ಆಸುಸ್‌ನ ಹೊಸ 16GB RAM ಫೋನ್ ಬಿಡುಗಡೆಗೆ ಸಜ್ಜು!..ಅಚ್ಚರಿಯ ಬೆಲೆ!
ಆಸುಸ್ ಸಂಸ್ಥೆಯು ತನ್ನ ಜೆನ್ ಮೊಬೈಲ್ ಸರಣಿಯಲ್ಲಿ ಇದೀಗ ಬಿಡುಗಡೆ ಮಾಡಲು ಸಜ್ಜಾಗಿರುವ ಬಹುನಿರೀಕ್ಷಿತ ಆಸುಸ್ ಜೆನ್‌ಫೋನ್ 10 ಸಾಕಷ್ಟು ಕುತೂಹಲ ಮೂಡಿಸಿದೆ. ಆದ್ರೆ, ಇದೀಗ ಈ ಫೋನಿನ ಬೆಲೆಯ ಬಗ್ಗೆ ಮಾಹಿತಿ ಸೋರಿಕೆಯಾಗಿದ್ದು, ಮಾರುಕಟ್ಟೆಯಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ಹೌದು, ಆಸುಸ್ ಸಂಸ್ಥೆಯು ಈಗ 'ಆಸುಸ್ ಜೆನ್‌ಫೋನ್ 10' (Asus Zenfone 10) ಅನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದು, ಈ ಫೋನ್ ಸದ್ಯದಲ್ಲೇ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಅಂದಹಾಗೆ ಈ ಫೋನಿನ ದರದ ಮಾಹಿತಿ ಲೀಕ್ ಆಗಿದ್ದು, ಸುಮಾರು $749 (ಭಾರತದಲ್ಲಿ ಅಂದಾಜು 62,000ರೂ) ಬೆಲೆಯಲ್ಲಿ ಲಾಂಚ್ ಆಗಬಹುದು ಎಂದು ಹೇಳಲಾಗುತ್ತಿದೆ. ಹಾಗದರೆ ಲೀಕ್ ಮಾಹಿತಿಯಂತೆ ಈ ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಆಸುಸ್ ಜೆನ್‌ಫೋನ್ 10 ಸ್ಮಾರ್ಟ್‌ಫೋನ್ 6.3 ಇಂಚಿನ AMOLED ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಇದರ ಡಿಸ್‌ಪ್ಲೇಯು 1,080 x 2,400 ಪಿಕ್ಸಲ್ ರೆಸಲ್ಯೂಶನ್ ಹೊಂದಿರಲಿದ್ದು, ಜೊತೆಗೆ 120Hz ರಿಫ್ರೆಶ್ ರೇಟ್ ಸಾಮರ್ಥ್ಯವನ್ನು ಹೊಂದಿರಲಿದೆ. ಅಲ್ಲದೇ ಈ ಡಿಸ್‌ಪ್ಲೇಯು 20:9 ಅನುಪಾತವನ್ನು ಒಳಗೊಂಡಿರಲಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಹೊಂದಿರುತ್ತದೆ.
ಹಾಗೆಯೇ ಆಸುಸ್ ಜೆನ್‌ಫೋನ್ 10 ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಪಡೆದಿರಲಿದೆ. ಇದರೊಂದಿಗೆ 16GB RAM ಮತ್ತು 512 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿರಲಿದೆ. ಇರತೆ ವೇರಿಯಂಟ್ ಆಯ್ಕೆ ಪಡೆದಿರುವ ನಿರೀಕ್ಷೆ ಸಹ ಇದೆ.
ಈ ಕಾಂಪ್ಯಾಕ್ಟ್ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿರಲಿದೆ. ಇನ್ನೊಂದು ಕ್ಯಾಮೆರಾವು ಅಲ್ಟ್ರಾ-ವೈಡ್ 12 ಮೆಗಾ ಪಿಕ್ಸಾಲ್ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 12 ಮೆಗಾ ಪಿಕ್ಸಾಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆ. ಸೆಲ್ಫಿ ಕ್ಯಾಮೆರಾವು ವಿಡಿಯೋ ಕರೆ ಹಾಗೂ ಫೋಟೋಗಳಿಗೆ ಪೂರಕ ಇರಲಿದೆ.

ಆಸುಸ್ ಜೆನ್‌ಫೋನ್ 10 ಫೋನಿನ ಬ್ಯಾಟರಿಗೆ ಸಂಬಂಧಿಸಿದಂತೆ ನೋಡುವುದಾರೆ, ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದೆ. ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರಲಿದೆ. ಇನ್ನು ಆಸುಸ್ ಜೆನ್‌ಫೋನ್ 10 ಫೋನ್ ಆರಂಭಿಕ ವೇರಿಯಂಟ್ ಬೆಲೆಯು ಅಂದಾಜು $749 (ಭಾರತದಲ್ಲಿ ಅಂದಾಜು 62,000ರೂ) ಗಳ ಇರಬಹುದು ಎಂದು ಅಂದಾಜಿಸಲಾಗುತ್ತಿದೆ. ಇನ್ನು ಈ ಫೋನ್ ಮೂನ್‌ಲೈಟ್ ವೈಟ್, ಮಿಡ್‌ನೈಟ್ ಬ್ಲಾಕ್, ಸ್ಟಾರಿ ಬ್ಲೂ ಮತ್ತು ಸನ್‌ಸೆಟ್ ರೆಡ್ ಬಣ್ಣಗಳಲ್ಲಿ ಲಭ್ಯ ಆಗಲಿದೆ ಎನ್ನಲಾಗಿದೆ.
ಆಸುಸ್ ಜೆನ್‌ಫೋನ್ 9 ಫೀಚರ್ಸ್ : ಈ ಸ್ಮಾರ್ಟ್‌ಫೋನ್ 5.92 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದರ ಡಿಸ್‌ಪ್ಲೇಯು 1,080 x 2,400 ಪಿಕ್ಸಲ್ ರೆಸಲ್ಯೂಶನ್ ಹೊಂದಿದೆ. ಇದರೊಂದಿಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಈ ಫೋನ್ 16GB RAM ಮತ್ತು 512GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.


Click it and Unblock the Notifications








