ಅತ್ಯುತ್ತಮ ಡಿಸ್‌ಪ್ಲೇ ಇರುವ ಸ್ಮಾರ್ಟ್‌ಫೋನ್ ಬೇಕೆ?..ಈ ಲಿಸ್ಟ್ ಗಮನಿಸಿ!
ಪ್ರಸ್ತುತ ಸ್ಮಾರ್ಟ್‌ಫೋನ್ ತಂತ್ರಜ್ಞಾನ ವಲಯದಲ್ಲಿ ನೂತನ ಅಪ್‌ಡೇಟ್ ನಡೆಯುತ್ತಿವೆ. ಫೋನ್ ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾ ಹಾಗೂ ಡಿಸೈನ್ ವಿಭಾಗಗಳಲ್ಲಿಯೂ ಸಾಕಷ್ಟು ಅಪ್‌ಡೇಟ್‌ಗಳನ್ನು ನಾವು ನೋಡಬಹುದಾಗಿದೆ. ಹಾಗೆಯೇ ಮೊಬೈಲ್‌ಗಳ ಡಿಸ್‌ಪ್ಲೇಯ ವಿಭಾಗದಲ್ಲಿಯೂ ಬದಲಾವಣೆಗಳನ್ನು ಕಾಣಬಹುದಾಗಿದ್ದು, ಇತ್ತೀಚಿನ ಬಹುತೇಕ ಫೋನ್‌ಗಳು AMOLED ಮಾದರಿಯ ಡಿಸ್‌ಪ್ಲೇ ಹೊಂದಿವೆ.

ಹೌದು, ಹಲವು ಬಜೆಟ್ ಬೆಲೆಯ ಹಾಗೂ ಅದಕ್ಕಿಂತಲೂ ಅಧಿಕ ದರದ ಫೋನ್‌ಗಳು AMOLED ಡಿಸ್‌ಪ್ಲೇ ಅನ್ನು ಒಳಗೊಂಡಿರುವುದು ಸಾಮಾನ್ಯವಾಗಿದೆ. AMOLED ಡಿಸ್‌ಪ್ಲೇ ಮಾದರಿಯು ಹೆಚ್ಚು ಬ್ರೈಟ್ನೆಸ್ ಅನ್ನು ಒಳಗೊಂಡಿದ್ದು, ಹೆಚ್ಚಿನ ಕಾಂಟ್ರಾಸ್ಟ್ ಅನುಪಾತ ಪಡೆದಿರುತ್ತದೆ. ಹಾಗಾದರೆ AMOLED ಡಿಸ್‌ಪ್ಲೇ ಹೊಂದಿರುವ ಕೆಲವು ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಇದರೊಂದಿಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್
ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಮೈಕ್ರೋ-ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ ColorOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 48Hz ತನಕ ಇಳಿಸಬಹುದಾಗಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 512GB ಇಂಟರ್ ಸ್ಟೋರೇಜ್ ಹೊಂದಿದೆ.

ರೆಡ್ಮಿ ನೋಟ್ 12 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 12 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಸ್ಟೊರೇಜ್ ಆಯ್ಕೆ ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಪಡೆದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








