Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಹೈ ಎಂಡ್‌ ಫೋನಿನ ಬೆಲೆಯಲ್ಲಿ ಜಬರ್ದಸ್ತ್‌ ಇಳಿಕೆ!

ಪ್ರಮುಖ ಲೀಡಿಂಗ್ ಮೊಬೈಲ್‌ ಬ್ರ್ಯಾಂಡ್‌ಗಳ ಪೈಕಿ ದಕ್ಷಿಣ ಕೊರಿಯಾದ ಸ್ಯಾಮ್‌ಸಂಗ್‌ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಈ ಸಂಸ್ಥೆಯು ಬಜೆಟ್‌ ಲೆವೆಲ್‌ ಹಾಗೂ ಹೈ ಎಂಡ್‌ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಇನ್ನು ಸ್ಯಾಮ್‌ಸಂಗ್‌ ಸಂಸ್ಥೆಯ ಗ್ಯಾಲಕ್ಸಿ F ಸರಣಿಯ ಫೋನ್‌ಗಳ ಕೂಡಾ ಜನಪ್ರಿಯತೆ ಪಡೆದಿವೆ. ಆ ಪೈಕಿ ಸದ್ಯ ರೆಡ್ಮಿ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ ಭರ್ಜರಿ ರಿಯಾಯಿತಿ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ ಶೇ. 36% ರಷ್ಟು ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 8 GB RAM + 256 GB ಸ್ಟೋರೇಜ್ ವೇರಿಯಂಟ್‌ 22,999ರೂ. ಗಳ ಆಫರ್‌ ಬೆಲೆ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್‌ Exynos 1380 ಪ್ರೊಸೆಸರ್‌ ಪವರ್‌ ವೇಗವನ್ನು ಪಡೆದುಕೊಂಡಿದ್ದು, 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ನ ಈ ಹೈ ಎಂಡ್‌ ಫೋನಿನ ಬೆಲೆಯಲ್ಲಿ ಜಬರ್ದಸ್ತ್‌ ಇಳಿಕೆ!

ಅಂದಹಾಗೆ ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದ್ದು, ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಈ ಫೋನ್‌ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಪಿ ಕ್ಯಾಮೆರಾ ಅನ್ನು ಪಡೆದುಕೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 85.0% ಸ್ಕ್ರಿನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು 20:9 ರಚನೆಯ ಅನುಪಾತದಲ್ಲಿದ್ದು, 393 ppi ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ Exynos 1380 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಪಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳನ್ನು ನೀಡಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಹೊಂದಿದೆ.

Best Mobiles in India

English summary
Attractive Price cut on Samsung Galaxy F54 5G in India. Check offer price, features and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+