ನಿಜಕ್ಕೂ ಇದು ಗುಡ್‌ನ್ಯೂಸ್!..Vivo ಸಂಸ್ಥೆಯ ಈ ಸ್ಟೈಲಿಶ್ ಫೋನಿನ ಆಫರ್ ಬೆಲೆ ಎಷ್ಟು ಗೊತ್ತಾ?
ಆನ್‌ಲೈನ್ ಮೂಲಕ ಭಾರೀ ಡಿಸ್ಕೌಂಟ್ ದರದಲ್ಲಿ ನೂತನ ವಿವೋ (Vivo) ಮೊಬೈಲ್ ಖರೀದಿ ಮಾಡುವ ಯೋಚನೆ ಇದ್ದರೇ, ಅದಕ್ಕೆ ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಘೋಷಿಸಿರುವ ಫ್ಲ್ಯಾಗ್‌ಶಿಪ್ ಸೇಲ್ (Flipkart Flagship Sale) ಸೇಲ್ ನಿಮಗೆ ಉಪಯುಕ್ತ ಎನಿಸಬಹುದು. ಫ್ಲಿಪ್‌ಕಾರ್ಟ್‌ನ ಈ ಮೇಳದಲ್ಲಿ ವಿವೋ T3 5G ( Vivo T3 5G ) ಮೊಬೈಲ್ ಭಾರೀ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ವಿವೋ T3 5G ( Vivo T3 5G ) ಮೊಬೈಲ್ ನೇರವಾಗಿ ಶೇ. 13% ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 19,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ರಿಯಾಯಿತಿ ಕೂಡಾ ಸಿಗುತ್ತದೆ.

ಇನ್ನು ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸುವ ಸೌಲಭ್ಯ ಪಡೆದಿದೆ. ಅಲ್ಲದೇ ಇದು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ವಿವೋ T3 5G ( Vivo T3 5G ) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ T3 5G - ಫೀಚರ್ಸ್
ವಿವೋ T3 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಕೂಡಾ ಪಡೆದಿದೆ.
ವಿವೋ T3 5G ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ 8GB RAM, 128GB ಹಾಗೂ 256GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಇವೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸುವ ಸೌಲಭ್ಯ ಪಡೆದಿದೆ.
ವಿವೋ T3 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ.
ವಿವೋ T3 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್ ಆಯ್ಕೆಗಳನ್ನು ಪಡೆದುಕೊಂಡಿದೆ.


Click it and Unblock the Notifications








