Xiaomi ಸಂಸ್ಥೆಯ ಈ ಹೈ ಎಂಡ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ; ಗ್ರಾಹಕರಿಗೆ ಖುಷಿ!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ದೀಪಾವಳಿ ಹಬ್ಬದ ಅಂಗವಾಗಿ ಸಖತ್ ಡಿಸ್ಕೌಂಟ್‌ಗಳನ್ನು ಘೋಷಣೆ ಮಾಡಿದೆ. ಆ ಪೈಕಿ ಶಿಯೋಮಿ ಸಂಸ್ಥೆಯು ಶಿಯೋಮಿ 14 CIVI ಮೊಬೈಲ್ ಬೊಂಬಾಟ್ ಡಿಸ್ಕೌಂಟ್ ದರದಲ್ಲಿ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 SoC ಪ್ರೊಸೆಸರ್ ಪವರ್ ಪಡೆದಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಶಿಯೋಮಿ 14 CIVI (Xiaomi 14 CIVI) ಫೋನ್ ಶೇ. 25% ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB + 256 GB ವೇರಿಯಂಟ್ 40,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಗ್ರಾಹಕರು ಲಭ್ಯ ಇರುವ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಂಡರೆ, ಈ ಮೊಬೈಲ್ ಅನ್ನು ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ.

ಅಂದಹಾಗೆ ಈ ಮೊಬೈಲ್ 32 ಮೆಗಾಪಿಕ್ಸಲ್‌ನ ಎರಡು ಡ್ಯುಯಲ್ ಸೆಲ್ಫಿ ಕ್ಯಾಮೆರಾ ಇವೆ. ಜೊತೆಗೆ ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ. ಹಾಗೆಯೇ ಇನ್ನುಳಿದಂತೆ ಶಿಯೋಮಿ 14 CIVI ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಶಿಯೋಮಿ 14 CIVI ಫೀಚರ್ಸ್ ಹೀಗಿವೆ
ಶಿಯೋಮಿ 14 CIVI ಫೋನ್ 6.55 ಇಂಚಿನ 1.5K ಕರ್ವ್ಡ್ AMOLED ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಸೌಲಭ್ಯ ಇದೆ. ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು 446ppi ಪಿಕ್ಸೆಲ್ ಸಾಂದ್ರತೆ ಮತ್ತು 3,000 ನಿಟ್ಸ್ ಬ್ರೈಟ್‌ನೆಸ್ ಹೊಂದಿದೆ. ಅಲ್ಲದೇ ಇದು HDR10+, ಡಾಲ್ಬಿ ವಿಷನ್ ಅನ್ನು ಬೆಂಬಲಿಸುತ್ತದೆ ಮತ್ತು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಪಡೆದಿದೆ.
ಶಿಯೋಮಿ 14 CIVI ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 8GB + 256GB ಮತ್ತು 12GB + 512GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ.
ಶಿಯೋಮಿ 14 CIVI ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಇದರೊಂದಿಗೆ ತೃತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಆಯ್ಕೆ ಅನ್ನು ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 32 ಮೆಗಾಪಿಕ್ಸಲ್ ಮತ್ತು 32 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿವೆ.
ಶಿಯೋಮಿ 14 CIVI ಫೋನ್ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 67W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಇದು ಬ್ಯಾಟರಿ ಚಾರ್ಜ್ ಮಾಡಿದ 30 ನಿಮಿಷಗಳಲ್ಲಿ 80 ಪ್ರತಿಶತದಷ್ಟು ಚಾರ್ಜ್ ಅನ್ನು ನೀಡುತ್ತದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ5G, Wi-Fi 6, NFC, ಬ್ಲೂಟೂತ್ 5.4, GPS, ಗೆಲಿಲಿಯೋ, ಗ್ಲೋನಾಸ್, Beidou, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.


Click it and Unblock the Notifications








