Home
ಸುದ್ದಿಜಾಲ

ಭಾರತದಲ್ಲಿ 20,000ರೂ.ಒಳಗೆ ಲಭ್ಯವಿರುವ 6,000mAh ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು!

ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವಾಗ ಹಲವು ವಿಚಾರಗಳು ತಲೆಗೆ ಬರುತ್ತವೆ. ಸಸ್ಮಾರ್ಟ್‌ಫೋನ್‌ ಹೊಂದಿರುವ ಕ್ಯಾಮೆರಾ, ಬ್ಯಾಟರಿ ಸಾಮರ್ಥ್ಯ, ಡಿಸ್‌ಪ್ಲೇ ಹೇಗಿದೆ ಇದೆಲ್ಲಾ ವಿಚಾರಗಳು ಗಮನಿಸುತ್ತೇವೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳಿದ್ದರೂ ಖರೀದಿಸುವಾಗ ಸಾಕಷ್ಟು ವಿಚಾರಿಸುತ್ತೇವೆ. ಇನ್ನು ಸ್ಮಾರ್ಟ್‌ಫೋನ್‌ ತಯಾರಕರು ಕೂಡ ಸ್ಮಾರ್ಟ್‌ಫೋನ್‌ ಪ್ರಿಯರ ಆಶಯಕ್ಕೆ ಅನುಗುಣವಾಗಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ಮುನ್ನ ಹಲವು ವಿಚಾರಗಳು ಮುಖ್ಯವಾಗುತ್ತದೆ. ಅದರಲ್ಲೂ ಸ್ಮಾರ್ಟ್‌ಫೋನ್‌ ಬ್ಯಾಟರಿ ಸಾಮರ್ಥ್ಯ ಮೇನ್‌ ಹೈಲೈಟ್‌ ಆಗಿರಲಿದೆ. ಆದರಿಂದ ಸ್ಮಾರ್ಟ್‌ಫೋನ್‌ಗಳ ಬ್ಯಾಟರಿ ಸಾಮರ್ಥ್ಯವೂ ಕೂಡ ಸಾಕಷ್ಟು ಬದಲಾಗಿದೆ. ಸ್ಮಾರ್ಟ್‌ಫೋನ್‌ ತಯಾರಕರು ಬಬ್ಯಾಟರಿ ಸಾಮರ್ಥ್ಯವನ್ನು ಹೆಚ್ಚಿಸುತ್ತಲೇ ಬಂದಿವೆ. ಸದ್ಯ ನೀವು ಕೂಡ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವ ತಯಾರಿಯಲ್ಲಿದ್ದೀರಾ, ಹಾಗಾದ್ರೆ ಮಾರುಕಟ್ಟೆಯಲ್ಲಿ 20,000ರೂ.ಒಳಗೆ ಲಭ್ಯವಿರುವ 6,000mAh ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 3 ಜಿಬಿ RAM ಮತ್ತು 32 ಜಿಬಿ ಸಂಗ್ರಹಣೆಯ ಬೆಲೆ 8,999ರೂ ಹೊಂದಿದೆ.

ಮೋಟೋ G40 ಫ್ಯೂಷನ್

ಮೋಟೋ G40 ಫ್ಯೂಷನ್

ಮೊಟೊರೊಲಾ ಸಂಸ್ಥೆಯ ಮೋಟೋ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಕೂಡ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.80-ಇಂಚಿನ ಟಚ್ಸ್ಕ್ರೀನ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ8 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB RAM+64GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ 13,499ರೂ.ಬೆಲೆಯನ್ನು ಹೊಂದಿದೆ. ಜೊತೆಗೆ 6GB RAM+128GB ಆಯ್ಕೆಯ ಬೆಲೆ 14,999.ರೂ ಬೆಲೆ ಹೊಂದಿದೆ.

ಪೊಕೊ M3

ಪೊಕೊ M3

ಪೊಕೊ M3 ಸ್ಮಾರ್ಟ್‌ಫೋನ್‌ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಭಾರತದಲ್ಲಿ ಪೊಕೊ M3 ಫೋನ್‌ 6GB RAM+ 64GB ಶೇಖರಣಾ ರೂಪಾಂತರಕ್ಕೆ 10,999 ರೂ. ಬೆಲೆ ಹೊಂದಿದೆ.

ರೆಡ್ಮಿ 10 ಪ್ರೈಮ್

ರೆಡ್ಮಿ 10 ಪ್ರೈಮ್

ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದೆ. ಭಾರತದಲ್ಲಿ ರೆಡ್‌ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌ ಬೆಲೆ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 12,499ರೂ.ಬೆಲೆ ಹೊಂದಿದೆ.

ಮೋಟೋ G60

ಮೋಟೋ G60

ಮೋಟೋ G60 ಸ್ಮಾರ್ಟ್‌ಫೋನ್‌ 6.8ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಭಾರತದಲ್ಲಿ ಮೋಟೋ G60 ಸ್ಮಾರ್ಟ್‌ಫೋನ್‌ ಬೆಲೆ ಏಕೈಕ 6GB RAM + 128GB ಶೇಖರಣಾ ರೂಪಾಂತರಕ್ಕೆ 17,999 ರೂ. ಹೊಂದಿದೆ.

Best Mobiles in India

English summary
Here is the list of top smartphones with a powerful batteries to consider.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+