Home
ಸುದ್ದಿಜಾಲ

ಬೆಸ್ಟ್‌ ಆಫರ್‌!..ಈ ಫೋನ್‌ ಅನ್ನು 6000ರೂ. ಒಳಗೆ ಖರೀದಿ ಮಾಡಬಹುದು!

ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ ಸಂಸ್ಥೆಯು ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ (Flipkart Big Billion Days Sale) ಆಯೋಜಿಸಿದೆ. ಈ ಮಾರಾಟ ಮೇಳದಲ್ಲಿ ಅಗ್ಗದ ಫೋನ್‌ಗಳಿಂದ ದುಬಾರಿ ಬೆಲೆಯ ಮೊಬೈಲ್‌ಗಳು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಆನ್‌ಲೈನ್‌ ಖರೀದಿದಾರರನ್ನು ಸೆಳೆದಿದೆ.

ಹೌದು, ಹಬ್ಬದ ಅಂಗವಾಗಿ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಪ್ರಾರಂಭ ಆಗಿದೆ. ಈ ಮೇಳದಲ್ಲಿ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಶೇ. 33% ರಷ್ಟು ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇರಲಿದೆ. ಈ ಫೋನ್‌ ಅನ್ನು 6,699ರೂ. ಗಳಿಗೆ ಖರೀದಿಗೆ ಲಭ್ಯ ಇದ್ದು, ಇತರೆ ಕೊಡುಗೆ ಸೇರಿ ಗ್ರಾಹಕರು ಇದನ್ನು 5939ರೂ. ಗಳಿಗೆ ಖರೀದಿಸಲು ಅವಕಾಶ ಇರುತ್ತದೆ.

ಬೆಸ್ಟ್‌ ಆಫರ್‌!..ಈ ಫೋನ್‌ ಅನ್ನು 6000ರೂ. ಒಳಗೆ ಖರೀದಿ ಮಾಡಬಹುದು!

ಎಂಟ್ರಿ ಲೆವೆಲ್ ಮಾದರಿಯ ಈ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಯುನಿಸೊಕ್ SC9863A1 ಪ್ರೊಸೆಸರ್ ಪವರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಒಳಗೊಂಡಿದೆ. ಇದರ ಇನ್ನೊಂದು ಪ್ಲಸ್‌ ಪಾಯಿಂಟ್‌ ಎಂದರೆ, ಅದು 6000 mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಹಾಗಾದರೇ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇಯ ಪಿಕ್ಸೆಲ್‌ ರೆಸಲ್ಯೂಶನ್‌ ಎಷ್ಟು

ಇನ್ಫಿನಿಕ್ಸ್‌ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ 6.6 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 1612 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 500 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಸಪೋರ್ಟ್ ಮಾಡಲಿದೆ.

ಪ್ರೊಸೆಸರ್‌ ಯಾವುದು ಇದೆ

ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ಯುನಿಸೊಕ್ SC9863A1 ಪ್ರೊಸೆಸರ್ ಪಡೆದಿದ್ದು, ಇದು ಆಂಡ್ರಾಯ್ಡ್‌ 12 ಆಧಾರಿತ ಹ್ಯಾಂಡ್ಸೆಟ್ XOS 12ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಲ್ಲದೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದರೊಂದಿಗೆ ವರ್ಚುವಲ್ RAM ಫೀಚರ್ಸ್‌ ಮೂಲಕ ಬಳಕೆದಾರರು 3GB ವರೆಗೆ ಮೆಮೊರಿಯನ್ನು ವಿಸ್ತರಿಸುವ ಆಯ್ಕೆ ಅನ್ನು ಪಡೆದುಕೊಂಡದೆ.

ಕ್ಯಾಮೆರಾ ಸೆನ್ಸಾರ್ ಎಷ್ಟಿದೆ

ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 13 ಎಂಪಿ ಸೆನ್ಸಾರ್‌ ಮತ್ತು ದ್ವಿತೀಯ ಕ್ಯಾಮೆರಾ 2 ಎಂಪಿ ಸೆನ್ಸಾರ್‌ ಹೊಂದಿದೆ. ಇನ್ನು ಹಿಂಬದಿಯಲ್ಲಿ ಡ್ಯುಯಲ್ LED ಫ್ಲ್ಯಾಷ್ ರಚನೆ ಅನ್ನು ಅಳವಡಿಸಲಾಗಿದೆ. ಇದಲ್ಲದೆ 5 ಎಂಪಿ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಸೆಲ್ಫಿ ಕ್ಯಾಮೆರಾ ಜೊತೆಗೆ LED ಫ್ಲ್ಯಾಷ್ ಅನ್ನು ಪಡೆದಿದೆ.

ಬಿಗ್ ಬ್ಯಾಟರಿ ಹೈಲೈಟ್‌

ಈ ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು. ಇದು USB ಟೈಪ್-C ಪೋರ್ಟ್‌ನಲ್ಲಿ 10W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್-ಸಿಮ್, 4G, ವೈಫೈ 802.11 b/g/n, ಹಾಟ್‌ಸ್ಪಾಟ್‌, ಬ್ಲೂಟೂತ್ 4.2, GPS, Glonass, ಮತ್ತು BeiDou ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಅಜುರೆ ಬ್ಲೂ, ಎಮರಾಲ್ಡ್ ಗ್ರೀನ್ ಮತ್ತು ನೈಟ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯ ಇದ್ದು, ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
attractive discord on Infinix smart 7 on flipkart big billion sale 2023. price, specifications and all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+