ವೇಗದ ಚಾರ್ಜಿಂಗ್‌ನ ಈ ಫೋನಿಗೆ ಬಿಗ್ ಡಿಸ್ಕೌಂಟ್!..108ಎಂಪಿ ಕ್ಯಾಮೆರಾ ಇದೆ!
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಪ್ರಾರಂಭಿಸಿರುವ ಬಿಗ್ ಬಿಲಿಯನ್ ಡೇಸ್ ಸೇಲ್ ಈಗ ಲೈವ್ ನಡೆಯುತ್ತಿದೆ. ಈ ಸೇಲ್‌ನಲ್ಲಿ ಫೋನ್, ಲ್ಯಾಪ್‌ಟಾಪ್, ಸ್ಮಾರ್ಟ್ ವಾಚ್ ಸೇರಿದಂತೆ ಇತರೆ ಎಲ್ಲ ಉತ್ಪನ್ನಗಳಿಗೂ ಡಿಸ್ಕೌಂಟ್ ನೀಡಲಾಗಿದೆ. ಆದರೆ ಪ್ರಮುಖ ಸಂಸ್ಥೆಗಳ ಫೋನ್‌ಗಳು ಬೊಂಬಾಟ್ ಆಫರ್‌ನಲ್ಲಿ ಕಾಣಿಸಿಕೊಂಡಿದ್ದು, ರಿಯಲ್‌ಮಿ 11 5G ಫೋನ್ ಕೊಡುಗೆ ಸಹ ಗ್ರಾಹಕರನ್ನು ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಬಿಗ್ ಬಿಲಿಯನ್ ಡೇಸ್ ಸೇಲ್ನಲ್ಲಿ ರಿಯಲ್‌ಮಿ 11 5G ಮೊಬೈಲ್ ಶೇ. 19% ರಷ್ಟು ರಿಯಾಯಿತಿ ಪಡೆದಿದ್ದು, 16,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ 8 GB RAM + 128 GB ವೇರಿಯಂಟ್ ಫೋನ್ ಅನ್ನು ಗ್ರಾಹಕರು ಬ್ಯಾಂಕ್, ಎಕ್ಸ್‌ಚೇಂಜ್ ಹಾಗೂ ಇತರೆ ಆಫರ್ ಸೇರಿ 15,999ರೂ. ಗಳ ದರದಲ್ಲಿ ಖರೀದಿ ಮಾಡಬಹುದು.

ಅಂದಹಾಗೆ ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್ ಪಡೆದಿದ್ದು, 8GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇದರ ಜೊತೆಗೆ 108 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಸಹ ಪಡೆದಿದೆ. ಹಾಗಾದರೇ ರಿಯಲ್‌ಮಿ 11 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಮತ್ತು ರಚನೆ ಹೇಗಿದೆ?
ರಿಯಲ್‌ಮಿ 11 5G ಮೊಬೈಲ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.
ಹೇಗಿದೆ ಪ್ರೊಸೆಸರ್ ಕಾರ್ಯವೈಖರಿ
ರಿಯಲ್‌ಮಿಯ ಈ ಮೊಬೈಲ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸ್ಟೋರೇಕ್ ಸಾಮರ್ಥ್ಯವನ್ನು ಹೆಚ್ಚಿಸಬಹುದು. ಅಲ್ಲದೇ RAM ಅನ್ನು ವಿಸ್ತರಿಸಬಹುದಾಗಿದೆ.

ಅಧಿಕ ಸೆನ್ಸಾರ್ ಕ್ಯಾಮೆರಾ ರಚನೆ
ಈ ಮೊಬೈಲ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ ಸಹ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಬಿಗ್ ಬ್ಯಾಟರಿ ಬ್ಯಾಕ್‌ಅಪ್
ರಿಯಲ್‌ಮಿ 11 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 67W ಸೂಪರ್‌ವೋಕ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್/ಡ್ಯುಯಲ್ ಸ್ಟ್ಯಾಂಡ್‌ಬೈ 5G ಕನೆಕ್ಟಿವಿಟಿ, 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.2, NFC, GPS, A-GPS ಮತ್ತು USB ಟೈಪ್-ಸಿ ಪೋರ್ಟ್ ಆಯ್ಕೆಗಳನ್ನು ಒಳಗೊಂಡಿದೆ.
ಮೆಮೊರಿ, ಕಲರ್ ಮತ್ತು ಲಭ್ಯತೆ
ರಿಯಲ್‌ಮಿ 11 5G ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಇದು ಡಾನ್ ಗೋಲ್ಡ್ ಮತ್ತು ಮೂನ್ ನೈಟ್ ಡಾರ್ಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಗ್ರಾಹಕರು ಫ್ಲಿಪ್‌ಕಾರ್ಟ್ ತಾಣದ ಮೂಲಕ ಖರೀದಿಸಬಹುದು.


Click it and Unblock the Notifications








