ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಆಸುಸ್‌ ಜೆನ್‌ಫೋನ್‌ 9!

|

ಭಾರತದ ಟೆಕ್‌ ಮಾರುಕಟ್ಟೆಯಲ್ಲಿ ಆಸುಸ್‌ ಕಂಪೆನಿ ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಆಸುಸ್‌ ಜೆನ್‌ಫೋನ್‌ 9 ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಆಸುಸ್‌ 9z ಹೆಸರಿನಲ್ಲಿ ಭಾರತದಲ್ಲಿ ಮಾರಾಟವಾಗಲಿದೆ ಎನ್ನಲಾಗಿದೆ.

ಆಸುಸ್‌

ಹೌದು, ಆಸುಸ್‌ ಕಂಪೆನಿ ಭಾರತದಲ್ಲಿ ತನ್ನ ಹೊಸ ಆಸುಸ್‌ ಜೆನ್‌ಫೋನ್‌ 9 ಅಥವಾ ಆಸುಸ್‌ 9z ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್ 23ರಂದು ಭಾರತದಲ್ಲಿ ಲಾಂಚ್‌ ಆಗಲಿದೆ ಎನ್ನಲಾಗಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ಹೇಗಿದೆ?

ಆಸುಸ್‌ ಜೆನ್‌ಫೋನ್‌ 9 ಸ್ಮಾರ್ಟ್‌ಫೋನ್‌ 5.9 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು 1100 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಹೊಂದಿದ್ದು, 84.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್ ಹೇಗಿರಲಿದೆ?

ಪ್ರೊಸೆಸರ್ ಹೇಗಿರಲಿದೆ?

ಆಸುಸ್‌ ಜೆನ್‌ಫೋನ್‌ 9 ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್‌ ಸಪೋರ್ಟ್‌ ಸಹ ಪಡೆದಿರಲಿದೆ. ಇದರೊಂದಿಗೆ 16GB RAM ಮತ್ತು 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿರಲಿದೆ. ಅಲ್ಲದೇ 16/256GB ಸ್ಟೋರೇಜ್‌ ಜೊತೆಗೆ 8/128GB ಮತ್ತು 8/256GB ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿರಲಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಆಸುಸ್‌ ಜೆನ್‌ಫೋನ್‌ 9 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX363 ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಹೊಂದಿರಬಹುದು ಎನ್ನಲಾಗಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೋನಿ IMX663 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಆಸುಸ್‌ ಜೆನ್‌ಫೋನ್‌ 9 ಸ್ಮಾರ್ಟ್‌ಫೋನ್‌ 4300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು. ಇದು 30W ವೇಗದ ಚಾರ್ಜಿಂಗ್ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸೆಲೆರೊಮೀಟರ್ ಸೆನ್ಸಾರ್‌, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಇ- ದಿಕ್ಸೂಚಿಯನ್ನು ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಆಸುಸ್‌ ಜೆನ್‌ಫೋನ್‌ 9 ಸ್ಮಾರ್ಟ್‌ಫೋನ್‌ ಬೆಲೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 64,700 ರೂ.ಬೆಲೆಗೆ ಲಭ್ಯವಾಗುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲಾಕ್, ಬ್ಲೂ, ರೆಡ್, ಸಿಲ್ವರ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ.

ಸ್ಮಾರ್ಟ್‌ಫೋನ್‌

ಆಸುಸ್‌ 8z ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆಸುಸ್‌ ಸಂಸ್ಥೆಯು ಈ ವರ್ಷದ ಮಾರ್ಚ್‌ನಲ್ಲಿ ಬಿಡುಗಡೆ ಮಾಡಿರುವ ಆಸುಸ್‌ 8z ಸ್ಮಾರ್ಟ್‌ಫೋನ್‌ ಆಕರ್ಷಕ ಎನಿಸಿದೆ. ಈ ಫೋನ್ 5.9 ಇಂಚಿನ ಫುಲ್‌ HD+ ಸ್ಯಾಮ್‌ಸಂಗ್‌ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದುಕೊಂಡಿದೆ.

Best Mobiles in India

Read more about:
English summary
Asus Zenfone 9 India launch may happen later this week, according to a new report.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X