Home
ಸುದ್ದಿಜಾಲ

ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ರೀಚಾರ್ಜ್‌ ಮಾಡುವ ಗ್ರಾಹಕರೇ, ಇಲ್ಲಿ ಗಮನಿಸಿ!

ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಗಳು ಕೆಲವು ಅತ್ಯುತ್ತಮ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಹೊಂದಿವೆ. ಆ ಪೈಕಿ ಅಧಿಕ ಡೇಟಾ, ವಾರ್ಷಿಕ ವ್ಯಾಲಿಡಿಟಿ ಸೌಲಭ್ಯದ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಬಳಕೆದಾರರಿಗೆ ಬೆಸ್ಟ್ ಎನಿಸಿವೆ. ಈ ನಿಟ್ಟಿನಲ್ಲಿ 2023 ರಲ್ಲಿ ರೀಚಾರ್ಜ್‌ ಮಾಡಿಸಲು ಕೆಲವು ಪ್ಲ್ಯಾನ್‌ಗಳು ಗಮನ ಸೆಳೆದಿವೆ.

ಹೌದು, ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ಕಡಿಮೆ ವ್ಯಾಲಿಡಿಟಿಯ ಜೊತೆಗೆ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳ ಆಯ್ಕೆ ಹೊಂದಿವೆ. ಕೆಲವರು ಅಲ್ಪಾವಧಿಯ ಪ್ಲ್ಯಾನ್ ಇಷ್ಟ ಪಟ್ಟರೆ, ಮತ್ತೆ ಕೆಲವರು ವಾರ್ಷಿಕ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ. ಹಾಗಾದರೆ ಪ್ರಸಕ್ತ ಸಾಲಿನಲ್ಲಿ ವಾರ್ಷಿಕ ಅವಧಿಯ ಪ್ಲ್ಯಾನ್ ರೀಚಾರ್ಜ್‌ ಮಾಡಿಸೋಕೆ ಅತ್ಯುತ್ತಮ ಆಯ್ಕೆಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ರೀಚಾರ್ಜ್‌ ಮಾಡುವ ಗ್ರಾಹಕರೇ, ಇಲ್ಲಿ ಗಮನಿಸಿ!

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚುವರಿ ಯಾಗಿ ಮೂರು ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಹಾಗೂ ಏರ್‌ಟೆಲ್‌ ಆಪ್ಸ್‌ಗಳ ಸೇವೆ ಪಡೆದಿದೆ.

ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ರೀಚಾರ್ಜ್‌ ಮಾಡುವ ಗ್ರಾಹಕರೇ, ಇಲ್ಲಿ ಗಮನಿಸಿ!

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಉಚಿತ ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ ಸೇವೆ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

Best Mobiles in India

English summary
best annual validity recharge plans 2023: details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+