Home
ಸುದ್ದಿಜಾಲ

ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ ಖರೀದಿಗೆ ಇದಕ್ಕಿಂತ ಬೆಸ್ಟ್‌ ಆಫರ್‌ ಬೇಕಾ?

ಪ್ರಮುಖ ಇ ಕಾಮರ್ಸ್‌ ತಾಣ ಆಗಿರುವ ಅಮೆಜಾನ್‌ನಲ್ಲಿ ಮೊಬೈಲ್‌ಗಳಿಗೆ ಏನಾದರೊಂದು ವಿಶೇಷ ರಿಯಾಯಿತಿ ಲಭ್ಯ ಇರುತ್ತದೆ. ಸದ್ಯ ಕೆಲವು ಜನಪ್ರಿಯ ಫೋನ್‌ಗಳು ಭಾರೀ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಕೂಡಾ ಸಖತ್ ರಿಯಾಯಿತಿ ಪಡೆದಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 39,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಲಭ್ಯವಿರುವ ಇತರೆ ಕೊಡುಗೆ ಪಡೆದುಕೊಂಡರೆ, ಇನ್ನಷ್ಟು ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು.

ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ ಖರೀದಿಗೆ ಇದಕ್ಕಿಂತ ಬೆಸ್ಟ್‌ ಆಫರ್‌ ಬೇಕಾ?

ಇನ್ನು ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇನ್ನುಳಿದಂತೆ ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ ಖರೀದಿಗೆ ಇದಕ್ಕಿಂತ ಬೆಸ್ಟ್‌ ಆಫರ್‌ ಬೇಕಾ?

ಒನ್‌ಪ್ಲಸ್‌ 11R ಮೊಬೈಲ್‌ - ಫೀಚರ್ಸ್‌

ಒನ್‌ಪ್ಲಸ್‌ ಕಂಪನಿಯ ಈ ಮೊಬೈಲ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರ ಡಿಸ್‌ಪ್ಲೇಯು 2772 x 1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡುತ್ತದೆ.

ಒನ್‌ಪ್ಲಸ್‌ 11R ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್‌ ಕಾರ್ಯವೈಖರಿ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ ಇದು 8GB RAM + 256GB ಹಾಗೂ 16GB RAM ಮತ್ತು 256GB ಆಂತರೀಕ ವೇರಿಯೆಂಟ್‌ ಆಯ್ಕೆಯ ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಈ ಫೋನ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್‌ ಹೊಂದಿದ್ದು, 120-ಡಿಗ್ರಿ ಅಲ್ಟ್ರಾ-ವೈಡ್ ಲೆನ್ಸ್‌ ಪಡೆದಿದೆ. ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಒನ್‌ಪ್ಲಸ್‌ 11R ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G, Wi-Fi, ಬ್ಲೂಟೂತ್ 5.3 ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಸೌಲಭ್ಯ ಪಡೆದಿದೆ.

ಒನ್‌ಪ್ಲಸ್‌ ಸಂಸ್ಥೆಯ ಈ ಜನಪ್ರಿಯ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ 8GB + 256GB ಮತ್ತು 16GB + 256GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಸೋನಿಕ್‌ ಬ್ಲ್ಯಾಕ್‌ ಮತ್ತು ಗಾಲಾಟಿಕ್‌ ಸಿಲ್ವರ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Awesome Price Drop on OnePlus 11R 5G in India. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+