ಇತ್ತೀಚಿಗೆ ಬಿಡುಗಡೆಯಾದ ಈ ವಿವೋ ಫೋನ್ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್!
ವಿವೋ ಮೊಬೈಲ್ ಕಂಪನಿಯು ಭಿನ್ನ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ವಿವೋ Y200 5G ಫೋನ್ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಈ ಫೋನ್ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಅಮೆಜಾನ್ ಇ ಕಾಮರ್ಸ್‌ನಲ್ಲಿ ವಿವೋ ಸಂಸ್ಥೆಯ ವಿವೋ Y200 5G ಮೊಬೈಲ್ ಶೇ. 21% ರಷ್ಟು ಡಿಸ್ಕೌಂಟ್ ಪಡೆದಿದೆ. ಇನ್ನು ಈ ಫೋನಿನ 8GB RAM + 128GB ವೇರಿಯಂಟ್ ಬೆಲೆಯು 27,999ರೂ. ಆಗಿದೆ. ಆದರೆ ಅಮೆಜಾನ್ ಕೊಡುಗೆಯಲ್ಲಿ ಈಗ 21,999ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಅದಲ್ಲದೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ದೊರೆಯುತ್ತದೆ.

ಅಂದಹಾಗೆ ವಿವೋ ಸಂಸ್ಥೆಯ ವಿವೋ Y200 5G ಮೊಬೈಲ್ ಸ್ನಾಪ್‌ಡ್ರಾಗನ್ 4 ಜೆನ್ 1 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗಾದರೆ ವಿವೋ Y200 5G ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಫೀಚರ್ಸ್ ಹೀಗಿವೆ
ವಿವೋ Y200 5G ಫೋನ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಹಾಗೂ 800 nits ಬ್ರೈಟ್ನೆಸ್ ಅನ್ನು ಸಪೋರ್ಟ್ ಪಡೆದಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 394 PPI ಪಿಕ್ಸಲ್ ಸಾಂದ್ರತೆ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಫೀಚರ್ಸ್ ಹೀಗಿವೆ
ಈ ಮೊಬೈಲ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 ಜೆನ್ 1 SoC ಪ್ರೊಸೆಸರ್ ಪವರ್ ಅನ್ನು ಪಡೆದಿರುವ ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 8GB RAM + 128GB ಆಂತರೀಕ ಸ್ಟೋರೇಜ್ ಅನ್ನು ಹೊಂದಿದ್ದು, ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ.

ಕ್ಯಾಮೆರಾ ಸೆನ್ಸಾರ್ ಮಾಹಿತಿ
ವಿವೋದ ಈ ಹೊಸ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಬ್ಯಾಟರಿ ಸಾಮರ್ಥ್ಯ ಎಷ್ಟಿದೆ
ವಿವೋ ಸಂಸ್ಥೆಯ ಈ ಫೋನ್ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ನೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಪವರ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್ ಸಿ, ಜಿಪಿಎಸ್ ಮತ್ತು ಒಟಿಜಿ ಆಯ್ಕೆಗಳನ್ನು ಪಡೆದುಕೊಂಡಿದೆ.
ಮೆಮೊರಿ ಹಾಗೂ ಕಲರ್ ಮಾಹಿತಿ
ವಿವೋ Y200 5G ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಪಡೆದಿದೆ. ಇನ್ನು ಈ ಫೋನ್ ಗೋಲ್ಡ್ ಹಾಗೂ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








