ಈ ಜನಪ್ರಿಯ ಸ್ಯಾಮ್‌ಸಂಗ್ 5G ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ಜನಪ್ರಿಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗ್ರಾಹಕರನ್ನು ಸೆಳೆಯಲು ಮೊಬೈಲ್‌ಗಳಿಗೆ ಆಕರ್ಷಕ ಆಫರ್ ಘೋಷಿಸುತ್ತದೆ. ಈ ನಿಟ್ಟಿನಲ್ಲಿ ಅನೇಕರು ಮೊಬೈಲ್ ಖರೀದಿಸುವಾಗ ಅಮೆಜಾನ್‌ನತ್ತ ಇಣುಕಿ ನೋಡುತ್ತಾರೆ. ಸದ್ಯ ಈ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನ್ ಬೊಂಬಾಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್ ಶೇ. 9% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 30,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ರಿಯಾಯಿತಿ ಸಹ ಪಡೆದುಕೊಳ್ಳಲು ಚಾನ್ಸ್ ಇದೆ.

ಈ ಅಗ್ಗದ ಬೆಲೆಯ ಫೋನ್ Exynos 1380 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್ 1080 × 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 389 PPI ಆಗಿದ್ದು, 120 Hz ರಿಫ್ರೆಶ್ ರೇಟ್ ಸೌಲಭ್ಯ ಸಹ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್ Exynos 1380 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಅನ್ನು ಒಳಗೊಂಡಿದ್ದು, ಇದರ ಜೊತೆಗೆ ಮಾಲಿ G68 GPU ಸಪೋರ್ಟ್ ಅನ್ನು ಕೂಡಾ ಪಡೆದಿದೆ. ಹಾಗೆಯೇ ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಒಳಗೊಂಡಿದೆ. ಇದು 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೌಲಭ್ಯದಲ್ಲಿ ಇದೆ ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಇನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಸಹ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್ 8 GB + 128 GB ಸ್ಟೋರೇಜ್ ವೇರಿಯಂಟ್ ಹಾಗೂ 8 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಮೊಬೈಲ್ ಆಸ್ಸಮ್ ಐಸ್ ಬ್ಲೂ, ಆಸ್ಸಮ್ ಲೈಲಾಕ್ ಹಾಗೂ ಆಸ್ಸಮ್ ನಾವಿ ಕಲರ್ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ.


Click it and Unblock the Notifications








