ಒಪ್ಪೋದ ಈ 50ಎಂಪಿ ಕ್ಯಾಮೆರಾ ಫೋನಿಗೆ ಈಗ ಬಿಗ್ ಡಿಸ್ಕೌಂಟ್!..ಗ್ರಾಹಕರಿಗೆ ಖುಷಿ!
ಒಪ್ಪೋ ಮೊಬೈಲ್ ಸಂಸ್ಥೆಯ ರೆನೋ ಸರಣಿಯ ಫೋನ್‌ಗಳು ಮೊಬೈಲ್ ಮಾರುಕಟ್ಟೆಯಲ್ಲಿ ಆಕರ್ಷಕ ಎನಿಸಿಕೊಂಡಿವೆ. ಅವುಗಳ ಪೈಕಿ ಒಪ್ಪೋ ರೆನೋ 11 5G ಫೋನ್ ಮೀಡ್‌ರೇಂಜ್ ಬೆಲೆಯಲ್ಲಿ ಗ್ರಾಹಕರ ಗಮನ ಆಕರ್ಷಿಸಿದೆ. ಇದೀಗ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಒಪ್ಪೋ ರೆನೋ 11 5G ಮೊಬೈಲ್ ಶೇ. 28% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 27,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಲು ಚಾನ್ಸ್ ಇದೆ. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್ನಷ್ಟು ಡಿಸ್ಕೌಂಟ್ ಸಹ ಸಿಗಲಿವೆ.

ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಹ ಹೊಂದಿದೆ. ಇನ್ನುಳಿದಂತೆ ಒಪ್ಪೋ ರೆನೋ 11 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಒಪ್ಪೋ ರೆನೋ 11 5G ಫೀಚರ್ಸ್ ಹೀಗಿವೆ
ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನ್ 6.70 ಇಂಚಿನ OLED ಕರ್ವ್ಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇನ್ನು ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಒಳಗೊಂಡಿದೆ. ಅಲ್ಲದೇ ಡಿಸ್‌ಪ್ಲೇ 950 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್ ಅನ್ನು ಪಡೆದಿದೆ.
ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನ್ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ಪವರ್ ಪಡೆದಿದ್ದು, ಆಂಡ್ರಾಯ್ಡ್ 14 ಆಧಾರಿತ ಕಲರ್ OS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 12 GB RAM ಮತ್ತು 256 GB ಹಾಗೂ 8 GB RAM + 128 GB ಆಂತರೀಕ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ.
ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ LYT600 ಸೆನ್ಸಾರ್ ಅನ್ನು ಪಡೆದಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ಇದ್ದು, ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಒಳಗೊಂಡಿದೆ. ಇದರೊಂದಿಗೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.
ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಇದು 67W ಸೂಪರ್ ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಪಡೆದಿದೆ. ಅಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ - ಫೈ 6, ಬ್ಲೂಟೂತ್ 5.3, GPS / A GPS, NFC, OTG, ಮತ್ತು ಯುಎಸ್‌ಬಿ ಟೈಪ್ - C ಪೋರ್ಟ್ ಅನ್ನು ಒಳಗೊಂಡಿದೆ.


Click it and Unblock the Notifications