ಕಡಿಮೆ ಬೆಲೆಗೆ ನೀವು ಖರೀದಿಸಬಹುದಾದ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು

|

ಇತ್ತೀಚಿನ ದಿನಗಳಲ್ಲಿ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ 5G ಸ್ಮಾರ್ಟ್‌ಫೋನ್‌ ಭರಾಟೆ ಜೋರಾಗಿದೆ. ಭಾರತದಲ್ಲಿ 5G ಇಂಟರ್‌ನೆಟ್‌ ಸೇವೆ ಲಭ್ಯವಿಲ್ಲದೆ ಹೋದರೂ 5G ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಭವಿಷ್ಯದಲ್ಲಿ ಭಾರತದಲ್ಲಿ 5G ಸೇವೆ ದೊರೆಯಲಿದೆ ಎನ್ನುವ ವಿಶ್ವಾಸದಲ್ಲಿ ಅನೇಕ ಕಂಪೆನಿಗಳು 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇವುಗಳಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ.

5G

ಹೌದು, ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆ ಆಗುತ್ತಿವೆ. ಅಲ್ಲದೆ ಮಧ್ಯಮ ವರ್ಗ ಹಾಗೂ ಬಜೆಟ್‌ ಬೆಲೆಲ್ಲೂ ಸಹ 5G ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿವೆ. ಅಲ್ಲದೆ 5G ಸ್ಮಾರ್ಟ್‌ಫೋನ್‌ಗಳಲ್ಲಿ ಲಭ್ಯವಿರುವ ಹೊಸ ಫೀಚರ್ಸ್‌ಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಸದ್ಯ ಈ ಲೇಖನದಲ್ಲಿ ಮೇ ತಿಂಗಳಿನಲ್ಲಿ 21,000 ರೂ.ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಟಾಪ್ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ರಿಯಲ್‌ಮಿ 8 5G

ರಿಯಲ್‌ಮಿ 8 5G

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 5G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ "ನೈಟ್‌ಸ್ಕೇಪ್" ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5000mAh ಬ್ಯಾಟರಿಯನ್ನು ಹೊಂದಿದ್ದು, 18W ಟೈಪ್‌ ಸಿ ಕ್ವಿಕ್‌ ಚಾರ್ಜ್‌ ಅನ್ನು ಬೆಂಬಲಿಸಲಿದೆ. ಇದು 5G ನೆಟ್‌ವರ್ಕ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ 13,999 ರೂ.ಆಗಿದೆ. ರಿಯಲ್‌ಮಿ.ಕಾಮ್, ಫ್ಲಿಪ್ಕಾರ್ಟ್.ಕಾಮ್ ನಲ್ಲಿ ಖರೀದಿಗೆ ಲಭ್ಯವಿದೆ.

ಒಪ್ಪೋ A53s 5G

ಒಪ್ಪೋ A53s 5G

ಒಪ್ಪೋ A53s 5G ಭಾರತದ ಅಗ್ಗದ 5G ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.52-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೆಲೆ 14,990 ರೂ. ಆಗಿದೆ.

ರಿಯಲ್‌ಮಿ ನಾರ್ಜೊ 30ಪ್ರೊ 5G

ರಿಯಲ್‌ಮಿ ನಾರ್ಜೊ 30ಪ್ರೊ 5G

ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 17.74 ಗಂಟೆಗಳ ನಿರಂತರ ವೀಡಿಯೊ ಪ್ಲೇಬ್ಯಾಕ್ ಅನ್ನು ನೀಡುತ್ತದೆ. ಇದರ ಬೆಲೆ 16,999 ರೂ. ಆಗಿದೆ.

ರಿಯಲ್‌ಮಿ X7 5G

ರಿಯಲ್‌ಮಿ X7 5G

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್‌ 6.4-ಇಂಚಿನ 1080p ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಪಂಚ್-ಹೋಲ್ ಕ್ಯಾಮೆರಾ ಪ್ರದರ್ಶನದೊಂದಿಗೆ 6.4 "ಸೂಪರ್ ಅಮೋಲೆಡ್ ಸ್ಕ್ರೀನ್‌ ಹೊಂದಿದೆ. ಇದು ಮೀಡಿಯಾ ಟೆಕ್ Dimensity 800U 5G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಈ ಫೋನ್‌ 4310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಪ್ರಸ್ತುತ ಇದರ ಬೆಲೆ 19,999 ರೂ.ಆಗಿದೆ.

Best Mobiles in India

English summary
Best 5G smartphones 2021: With many smartphone brands launching their 5G smartphones in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X