Home
ಸುದ್ದಿಜಾಲ

ಬಜೆಟ್‌ ಬೆಲೆಯ ಈ 5G ಫೋನ್‌ ಈಗ ಮತ್ತಷ್ಟು ಅಗ್ಗ!..ಕರ್ವ್ಡ್‌ ಡಿಸ್‌ಪ್ಲೇ ಸೌಲಭ್ಯ!

ಜನಪ್ರಿಯ ಲಾವಾ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಮೊಬೈಲ್‌ ಮಾರುಕಟ್ಟೆಯಲ್ಲಿ ಗ್ರಾಹಕರ ಆಕರ್ಷಣೆ ಪಡೆದಿದೆ. ಆ ಪೈಕಿ ಲಾವಾ ಅಗ್ನಿ 2 5G ಮೊಬೈಲ್‌ ಅದರ ಡಿಸೈನ್‌ ಹಾಗೂ ಬೆಲೆಯಿಂದಾಗಿ ಮತ್ತಷ್ಟು ಆಕರ್ಷಕವಾಗಿ ಗುರುತಿಸಿಕೊಂಡಿದೆ. ಆದರೆ, ಲಾವಾ ಅಗ್ನಿ 2 5G ಅಮೆಜಾನ್ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಪ್ರಮುಖ ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಲಾವಾ ಅಗ್ನಿ 2 5G ಮೊಬೈಲ್‌ ಶೇ. 21% ರಷ್ಟು ನೇರ ರಿಯಾಯಿತಿ ಹೊಂದಿದೆ. ಈ ಮೊಬೈಲ್‌ 8GB RAM + 256GB ವೇರಿಯಂಟ್‌ ಬೆಲೆಗೆ 20,499. ಸದ್ಯ ಅಮೆಜಾನ್‌ ಆಫರ್‌ನಲ್ಲಿ ಈ ಫೋನ್‌ 18,999ರೂ. ಗಳಿಗೆ ಗ್ರಾಹಕರು ಖರೀದಿಗೆ ಕಾಣಿಸಿಕೊಂಡಿದೆ. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಸಿಗಲಿದೆ.

ಬಜೆಟ್‌ ಬೆಲೆಯ ಈ 5G ಫೋನ್‌ ಈಗ ಮತ್ತಷ್ಟು ಅಗ್ಗ!..ಕರ್ವ್ಡ್‌ ಡಿಸ್‌ಪ್ಲೇ ಸೌಲಭ್ಯ!

ಅಂದಹಾಗೆ ಲಾವಾ ಅಗ್ನಿ 2 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಸೌಲಬ್ಯ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆ ಲ್ ಆಗಿದೆ. ಇದರ ಜೊತೆಗೆ 4,700mAh ಜೊತೆಗೆ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗಾದರೇ ಲಾವಾ ಅಗ್ನಿ 2 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಅಗ್ನಿ 2 5G ಫೋನ್‌ ಫೀಚರ್ಸ್‌

ಲಾವಾ ಅಗ್ನಿ 2 5G ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರುವ ಜೊತೆಗೆ. ಈ ಡಿಸ್‌ಪ್ಲೇ 2220 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ಸಪೋರ್ಟ್‌ ನೊಂದಿಗೆ ಲಭ್ಯ ಇದೆ. ಅಲ್ಲದೇ HDR, HDR 10 ಮತ್ತು HDR 10+ ಅನ್ನು ಸಪೋರ್ಟ್‌ ಮಾಡಲಿದ್ದು, ಫೋನ್ ಮ್ಯಾಟ್ ಫಿನಿಶ್ ಮತ್ತು ಡಬಲ್-ರೀನ್‌ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಲಾವಾ ಅಗ್ನಿ 2 5G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಪವರ್‌ ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಬೆಂಬಲ ಪಡೆದಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದರ ಜೊತೆಗೆ 16GB ವರೆಗೆ ವರ್ಚುವಲ್ ವಿಸ್ತರಣೆಗೆ ಸಪೋರ್ಟ್‌ ಸಹ ಪಡೆದಿದೆ.

ಲಾವಾ ಸಂಸ್ಥೆಯ ಈ 5G ಮೊಬೈಲ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ ನಲ್ಲಿ ಇದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸಲ್‌ ಹಾಗೂ ಮೂರುನೇ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸೆನ್ಸಾರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿ ಇದೆ.

ಲಾವಾ ಸಂಸ್ಥೆಯ ಈ ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಸೌಲಭ್ಯ ಇದೆ. ಇದರಿಂದ ಈ ಮೊಬೈಲ್‌ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್‌ ಪಡೆಯುವ ಸೌಲಭ್ಯ ಇದೆ. ಅಲ್ಲದೇ ಈ ಫೋನ್‌ 5G ಯ 13 ಬ್ಯಾಂಡ್‌ಗಳನ್ನು ಸಹ ಬೆಂಬಲ ಮಾಡುತ್ತದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

Best Mobiles in India

English summary
Awesome price down on Lava Agni 2 5G on amazon India. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+