Home
ಸುದ್ದಿಜಾಲ

ಅತ್ಯುತ್ತಮ ಬ್ಯಾಟರಿ ಬ್ಯಾಕಪ್‌ ಇರುವ ಫೋನ್‌ಗಳಿವು: ಫೀಚರ್ಸ್‌,ಬೆಲೆ ಬಗ್ಗೆ ತಿಳಿದುಕೊಳ್ಳಿ!

ಭಾರತದಲ್ಲಿ ಬಹುಪಾಲು ಮಂದಿ ಸ್ಮಾರ್ಟ್‌ಫೋನ್ ಖರೀದಿ ಮಾಡಲು ಮುಂದಾದಾಗ ಪ್ರೊಸೆಸರ್, ಕ್ಯಾಮೆರಾ ವಿಷಯಕ್ಕೆ ಮನ್ನಣೆ ಕೊಡುವಂತೆ ಬ್ಯಾಟರಿ ವಿಷಯಕ್ಕೂ ಹೆಚ್ಚಿನ ಗಮನ ಕೊಡುತ್ತಾರೆ. ಅದರಂತೆ, ಅತ್ಯುತ್ತಮ ಬ್ಯಾಟರಿ ಬ್ಯಾಕಪ್‌ ಹೊಂದಿರುವ ಫೋನ್‌ಗಳ ವಿವರವನ್ನು ತಿಳಿಯಿರಿ.

ಹೌದು, ಸ್ಮಾರ್ಟ್‌ಫೋನ್‌ ಖರೀದಿಯ ವೇಳೆ ಬೆಲೆಗೆ ತಕ್ಕ ಫೀಚರ್ಸ್‌ ಇದ್ದರೆ ಯಾವುದೇ ಸಮಸ್ಯೆ ಇರುವುದಿಲ್ಲ.ಆದರೆ, ಕೆಲವರು ಯಾವುದನ್ನೂ ತಿಳಿಯದೆ ಹೆಚ್ಚಿನ ದರ ಕೊಟ್ಟು ಕಡಿಮೆ ಫೀಚರ್ಸ್‌ ಇರುವ ಸ್ಮಾರ್ಟ್‌ಫೋನ್‌ ಅನ್ನು ಖರೀದಿ ಮಾಡುತ್ತಾರೆ. ಆದರೆ, ನೀವೇನಾರೂ ಈ ವೇಳೆ ಅತ್ಯುತ್ತಮ ಫೀಚರ್ಸ್ ನೊಂದಿಗೆ ಉತ್ತಮ ಬ್ಯಾಟರಿ ಬ್ಯಾಕಪ್‌ ಹೊಂದಿರುವ ಫೋನ್‌ಗಳನ್ನು ಖರೀದಿ ಮಾಡಬೇಕು ಎಂದುಕೊಂಡಿದ್ದರೆ ಇಲ್ಲಿದೆ ನೋಡಿ ವಿವರ.

ಅತ್ಯುತ್ತಮ ಬ್ಯಾಟರಿ ಬ್ಯಾಕಪ್‌ ಇರುವ ಫೋನ್‌ಗಳಿವು:ಫೀಚರ್ಸ್‌ ಬಗ್ಗೆ ತಿಳಿದುಕೊಳ್ಳಿ

ಒನ್‌ಪ್ಲಸ್‌ 11R : ಇದು 6.74 ಇಂಚಿನ ಸೂಪರ್ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 8 ಪ್ಲಸ್‌ ಜನ್ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಪಡೆದುಕೊಂಡಿದ್ದು, 50+8+2MP ಟ್ರಿಪಲ್ ರಿಯರ್‌ ಕ್ಯಾಮೆರಾ ಮತ್ತು 16MP ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದೆ. ಹಾಗೆಯೇ 5000mAh ಸಾಮರ್ಥ್ಯದ ಬ್ಯಾಟರಿ ಅಯ್ಕೆಯೊಂದಿಗೆ 39,999ರೂ.ಗಳ ಮೂಲ ಬೆಲೆಗೆ ಖರೀದಿ ಮಾಡಬಹುದಾಗಿದೆ.

ರಿಯಲ್‌ಮಿ 10 ಪ್ರೊ ಪ್ಲಸ್‌ 5G: ಈ ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 1080 MT6877V ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ 6GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದುಕೊಂಡಿದೆ. ಇನ್ನುಳಿದಂತೆ 108+8+2MP ಟ್ರಿಪಲ್‌ ರಿಯರ್‌ ಕ್ಯಾಮೆರಾ ಹಾಗೂ 16MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, 24,999ರೂ.ಗಳ ಬೆಲೆ ಹೊಂದಿದೆ.

ಅತ್ಯುತ್ತಮ ಬ್ಯಾಟರಿ ಬ್ಯಾಕಪ್‌ ಇರುವ ಫೋನ್‌ಗಳಿವು:ಫೀಚರ್ಸ್‌ ಬಗ್ಗೆ ತಿಳಿದುಕೊಳ್ಳಿ

ಐಟೆಲ್ P40 : ಇದನ್ನು ಮೊನ್ನೆಯಷ್ಟೇ ಅನಾವರಣ ಮಾಡಲಾಗಿದ್ದು, ಈ ಫೋನ್ 6.6 ಇಂಚಿನ ಹೆಚ್‌ಡಿ+ಐಪಿಎಸ್‌ ಡಿಸ್‌ಪ್ಲೆ ಹೊಂದಿದ್ದು, ಆಕ್ಟೋ ಕೋರ್ SC9863A ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB/6GB RAM ಹಾಗೂ 32GB/64GB ಇಂಟರ್‌ ಸ್ಟೋರೇಜ್‌ ಕಾಣಿಸಿಕೊಂಡಿದೆ. ಇನ್ನುಳಿದಂತೆ 13 ಮೆಗಾಪಿಕ್ಸೆಲ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ರಚನೆ ಹಾಗೂ 5 ಮೆಗಾಪಿಕ್ಸೆಲ್‌ ಸೆಲ್ಫಿ ಆಯ್ಕೆ ನೀಡಲಾಗಿದೆ. 6000 mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, 7,999ರೂ.ಗಳ ಬೆಲೆ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G : ಇದು 6.4 ಇಂಚಿನ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಸ್ಯಾಮ್‌ಸಂಗ್ ಎಕ್ಸಿನೋಸ್ 1380 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ, ಹಾಗೆಯೇ 8GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ದೊಂದಿಗೆ 50+12+5MP ಟ್ರಿಪಲ್ ರಿಯರ್‌ ಕ್ಯಾಮೆರಾ ಹಾಗೂ 32MP ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದೆ. 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿರುವ ಈ ಫೋನ್ 38,999ರೂ.ಗಳ ಬೆಲೆ ಹೊಂದಿದೆ.

ಅತ್ಯುತ್ತಮ ಬ್ಯಾಟರಿ ಬ್ಯಾಕಪ್‌ ಇರುವ ಫೋನ್‌ಗಳಿವು:ಫೀಚರ್ಸ್‌ ಬಗ್ಗೆ ತಿಳಿದುಕೊಳ್ಳಿ

ಐಕ್ಯೂ ನಿಯೋ 7 : ಈ ಫೋನ್ 6.78 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾಟೆಕ್‌ ಡೈಮೆನ್ಸಿಟಿ 8200 MT6896Z ಪ್ರೊಸೆಸರ್‌ನ ಶಕ್ತಿ ಪಡೆದುಕೊಂಡಿದೆ. ಹಾಗೆಯೇ 8GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಕಂಡುಬಂದಿದ್ದು, 64+2+2MP ಟ್ರಿಪಲ್‌ ರಿಯರ್‌ ಕ್ಯಾಮೆರಾ ಹಾಗೂ 16MP ಸೆಲ್ಪಿ ಕ್ಯಾಮೆರಾದ ರಚನೆ ಹೊಂದಿದೆ. ಇನ್ನುಳಿದಂತೆ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, 29,999ರೂ.ಗಳಿಗೆ ಲಭ್ಯವಿದೆ.

Best Mobiles in India

English summary
Here are the best battery backup phones if you are going to buy a new smartphone.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+