Home
ಸುದ್ದಿಜಾಲ

ಅಗ್ಗದ ದರದಲ್ಲಿ 6000mAh ಬ್ಯಾಟರಿ ಪಡೆದಿರುವ ಈ ಫೋನ್‌ ಬೆಲೆಯಲ್ಲಿ ಇಳಿಕೆ!

ಲೀಡಿಂಗ್‌ ಇ ಕಾಮರ್ಸ್ ತಾಣ ಎಂದು ಗುರುತಿಸಿಕೊಂಡಿರುವ ಅಮೆಜಾನ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಅಡ್ಡಾ ಆಗಿದೆ. ಇನ್ನು ಈ ಸಂಸ್ಥೆಯು ಕೆಲವು ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ಘೋಷಿಸುತ್ತ ಖರೀದಿದಾರರನ್ನು ತನ್ನತ್ತ ಸೆಳೆಯುತ್ತ ಸಾಗಿದೆ. ಸದ್ಯ ಅಮೆಜಾನ್‌ನಲ್ಲಿ ಹಾನರ್‌ ಕಂಪನಿಯ ಮೊಟೊ G24 ಪವರ್‌ (Motorola G24 Power) ಸ್ಮಾರ್ಟ್‌ಫೋನ್‌ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ವಾವ್‌ ಎನ್ನುವಂತೆ ಮಾಡಿದೆ. ಇನ್ನು ಮೊಟೊ ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಹಿಲಿಯೋ G85 12nm ಪ್ರೊಸೆಸರ್ ಪವರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಮೊಟೊ G24 ಪವರ್‌ ಮೊಬೈಲ್‌ ಶೇ. 26% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 4GB RAM + 128GB ವೇರಿಯಂಟ್‌ 8,865ರೂ. ಗಳ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಖರೀದಿದಾರರಿಗೆ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆ ಮತ್ತು ಕೆಲವು ಆಯ್ದ ಬ್ಯಾಂಕ್‌ಗಳಿಂದ ಬೊಂಬಾಟ್‌ ರಿಯಾಯಿತಿ ಕೂಡಾ ಸಿಗಲಿವೆ.

ಅಗ್ಗದ ದರದಲ್ಲಿ 6000mAh ಬ್ಯಾಟರಿ ಪಡೆದಿರುವ ಈ ಫೋನ್‌ ಬೆಲೆಯಲ್ಲಿ ಇಳಿಕೆ!

ಇನ್ನು ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G85 12nm ಪ್ರೊಸೆಸರ್ ಸೌಲಭ್ಯ ಪಡೆದಿದೆ. ಇದರೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿ ಬಲ ಪಡೆದಿದ್ದು, 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಮೊಟೊ G24 ಪವರ್‌ ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಮೊಟೊ G24 ಪವರ್‌ - ಫೀಚರ್ಸ್‌

ಮೊಟೊ G24 ಪವರ್‌ ಫೋನ್‌ 6.6 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಫೋನ್ 90Hz ರಿಫ್ರೆಶ್ ರೇಟ್‌ ಆಯ್ಕೆ ಜೊತೆಗೆ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮಾಸ್ ಸೌಲಭ್ಯ ಸಹ ಪಡೆದಿದೆ. ಅಲ್ಲದೆ ಈ ಫೋನ್‌ 537 ನಿಟ್ಸ್‌ ಬ್ರೈಟ್‌ನೆಸ್‌ ಆಯ್ಕೆ ಇದೆ.

ಮೊಟೊ G24 ಪವರ್‌ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G85 12nm ಪ್ರೊಸೆಸರ್ ಮೂಲಕ ಕೆಲಸ ಮಾಡಲಿದ್ದು, ಆಂಡ್ರಾಯ್ಡ್‌ 14 ಅನ್ನು ಸಪೋರ್ಟ್ ಇದೆ. ಇದಲ್ಲದೇ 4 GB RAM + 128 GB ಹಾಗೂ 8GB + 128GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ಹೆಚ್ಚಿಗೆ ಮಾಡಿಕೊಳ್ಳಲು ಚಾನ್ಸ್‌ ಸಹ ಇದೆ.

ಮೊಟೊ G24 ಪವರ್‌ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಈ ಪೋನಿನ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದ್ದು, ಇದೂ ಸಹ ಎಲ್‌ಇಡಿ ಫ್ಲ್ಯಾಶ್‌ ಸಪೋರ್ಟ್‌ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್‌ ಕ್ಯಾಮೆರಾ ನೀಡಲಾಗಿದೆ.

ಮೊಟೊ G24 ಪವರ್‌ ಫೋನ್‌ 6,000mAh ಬ್ಯಾಟರಿ ಜೊತೆಗೆ 33W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.0, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, 3.5 ಎಂಎಂ ಆಡಿಯೊ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆಗಳನ್ನು ಒಳಗೊಂಡಿದೆ.

ಅಂದಹಾಗೆ ಈ ಮೊಬೈಲ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 4GB + 128GB ಹಾಗೂ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಸಾಮರ್ಥ್ಯದಲ್ಲಿ ಇವೆ. ಇದರ ಜೊತೆಗೆ 8GB ವರ್ಚುವಲ್‌ RAM ಅವಕಾಶವು ಇದೆ. ಇನ್ನು ಈ ಫೋನ್ ಮ್ಯಾಟ್ ಚಾರ್ಕೋಲ್, ಐಸ್ ಗ್ರೀನ್, ಬ್ಲೂಬೆರ್ರಿ ಮತ್ತು ಪಿಂಕ್ ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Awesome price drop on Motorola G24 Power in Amazon ecommerce. check deals, price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+