Home
ಸುದ್ದಿಜಾಲ

ವಿವೋ ಸಂಸ್ಥೆಯ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ ಬೆಲೆಗೆ ಲಭ್ಯ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಮೊಬೈಲ್‌ಗಳಿಗೆ ಕೊಡುಗೆ ಇದ್ದೆ ಇರುತ್ತದೆ. ಸದ್ಯ ವಿವೋ T3 5G ಮೊಬೈಲ್‌ ಅತ್ಯುತ್ತಮ ಡಿಸ್ಕೌಂಟ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆ. ಅಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಬ್ಯಾಂಕ್‌ ಆಫರ್‌ ಮೂಲಕ ಮತ್ತಷ್ಟು ಡಿಸ್ಕೌಂಟ್‌ ಪಡೆಯಬಹುದು. ಈ ಫೋನ್‌ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ.

ಹೌದು, ದಿಗ್ಗಜ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ವಿವೋ T3 5G ಫೋನ್‌ ಶೇ. 19% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 18,499ರೂ. ಗಳ ಆಫರ್‌ ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು.

ವಿವೋ ಸಂಸ್ಥೆಯ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ ಬೆಲೆಗೆ ಲಭ್ಯ!

ಅಲ್ಲದೇ ವಿವೋದ ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾ ಪಿಕ್ಸಲ್‌ ಮೊದಲ ಕ್ಯಾಮೆರಾ ರಚನೆ ಸಹ ಒಳಗೊಂಡಿದೆ. ಇನ್ನು ಗ್ರಾಹಕರು ಇದನ್ನು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಲು ಅವಕಾಶ ಇದೆ. ಇನ್ನುಳಿದಂತೆ ವಿವೋ T3 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 5G ಫೋನ್‌ ಫೀಚರ್ಸ್‌ ಹೀಗಿವೆ

ವಿವೋ T3 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸೌಲಭ್ಯ ಕೂಡಾ ಪಡೆದಿದೆ.

ವಿವೋ T3 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ 8GB RAM, 128GB ಹಾಗೂ 256GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇವೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ವಿಸ್ತರಿಸುವ ಸೌಲಭ್ಯ ಪಡೆದಿದೆ.

ವಿವೋ T3 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ.

ವಿವೋ T3 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಕುಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ವಿವೋ T3 5G ಸ್ಮಾರ್ಟ್‌ಫೋನ್‌ 8GB + 128GB ಮಾಡೆಲ್‌ ಹಾಗೂ 8GB + 256GB ಮಾಡೆಲ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಇದು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Awesome price cut on vivo T3 5G on flipkart website. check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+