ಟ್ರಾಸಾನಿಕ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಆಸುಸ್‌ ROG ಫೋನ್ 5s ಬೆಲೆ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 49,999 ರೂ.ಆಗಿದೆ. ಇನ್ನು 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 57,999.ರೂ.ಆಗಿದೆ. ಇದಲ್ಲದೆ ಆಸುಸ್‌ ROG ಫೋನ್ 5s ಪ್ರೊ ಸ್ಮಾರ್ಟ್‌ಫೋನ್‌ ಬೆಲೆ 79,999ರೂ.ಆಗಿದೆ. ಈ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳು ಫೆಬ್ರವರಿ 18 ರಂದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ROG ಫೋನ್ 5s ಅನ್ನು ಫ್ಯಾಂಟಮ್ ಬ್ಲಾಕ್ ಮತ್ತು ಸ್ಟಾರ್ಮ್ ವೈಟ್ ಬಣ್ಣ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಆದರೆ ROG ಫೋನ್ 5s ಪ್ರೊ ಅನ್ನು ಫ್ಯಾಂಟಮ್ ಬ್ಲ್ಯಾಕ್ ಬಣ್ಣದ ಆಯ್ಕೆಯಲ್ಲಿ ನೀಡಲಾಗುತ್ತದೆ.

Best Mobiles in India

English summary
Asus ROG Phone 5s and ROG Phone 5s Pro were launched in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X