Home
ಸುದ್ದಿಜಾಲ

ಆಕರ್ಷಕ ಲುಕ್‌ ಮೂಲಕ ಗಮನ ಸೆಳೆದಿರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಪ್ರಸ್ತುತ ಇ ಕಾಮರ್ಸ್‌ ವೆಬ್‌ಸೈಟ್‌ಗಳು ಆಫರ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಅವುಗಳ ಪೈಕಿ ದಿಗ್ಗಜ ಆನ್‌ಲೈನ್‌ ಶಾಪಿಂಗ್‌ ತಾಣ ಅಮೆಜಾನ್‌ ಕೂಡಾ ಮೊಬೈಲ್‌ಗಳಿಗೆ ಒಂದಿಲ್ಲೊಂದು ಬೊಂಬಾಟ್‌ ಕೊಡುಗೆ ನೀಡುವ ಮೂಲಕ ಹೆಚ್ಚಿನ ಖರೀದಿದಾರರನ್ನು ಆಕರ್ಷಿಸುತ್ತ ಮುನ್ನಡೆದಿದೆ. ಇದೀಗ ಅಮೆಜಾನ್‌ ತಾಣದಲ್ಲಿ ಟೆಕ್ನೋ ಪೋವಾ 5 ಪ್ರೊ 5G (TECNO Pova 5 Pro 5G) ಮೊಬೈಲ್‌ ಅತ್ಯುತ್ತಮ ಕೊಡುಗೆಯಲ್ಲಿ ಖರೀದಿಗೆ ಲಭ್ಯ ಇದ್ದು, ಮೊಬೈಲ್‌ ಪ್ರಿಯರಿಗೆ ಖುಷಿ ತಂದಿದೆ.

ಹೌದು, ಇ ಕಾಮರ್ಸ್‌ ದೊಡ್ಡಣ್ಣ ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಟೆಕ್ನೋ ಪೋವಾ 5 ಪ್ರೊ 5G (TECNO Pova 5 Pro 5G) ಮೊಬೈಲ್‌ ಶೇ. 25% ರಷ್ಟು ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 8GB RAM + 128 GB ವೇರಿಯಂಟ್‌ 14,999 ರೂ. ಗಳ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅದಾಗ್ಯೂ, ಗ್ರಾಹಕರಿಗೆ ಇತರೆ ಕೆಲವು ಆಫರ್‌ ಒಳಗೊಂಡಂತೆ ಈ ಫೋನ್‌ ಅನ್ನು ಮತ್ತಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು.

ಆಕರ್ಷಕ ಲುಕ್‌ ಮೂಲಕ ಗಮನ ಸೆಳೆದಿರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಇನ್ನು ಟೆಕ್ನೋ ಪೋವಾ 5 ಪ್ರೊ 5G ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದೆ. ಹಾಗಾದರೆ ಟೆಕ್ನೋ ಪೋವಾ 5 ಪ್ರೊ 5G ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪೋವಾ 5 ಪ್ರೊ - ಫೀಚರ್ಸ್‌ ಮಾಹಿತಿ

ಟೆಕ್ನೋ ಪೋವಾ 5 ಪ್ರೊ ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 396 ಪಿಪಿಐ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಸಪೋರ್ಟ್ ಮಾಡುತ್ತದೆ.

ಟೆಕ್ನೋ ಪೋವಾ 5 ಪ್ರೊ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಆಧಾರಿತ HiOS 13 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ ಈ ಫೋನ್‌ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದುಕೊಂಡಿದೆ.

ಟೆಕ್ನೋ ಪೋವಾ 5 ಪ್ರೊ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಬಲದಲ್ಲಿ ಇದೆ. ದ್ವಿತೀಯ ಕ್ಯಾಮೆರಾ AI ಸಪೋರ್ಟ್ ನಲ್ಲಿ ಇದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ನ ರಿಯರ್‌ ಪ್ಯಾನಲ್‌ನಲ್ಲಿ ನೋಟಿಫಿಕೇಶನ್‌ಗಾಗಿ RGB LED ಲೈಟ್‌ ಒಳಗೊಂಡಿರುವ ಹೊಸ 'ಆರ್ಕ್ ಇಂಟರ್ಫೇಸ್' ಅನ್ನು ನೀಡಿಲಾಗಿದೆ.

ಟೆಕ್ನೋ ಪೋವಾ 5 ಪ್ರೊ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದು 68W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್, NFC, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್ C ಪೋರ್ಟ್ ಅನ್ನು ಸಹ ಪಡೆದಿದೆ.

Best Mobiles in India

English summary
Awesome Price Cut on TECNO Pova 5 Pro 5G on Amazon website. know offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+