ಬಹು ನಿರೀಕ್ಷಿತ ಆಸುಸ್‌ ROG ಫೋನ್ 6D ಬಿಡುಗಡೆ! ಫೀಚರ್ಸ್‌ ಹೇಗಿದೆ?

|

ಟೆಕ್‌ ಮಾರುಕಟ್ಟೆಯಲ್ಲಿ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಆಸುಸ್‌ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಭಿನ್ನ ಮಾದರಿಯ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದೀಗ ಆಸುಸ್‌ ಕಂಪೆನಿ ತನ್ನ ಬಹುನಿರೀಕ್ಷಿತ ROG ಫೋನ್ 6D ಅಲ್ಟಿಮೇಟ್ ಮತ್ತು ROG ಫೋನ್ 6D ಗೇಮಿಂಗ್ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಮೀಡಿಯಾಟೆಕ್‌ ಡೈಮೆನ್ಸಿಟಿ 9000+ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ.

ಆಸುಸ್‌

ಹೌದು, ಆಸುಸ್‌ ಕಂಪೆನಿ ಹೊಸ ROG ಫೋನ್ 6D ಅಲ್ಟಿಮೇಟ್ ಮತ್ತು ROG ಫೋನ್ 6D ಗೇಮಿಂಗ್ ಫೋನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ROG ಫೋನ್ 6D ಅಲ್ಟಿಮೇಟ್ ಏರೋಆಕ್ಟಿವ್ ಪೋರ್ಟಲ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ಗಳು 6000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದ್ದು, 65W ವೇಗದ ಚಾರ್ಜಿಮಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಆಸುಸ್‌ ROG ಫೋನ್ 6D ಮತ್ತು ROG ಫೋನ್ 6D ಅಲ್ಟಿಮೇಟ್ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸ್ಯಾಮ್‌ಸಂಗ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 165Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಅಲ್ಲದೆ 720Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿವೆ. ಈ ಎರಡೂ ಫೋನ್‌ಗಳು ಕೂಡ ಸೆಕೆಂಡರಿ ಡಿಸ್‌ಪ್ಲೇ ಹೊಂದಿದ್ದು, ಭಿನ್ನ ಮಾದರಿಯಲ್ಲಿ ಬರಲಿವೆ. ಅಂದರೆ ROG ಫೋನ್ 6D ಅಲ್ಟಿಮೇಟ್ ಹಿಂಭಾಗದಲ್ಲಿ ROG ವಿಷನ್ ಬಣ್ಣದ PMOLED ಡಿಸ್‌ಪ್ಲೇ ಹೊಂದಿದೆ. ಆದರೆ ROG ಫೋನ್ 6D LED- ಬ್ರೈಟ್‌ನೆಸ್‌ ROG ಲೋಗೋವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕೂಡ ಮೀಡಿಯಾ ಟೆಕ್‌ ಡೈಮೆನ್ಸಿಟಿ 9000+ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಇದಕ್ಕೆ ಪೂರಕವಾಗಿ Mali-G710 GPU ಸಪೋರ್ಟ್‌ ಅನ್ನು ಪಡೆದಿವೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿವೆ. ಈ ಫೋನ್‌ಗಳು ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವುದಿಲ್ಲ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 1/1.56″ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ F2.2 ಅಲ್ಟ್ರಾವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಪಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಆಸುಸ್‌ ROG ಫೋನ್ 6D ಮತ್ತು ROG ಫೋನ್ 6D ಅಲ್ಟಿಮೇಟ್ ಸ್ಮಾರ್ಟ್‌ಫೋನ್‌ಗಳು 6000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದ್ದು, 65W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿವೆ. ಇದನ್ನು USB ಟೈಪ್-C ಪೋರ್ಟ್ ಮೂಲಕ ಚಾರ್ಜ್‌ ಮಾಡಬಹುದಾಗಿದೆ. ಇದಲ್ಲದೆ ROG ಫೋನ್ 6 ಪರಿಕರಗಳು ROG ಫೋನ್ 6D ಗೆ ಹೊಂದಿಕೆಯಾಗುತ್ತವೆ ಎಂದು ಆಸುಸ್‌ ಕಂಪೆನಿ ಹೇಳಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಆಸುಸ್‌ ROG ಫೋನ್ 6D ಬೆಲೆ £799 ರಿಂದ ಪ್ರಾರಂಭವಾಗಲಿದೆ. ಆದರೆ ROG ಫೋನ್ 6D ಅಲ್ಟಿಮೇಟ್ ಆರಂಭಿಕ ಬೆಲೆ £1,199 ಆಗಲಿದೆ. ಈ ಎರಡೂ ಫೋನ್‌ಗಳು ಸಿಂಗಲ್‌ ಸ್ಪೇಸ್ ಗ್ರೇ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಡಿವೈಸ್‌ ಅಕ್ಟೋಬರ್‌ನಲ್ಲಿ ರವಾನೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ಬರಲಿದೆಯೇ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ.

Best Mobiles in India

English summary
Asus ROG Phone 6D Ultimate, ROG Phone 6D launched

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X