ಡಿಸ್ಕೌಂಟ್ ಬೆಲೆಯಲ್ಲಿ ಸ್ಯಾಮ್‌ಸಂಗ್‌ನ ಹೊಸ ಫೋನ್ ಖರೀದಿಗೆ ಇದು ಸಕಾಲ!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಮೊಬೈಲ್‌ಗಳಿಗೆ ಆಕರ್ಷಕ ಡಿಸ್ಕೌಂಟ್ ಲಭ್ಯ. ಹೀಗಾಗಿ ಹೊಸ ಮೊಬೈಲ್ ಖರೀದಿಸುವ ಬಹುತೇಕ ಗ್ರಾಹಕರು ಇ ಕಾಮರ್ಸ್‌ನತ್ತ ಮುಖ ಮಾಡುತ್ತಾರೆ. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್ ಶೇ. 46% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 6 GB RAM + 128 GB ವೇರಿಯಂಟ್ ಅನ್ನು ಗ್ರಾಹಕರು 12,999 ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ರಿಯಾಯಿತಿ ಕೂಡಾ ಲಭ್ಯ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನ್ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಹಾಗೆಯೇ ಸ್ಯಾಮ್‌ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಮೊಬೈಲ್‌ನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಸೂಪರ್ AMOLED ಮಾದರಿಯ ಡಿಸ್‌ಪ್ಲೇ ಪಡೆದಿದೆ. ಇದರ ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಸಪೋರ್ಟ್ ಇದೆ. ಅಲ್ಲದೇ ಇದರ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನ್ ಎರಡು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 6GB + 128GB ಹಾಗೂ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಇದು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸಲ್ ಹೊಂದಿದ್ದು, ತೃತೀಯ ಕ್ಯಾಮೆರಾ 2 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಹೊಂದಿದೆ. ಇದರ ಜೊತೆಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಟೈಪ್ ಸಿ ಪೊರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯಗಳನ್ನು ಸಹ ಒಳಗೊಂಡಿದೆ.
ಈ ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಇನ್ನು ಈ ಮೊಬೈಲ್ ಬ್ಲ್ಯಾಕ್ ಹಾಗೂ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯ ಲಭ್ಯವಾಗಲಿದೆ. ಗ್ರಾಹಕರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿ ಮಾಡಬಹುದು.


Click it and Unblock the Notifications








