ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಿದರೇ ಬ್ಯಾಟರಿ ಬ್ಯಾಕ್‌ಅಪ್‌ ಪ್ರಾಬ್ಲಂ ಬರಲ್ಲ!

|

ಪ್ರಸ್ತುತ ಬಳಕೆದಾರರು ಸ್ಮಾರ್ಟ್‌ಫೋನ್‌ಗಳಲ್ಲಿಯೇ ಬಹುತೇಕ ಕೆಲಸಗಳು ನಡೆಸುತ್ತಾರೆ. ಇದರೊಂದಿಗೆ ಇಂಟರ್ನೆಟ್ ಬಳಕೆ ಸಹ ಮಾಡುತ್ತಾರೆ. ಹತ್ತು ಹಲವು ಕೆಲಸಗಳಿಗೆ ನೆರವಾಗಿರುವ ಫೋನಿನಲ್ಲಿ ಬ್ಯಾಟರಿ ನಿಲ್ಲುವುದೇ ಇಲ್ಲ ಎನ್ನುವುದು ಬಹುತೇಕರ ಮಾತಾಗಿದೆ. ಆದರೆ ಇತ್ತೀಚಿಗಿನ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳು ಬ್ಯಾಟರಿ ಸಮಸ್ಯೆಗೆ ಫುಲ್‌ ಸ್ಟಾಪ್‌ ಹಾಕುವಂತಹ ಜಬರ್ದಸ್ತ್ ಬ್ಯಾಟರಿ ಸಾಮರ್ಥ್ಯ ಒಳಗೊಂಡಿವೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಸೇರಿದಂತೆ ಕೆಲವು ಪ್ರಮುಖ ಮೊಬೈಲ್ ಕಂಪನಿಗಳು ಅಧಿಕ ಸೆನ್ಸಾರ್ ಕ್ಯಾಮೆರಾ, ಉನ್ನತ ಪ್ರೊಸೆಸರ್‌ ನೀಡುವ ಜೊತೆಗೆ ಪವರ್‌ಫುಲ್‌ ಬ್ಯಾಟರಿ ಸಪೋರ್ಟ್‌ ನೀಡುತ್ತಿವೆ. ಹೀಗಾಗಿ ಸದ್ಯ 6000mAh ಮತ್ತು ಅದಕ್ಕಿಂತಲೂ ಹೆಚ್ಚಿನ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿರುವ ಫೋನ್‌ಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ನೀವೆನಾದರೂ ಹೆಚ್ಚಿನ ಬ್ಯಾಟರಿ ಸಾಮರ್ಥ್ಯವಿರುವ ಸ್ಮಾರ್ಟ್‌ಫೋನ್‌ ಖರೀದಿಸುವ ಯೋಚನೆ ಮಾಡಿದ್ದರೇ ಇಲ್ಲಿವೆ ನೋಡಿ ಕೆಲವು ಬಿಗ್ ಬ್ಯಾಟರಿ ಸ್ಮಾರ್ಟ್‌ಫೋನ್‌ಗಳ ಆಯ್ಕೆ. ಮುಂದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ 6.5-ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಎಕ್ಸಿನೋಸ್ 9611 ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 32ಎಂಪಿ ಆಗಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.

ರಿಯಲ್‌ಮಿ ನಾರ್ಜೊ 20

ರಿಯಲ್‌ಮಿ ನಾರ್ಜೊ 20

ಇತ್ತೀಚಿಗೆ ಬಿಡುಗಡೆ ಆಗಿರುವ ರಿಯಲ್‌ಮಿ ನಾರ್ಜೊ 20 ಸಹ 6,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ ಜಿ 85 ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 10 ಓಎಸ್ ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಮುಖ್ಯ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. 18W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51

ಸ್ಯಾಮ್‌ಸಂಗ್ ಗ್ಯಾಲಕ್ಸಿ M51

ಸ್ಯಾಮ್‌ಸಂಗ್ ನೂತನವಾಗಿ ಲಾಂಚ್ ಮಾಡಿರುವ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಅತೀ ಹೆಚ್ಚು ಬ್ಯಾಟರಿ ಸಾಮರ್ಥ್ಯ ಹೊಂದಿರುವ ಫೋಣ್ ಆಗಿ ಗುರುತಿಸಿಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6.7-ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730G ಪ್ರೊಸೆಸರ್ ಪಡೆದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 32ಎಂಪಿ ಆಗಿದೆ.

ಪೊಕೊ X3 ಸ್ಮಾರ್ಟ್‌ಫೋನ್

ಪೊಕೊ X3 ಸ್ಮಾರ್ಟ್‌ಫೋನ್

ಬಜೆಟ್‌ ಬೆಲೆಯ ಹೊಸ ಪೊಕೊ X3 ಸ್ಮಾರ್ಟ್‌ಫೋನ್ ಸಹ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದರೊಂದಿಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 732 ಪ್ರೊಸೆಸರ್ ಹೊಂದಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿರುವ ಈ ಫೋನ್ ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಸೆಲ್ಫಿ ಕ್ಯಾಮೆರಾವು 20ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21

ಸ್ಯಾಮ್‌ಸಂಗ್ ಗ್ಯಾಲಕ್ಸಿ M21

ಸ್ಯಾಮ್‌ಸಂಗ್ ಗ್ಯಾಲಕ್ಸಿM21 ಸ್ಮಾರ್ಟ್‌ಫೋನ್‌ ಕೂಡಾ 6,000mAh ಬ್ಯಾಟರಿ ಪವರ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ Exynos 9611 ಪ್ರೊಸೆಸರ್‌ ಒಳಗೊಂಡಿದ್ದು, ಬೇಸ್‌ ವೇರಿಯಂಟ್ ಸ್ಟೋರೇಜ್ ಆಯ್ಕೆಯು 64GB ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಲ್ಫಿ ಕ್ಯಾಮೆರಾವು 20ಎಂಪಿ ಆಗಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.

Most Read Articles
Best Mobiles in India

English summary
Brands like Samsung, Realme, Infinix, and others sell 6,000mAh battery phones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X