Home
ಸುದ್ದಿಜಾಲ

ಕಡಿಮೆ ಬೆಲೆಗೆ ಜಬರ್ದಸ್ತ್‌ 5G ಫೋನ್‌ ಬೇಕಿದ್ರೆ, ಈ ಡಿಸ್ಕೌಂಟ್‌ ನಿಮಗೆ ಸೂಕ್ತ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬ್ಲ್ಯಾಕ್‌ ಫ್ರೈಡ್‌ ಮಾರಾಟ ಲೈವ್‌ ಇದೆ. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ M6 ಪ್ರೊ 5G ಮೊಬೈಲ್‌ ಅತ್ಯುತ್ತಮ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ. ಈ ವಿಶೇಷ ಸೇಲ್‌ನಲ್ಲಿ ಈ 5G ಫೋನ್‌ ಖರೀದಿಸುವ ಗ್ರಾಹಕರು ಬ್ಯಾಂಕ್‌ ಆಫರ್‌ ಮೂಲಕ ಮತ್ತಷ್ಟು ಡಿಸ್ಕೌಂಟ್‌ ಪಡೆಯಬಹುದು. ಈ ಫೋನ್‌ 50 ಮೆಗಾಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾ ಪಡೆದಿದೆ.

ಹೌದು, ದಿಗ್ಗಜ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಪೊಕೊ M6 ಪ್ರೊ 5G ಫೋನ್‌ ಶೇ. 25% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 4GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 11,999ರೂ. ಗಳ ಆಫರ್‌ ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು.

ಕಡಿಮೆ ಬೆಲೆಗೆ ಜಬರ್ದಸ್ತ್‌ 5G ಫೋನ್‌ ಬೇಕಿದ್ರೆ, ಈ ಡಿಸ್ಕೌಂಟ್‌ ನಿಮಗೆ ಸೂಕ್ತ!

ಪೊಕೊ M6 ಪ್ರೊ 5G ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ. ಅಲ್ಲದೇ 50 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾ ಪಡೆದಿದೆ. ಹಾಗೆಯೇ ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ ಸೌಲಭ್ಯ ಹೊಂದಿದ್ದು, ಇದು ಪವರ್‌ ಬ್ಲ್ಯಾಕ್ ಹಾಗೂ ಫಾರೆಸ್ಟ್‌ ಗ್ರೀನ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗದರೇ ಪೊಕೊ M6 ಪ್ರೊ 5G ಮೊಬೈಲ್‌ನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಪೊಕೊ M6 ಪ್ರೊ 5G ಫೀಚರ್ಸ್‌

ಪೊಕೊ M6 ಪ್ರೊ 5G ಮೊಬೈಲ್‌ 6.79 ಇಂಚಿನ ಫುಲ್‌ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2460 x 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಇದರ ಜೊತೆಗೆ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಪಡೆದಿದ್ದು, 91% ಸ್ಕ್ರೀನ್ ಟು ಬಾಡಿ ಅನುಪಾತ ಹಾಗೂ 550 nits ಬ್ರೈಟ್‌ನೆಸ್‌ ಸೌಲಭ್ಯ ಹೊಂದಿದೆ. ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಸಹ ಇದೆ.

ಪೊಕೊ M6 ಪ್ರೊ 5G ಮೊಬೈಲ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ ಸೌಲಭ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಸಹ ಒಳಗೊಂಡಿದೆ. ಹಾಗೆಯೇ ಇದು 6GB + 64GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಇದೆ.

ಪೊಕೊ M6 ಪ್ರೊ 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿರುವ ಜೊತೆಗೆ ಎಲ್‌ಇಡಿ ಫ್ಲಾಶ್ ಲೈಟ್‌ ಆಯ್ಕೆ ಕೂಡಾ ಒಳಗೊಂಡಿದೆ. ಇನ್ನು ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್‌ ಆಯ್ಕೆ ಪಡೆದಿದೆ. ಹಾಗೆಯೇ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ.

ಪೊಕೊ M6 ಪ್ರೊ 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ಗೆ ಸಪೋರ್ಟ್‌ ಪಡೆದುಕೊಂಡಿದೆ. ಇದರ ಜೊತೆಗೆ ಈ ಫೋನ್‌ 8.17mm ಸ್ಲಿಮ್ ರಚನೆ ಹೊಂದಿದ್ದು, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್‌ ಆಯ್ಕೆ ಸೌಲಭ್ಯ ಹೊಂದಿದೆ.

Best Mobiles in India

English summary
Attractive price cut on POCO M6 Pro 5G on flipkart website. check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+