12GB RAM ಫೋನ್ ಖರೀದಿಸಬೇಕೆ? ಇಲ್ಲಿವೆ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಖರೀದಿಸುವಾಗ ಅದರ ಪ್ರೊಸೆಸರ್ ಮಾತ್ರವಲ್ಲದೆ RAM ಸಾಮರ್ಥ್ಯ ಕೂಡ ಮುಖ್ಯವಾಗುತ್ತದೆ. ಇದೇ ಕಾರಣಕ್ಕೆ ಹಲವು RAM ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ನಾವು ಮಾರುಕಟ್ಟೆಯಲ್ಲಿ ಕಾಣಬಹುದು. ಇದರಲ್ಲಿ ಹೆಚ್ಚಿನ RAM ಆಯ್ಕೆ ಬಯಸೋರಿಗೆ 12GB RAM ಸ್ಮಾರ್ಟ್‌ಫೋನ್‌ಗಳು ನೆಚ್ಚಿನ ಆಯ್ಕೆಯಾಗಿ ಗುರುತಿಸಿಕೊಂಡಿವೆ.
ಹೌದು, 12GB RAM ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಜನಪ್ರಿಯ ಬ್ರ್ಯಾಂಡ್‌ಗಳಾದ ಸ್ಯಾಮ್‌ಸಂಗ್, ಶಿಯೋಮಿ, ಒಪ್ಪೋ, ವಿವೋದ 12GB RAMಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಹಾಗಾದ್ರೆ ನೀವು ಕೂಡ 12GB RAM ಆಯ್ಕೆಯ ಸ್ಮಾರ್ಟ್‌ಫೋನ್ ಸರ್ಚ್ ಮಾಡ್ತಾ ಇದ್ದೀರಾ? ನಿಮಗೆ 12GB RAM ಆಯ್ಕೆಯಲ್ಲಿ ಸೂಕ್ತವಾದ ಸ್ಮಾರ್ಟ್‌ಫೋನ್ ಯಾವುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ 13 ಪ್ರೊ
12GB RAM ಸ್ಮಾರ್ಟ್‌ಫೋನ್ ಖರೀದಿಸುವವರ ಮೊದಲ ಆಯ್ಕೆ ಶಿಯೋಮಿ 13 ಪ್ರೊ ಅಂತಾನೇ ಹೇಳಬಹುದು. ಈ ಸ್ಮಾರ್ಟ್‌ಫೋನ್ 6.73 ಇಂಚಿನ WQHD+ ಡಿಸ್‌ಪ್ಲೇ ಹೊಂದಿದ್ದು, ಜೊತೆಗೆ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು ಸ್ನಾಪ್‌ಡ್ರಾಗನ್ 8 ಜನ್ 2 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು,12GB RAM + 256GB ಸ್ಟೋರೇಜ್ ವೇರಿಯಂಟ್ ನಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ 79,999ರೂ. ಬೆಲೆಯಲ್ಲಿ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ
12GB RAM ಆಯ್ಕೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ಕೂಡ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ ಫೋನ್ ಟ್ರೆಂಡಿಂಗ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್ 6.90 ಇಂಚಿನ ಡೈನಾಮಿಕ್ AMOLED ಫುಲ್ ಹೆಚ್‌ಡಿ ಪ್ಲಸ್ ಹೊಂದಿದೆ. ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 9 ಆಕ್ಟಾ 990SoC ಪ್ರೊಸೆಸರ್ ಹೊಂದಿದೆ. ಇದು 12GB ಮತ್ತು 256GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 108ಎಂಪಿ ಸೆನ್ಸಾರ್ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದರ ಬೆಲೆ 48,499 ರೂ.ಆಗಿದೆ.

ವಿವೋ X80 ಪ್ರೊ 5G
ವಿವೋ X80 ಪ್ರೊ ಸ್ಮಾರ್ಟ್‌ಫೋನ್ 6.78-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್ GNV ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 79,999ರೂ. ಆಗಿದೆ.

ಒಪ್ಪೋ ರೆನೋ 8 ಪ್ರೊ 5G
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದೆ.12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 45,999ರೂ. ಆಗಿದೆ.


Click it and Unblock the Notifications








