Just In
- 3 hrs ago
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- 4 hrs ago
Valentines Day ಗಿಫ್ಟ್ ಸರ್ಚ್ ಮಾಡ್ತಾ ಇದ್ದೀರಾ?..ಇಲ್ಲಿವೆ ನೋಡಿ ಅತ್ಯುತ್ತಮ ಉಡುಗೊರೆ
- 5 hrs ago
ವಾಟ್ಸಾಪ್ಗೆ ಈ ಅಚ್ಚರಿಯ ಆಯ್ಕೆ ಸೇರೋದು ಪಕ್ಕಾ! ಇದರ ಬಗ್ಗೆ ಕೂಡಲೇ ತಿಳಿದುಕೊಳ್ಳಿ!
- 5 hrs ago
ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ; ಈ ಪ್ಲ್ಯಾನ್ 28 ದಿನಕ್ಕಲ್ಲ ಬದಲಾಗಿ ಒಂದು ತಿಂಗಳ ಮಾನ್ಯತೆ!
Don't Miss
- Lifestyle
ಪುರುಷರಿಗಿಂತ ಮಹಿಳೆಯರಿಗೆ ತೂಕ ಇಳಿಕೆ ತುಂಬಾ ಕಷ್ಟ, ಏಕೆ?
- Automobiles
2030 ರ ವೇಳೆಗೆ EV ವಾಹನ ಮಾರಾಟ 1 ಕೋಟಿ ಯೂನಿಟ್ಗಳನ್ನು ಮುಟ್ಟಲಿದೆ: ಆರ್ಥಿಕ ಸಮೀಕ್ಷೆ
- News
ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವ: ಜನರ ಮನಸ್ಸು ಬದಲಾಗಲಿ, ರೈತರಿಗೆ ಕನ್ಯೆ ಕೊಡಲಿ, ವೈರಲ್
- Sports
ಆತನಿಗೆ ನೀಡಿದ ಜವಾಬ್ಧಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ: ತ್ರಿಪಾಠಿ ಪ್ರದರ್ಶನಕ್ಕೆ ಬಂಗಾರ್ ಹರ್ಷ
- Movies
ಕಿರುತೆರೆ ಮೂಲಕ ನಟನೆಗೆ ಕಾಲಿಟ್ಟ ದೀಕ್ಷಿತ್ ಈಗ ಚಿತ್ರರಂಗದಲ್ಲಿ ಬ್ಯುಸಿ
- Finance
ಉದ್ಯೋಗಿಗಳಿಗೆ ಟೊಯೋಟಾ ಗ್ಲಾನ್ಜಾ ಗಿಫ್ಟ್ ನೀಡಿದ ರಮೇಶ್ ಮರಂದ್ ಯಾರು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದೈತ್ಯ ಆಸುಸ್ ROG ಫೋನ್ 6 ಸೇಲ್ ಆರಂಭ!..ಬೆಲೆ ಎಷ್ಟು? ಫೀಚರ್ಸ್ ಏನು?
ತೈವಾನ್ ಮೂಲದ ಆಸುಸ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ಆಸುಸ್ ROG ಫೋನ್ 6 (ASUS ROG Phone 6) ಗೇಮಿಂಗ್ ಸ್ಮಾರ್ಟ್‌ಫೋನ್ ಸರಣಿ ಹೈ ಎಂಡ್ ಫೀಚರ್ಸ್ ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಈ ಫೋನ್ ಇದೀಗ ಭಾರತದಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಸರಣಿಯು ಆಸುಸ್ ROG ಫೋನ್ 6 ಮತ್ತು ಆಸುಸ್ ROG ಫೋನ್ 6 ಪ್ರೊ ಮಾಡೆಲ್‌ಗಳನ್ನು ಒಳಗೊಂಡಿದೆ.

ಹೌದು, ನೂತನ ಆಸುಸ್ ROG ಫೋನ್ 6 ಮತ್ತು ROG ಫೋನ್ 6 ಪ್ರೊ ಈ ಎರಡು ಫೋನ್‌ಗಳು ವಿಜಯ್ ಸೇಲ್ಸ್ ಮೂಲಕ ಖರೀದಿಸಲು ಲಭ್ಯವಾಗಲಿದೆ ಎಂದು ಕಂಪನಿಯು ದೃಢಪಡಿಸಿದೆ. ಅಂದಹಾಗೆ ಆಸುಸ್ ROG ಫೋನ್ 6 ಮತ್ತು ROG ಫೋನ್ 6 ಪ್ರೊ ಸ್ಮಾರ್ಟ್‌ಫೋನ್‌ಗಳು ವಿಭಿನ್ನ RAM ಆಯ್ಕೆಗಳಲ್ಲಿ ದೊರೆಯಲಿವೆ. ಅಲ್ಲದೆ ವಿಭಿನ್ನ ಗ್ರಾಫಿಕ್ಸ್ ಅನ್ನು ಶೋ ಮಾಡಲು ಬಳಸಬಹುದಾದ ಪ್ರೊಗ್ರಾಮ್ ಮಾಡಬಹುದಾದ ಅಮೋಲೆಡ್ ರಿಯರ್ ಡಿಸ್‌ಪ್ಲೇಯನ್ನು ಕೂಡ ಪಡೆದುಕೊಂಡಿವೆ. ಹಾಗಾದರೆ ಈ ಎರಡು ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಆಸುಸ್ ROG ಫೋನ್ 6 ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 71,999ರೂ.ಬೆಲೆಯನ್ನು ಹೊಂದಿದೆ. ಇನ್ನು ಆಸುಸ್ ROG ಫೋನ್ 6 ಪ್ರೊ ಸ್ಮಾರ್ಟ್‌ಫೋನ್ 18GB RAM + 512GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ 89,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ಗಳು ಕಪ್ಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿವೆ. ಆಯ್ದ ಬ್ಯಾಂಕ್‌ಗಳ ಕೊಡುಗೆ ಮೂಲಕ ಸುಮಾರು 2,500 ವರೆಗೆ ರಿಯಾಯಿತಿಯನ್ನು ಪಡೆಯಬಹುದು.

ಆಸುಸ್ ROG ಫೋನ್ 6 ಫೀಚರ್ಸ್
ಆಸುಸ್ ROG ಫೋನ್ 6 ಸ್ಮಾರ್ಟ್‌ಫೋನ್ 6.78 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2448 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 165Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಫೋನ್‌ಗಳಲ್ಲಿನ ಡಿಸ್‌ಪ್ಲೇ ರಿಫ್ರೆಶ್ ರೇಟ್ ಅನ್ನು 60Hz, 90Hz, 120Hz, 144Hz ಮತ್ತು 165Hz ನಡುವೆ ಆಯ್ಕೆ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ. ಇದು ಕಾರ್ನಿಂಗ್ ಗ್ಲಾಸ್ ವಿಕ್ಷಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 6,000mAh ಡ್ಯುಯಲ್-ಸೆಲ್ ಬ್ಯಾಟರಿಯನ್ನು ಹೊಂದಿದೆ.

ಆಸುಸ್ ROG ಫೋನ್ 6 ಪ್ರೊ ಫೀಚರ್ಸ್
ಆಸುಸ್ ROG ಫೋನ್ 6 ಪ್ರೊ ಸ್ಮಾರ್ಟ್‌ಫೋನ್ ಕೂಡ 6.78 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗ್ಲಾಸ್ ವಿಕ್ಷಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ 18GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಫೋನ್ ಕೂಲಿಂಗ್ ಸಿಸ್ಟಮ್‌ನೊಂದಿಗೆ ಬರುತ್ತದೆ, ಇದು CPU ತಾಪಮಾನವನ್ನು 10 ಡಿಗ್ರಿಗಳಷ್ಟು ಕಡಿಮೆ ಮಾಡುತ್ತದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ ರೈಟ್ ಸ್ಪೈನ್ ಮೇಲೆ ಏರ್‌ಟ್ರಿಗ್ಗರ್ ಅಲ್ಟ್ರಾಸಾನಿಕ್ ಬಟನ್‌ಗಳನ್ನು ನೀಡಿದೆ. ಇದು ಗೇಮ್‌ಳಿಂದ ವಿಭಿನ್ನ ಕಂಟ್ರೋಲ್‌ಗಳನ್ನು ಮ್ಯಾಪ್ ಮಾಡಲು ನಿಮಗೆ ಅನುಮತಿಸುತ್ತದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಡ್ಯುಯಲ್-ಸೆಲ್ ಬ್ಯಾಟರಿಯನ್ನು (3,000 + 3,000mAh) ಹೊಂದಿದೆ. ಇದು 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದನ್ನು ಚಾರ್ಜ್ ಮಾಡಲು ಡ್ಯುಯಲ್ USB ಟೈಪ್-C ಪೋರ್ಟ್ ಅನ್ನು ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470