ಸ್ಯಾಮ್‌ಸಂಗ್‌ನ ಈ ಕ್ಯಾಮೆರಾ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಫೋನ್ ಪ್ರಿಯರ ಗಮನ ಸೆಳೆದಿದೆ. ಅದರಲ್ಲಿಯೂ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ A ಸರಣಿಯಲ್ಲಿ ಪ್ರಿಮಿಯಂ ಮಾದರಿಯಲ್ಲಿ ಕಾಣಿಸಿಕೊಂಡಿದೆ. ಇದೀಗ ಈ ಫೋನ್ ಭರ್ಜರಿ ಇಳಿಕೆ ಕಂಡಿದೆ.
ಹೌದು, ಅಮೆಜಾನ್ ಈ ಕಾಮರ್ಸ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ಶೇ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8GB + 128GB ಸ್ಟೋರೇಜ್‌ನ ವೇರಿಯಂಟ್ 28,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಇತರೆ ಹೆಚ್ಚುವರಿಯಾಗಿ ಬ್ಯಾಂಕ್ ಆಫರ್ ಕೂಡಾ ಗ್ರಾಹಕರಿಗೆ ದೊರೆಯಲಿದೆ.

ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ಸಾಮರ್ಥ್ಯದ ಸಾಮರ್ಥ್ಯ ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಅನ್ನು ಕೆಲಸ ಮಾಡಲಿದೆ. ಅಲ್ಲದೇ ಈ ಮೊಬೈಲ್ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಫೋನಿನ ಇತರ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ರಚನೆ
ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ 1080 × 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, 1000 nits ಬ್ರೈಟ್ನೆಸ್ ಸಾಮರ್ಥ್ಯ ಸಹ ಪಡೆದಿದೆ. ಇದರ ಜೊತೆಗೆ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಪಡೆದಿದ್ದು, ಇದರ ಜತೆ ಮಾಲಿ-G68 MC4 GPU ಸಪೋರ್ಟ್ ಅನ್ನು ಪಡೆದಿದೆ. ಇದರೊಂದಿಗೆ ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಒಳಗೊಂಡಿದ್ದು, 8 GB + 128 GB ಮತ್ತು 8 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ಗ್ಯಾಲಕ್ಸಿ A34 5G ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಪಡೆದಿದೆ. ಇದರ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯ ಪಡೆದಿದೆ.
ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ
ಸ್ಯಾಮ್‌ಸಂಗ್‌ನ ಈ ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಅಲ್ಲದೇ ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಆಯ್ಕೆಗಳನ್ನು ಪಡೆದಿದ್ದು, ಧೂಳು ಮತ್ತು ನೀರು ನಿರೋಧಕ (IP67) ಸೌಲಭ್ಯ ಪಡೆದಿದ್ದು, ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳ ಸೌಲಭ್ಯ ಕೂಡಾ ಲಭ್ಯ.
ಮೆಮೊರಿ ಹಾಗೂ ಕಲರ್ ಆಯ್ಕೆ
ಗ್ಯಾಲಕ್ಸಿ A34 5G ಮೊಬೈಲ್ 8 GB + 128 GB ಮತ್ತು 8 GB + 256 GB ಸ್ಟೋರೇಜ್ ಆಯ್ಕೆ ಹೊಂದಿದೆ. ಇನ್ನು ಈ ಫೋನ್ ಲೈಮ್, ಗ್ರಾಫೈಟ್ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








