48MP ಸೆನ್ಸಾರ್‌ ಪ್ರೈಮರಿ ಕ್ಯಾಮೆರಾ ಹೊಂದಿರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೇ ಕಾರಣಕ್ಕೆ ಹಲವು ಕಪೆನಿಗಳು ತಮ್ಮದೇ ಆದ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ದೊಡ್ಡ ಗಾತ್ರದ ಡಿಸ್‌ಪ್ಲೇ, ಫೋಲ್ಡ್‌ ಡಿಸ್‌ಪ್ಲೇಯಂತಹ ಸ್ಮಾರ್ಟ್‌ಫೋನ್‌ಗಳನ್ನು ಸಹ ಪರಿಚಯಿಸಿವೆ. ಅಲ್ಲದೆ ಡ್ಯುಯೆಲ್‌, ಟ್ರಿಪಲ್‌, ಕ್ವಾಡ್‌ ರಿಯರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿವೆ. ಇನ್ನು ಸ್ಮಾರ್ಟ್‌ಫೋನ್‌ ಕೊಳ್ಳುವಾಗ ಸಾಮಾನ್ಯವಾಗಿ ಹೆಚ್ಚಿನ ಜನರು ಕ್ಯಾಮೆರಾ ಫೀಚರ್ಸ್‌ಗಳ ಕಡೆಗೆ ಹೆಚ್ಚಿನ ಗಮನವಹಿಸುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಇದೆ. ಉತ್ತಮ ಕ್ಯಾಮೆರಾ ಫೀಚರ್ಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಟ್ರೆಂಡಿಂಗ್‌ನಲ್ಲಿವೆ. ಸ್ಮಾರ್ಟ್‌ಫೋನ್‌ ತಯಾರಕರು ಕೂಡ ಹೊಸ ಮಾದರಿಯ ಕ್ಯಾಮೆರಾ ಫೀಚರ್ಸ್‌ಗಳನ್ನು ಅಳವಡಿಸುತ್ತಾ ಬಂದಿದ್ದಾರೆ. ಸದ್ಯ ನೀವು 48mp, 64mp, 108mp ಸೆನ್ಸಾರ್‌ ಪ್ರೈಮರಿ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಸೌಂಡ್‌ ಮಾಡುತ್ತಿವೆ. ಇದರಲ್ಲಿ 48mp ಸೆನ್ಸಾರ್‌ ಪ್ರೈಮರಿ ಕ್ಯಾಮೆರಾ ಒಳಗೊಂಡ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ 30 ಪ್ರೊ 5G

ರಿಯಲ್‌ಮಿ ನಾರ್ಜೊ 30 ಪ್ರೊ 5G

ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48MP ಸೆನ್ಸಾರ್‌ ಹೊಂದಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ಡಾರ್ಟ್‌ ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್‌ 6GB RAM + 64GB ಸ್ಟೋರೇಜ್ ರೂಪಾಂತರಕ್ಕೆ 16,999 ರೂ. ಹಾಗೂ 8GB RAM + 128GB ಸ್ಟೋರೇಜ್ ಮಾದರಿಯು ರೂ. 19,999 ಬೆಲೆಯನ್ನು ಹೊಂದಿದೆ.

ರೆಡ್ಮಿ ನೋಟ್ 10T

ರೆಡ್ಮಿ ನೋಟ್ 10T

ಈ ಫೋನ್ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 64GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಇದು ಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಎಫ್ / 1.79 ಲೆನ್ಸ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇದು 14,999ರೂ ಬೆಲೆಯನ್ನು ಹೊಂದಿದೆ.

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇದು 14,499ರೂ, ರಿಂದ ಆರಂಭವಾಗುತ್ತದೆ.

ಒಪ್ಪೋ F19

ಒಪ್ಪೋ F19

ಒಪ್ಪೋ F19 ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ಮೇಲೆ ರನ್ ಆಗಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಇನ್ನು ಈ ಫೋನ್ ಟ್ರಿಪಲ್‌ ಕ್ಯಾಮೆರಾ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಬ್ಯಾಟರಿಯನ್ನು 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 18,990ರೂ.ಆಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌-ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದರ ಬೆಲೆ 19999 ರೂ. ಆಗಿದೆ.

ರಿಯಲ್‌ಮಿ 8 5G

ರಿಯಲ್‌ಮಿ 8 5G

ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಹೊಂದಿರುವ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ "ನೈಟ್‌ಸ್ಕೇಪ್" ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇದರ ಬೆಲೆ 15,499 ರೂ.ಆಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F22

ಇನ್ನು ಈ ಸ್ಮಾರ್ಟ್‌ಫೋನ್‌ 6.4-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಒನ್ ಯುಐ 3.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದು 12,999ರೂ ಬೆಲೆಯನ್ನು ಹೊಂದಿದೆ.

Best Mobiles in India

English summary
If you are attracted to the presence of 48MP cameras on a smartphone and want it to stay under Rs 20,000.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X