ಡಿಸ್ಕೌಂಟ್‌ನಲ್ಲಿ 5G ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಇದುವೇ ಬೆಸ್ಟ್ ಟೈಂ!
ಹೊಸ 5G ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಕೊಂಡವರಿಗೆ ಇ-ಕಾಮರ್ಸ್ ತಾಣಗಳಲ್ಲಿ ಬಿಗ್ ಆಫರ್ ಪಡೆದುಕೊಳ್ಳಬಹುದಾಗಿದೆ. ಹಬ್ಬದ ಸೀಸನ್‌ನಲ್ಲಿ 5G ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ಇದಕ್ಕಿಂತ ಬೆಸ್ಟ್ ಟೈಂ ಮತ್ತೆ ಸಿಗೋದಿಲ್ಲ. ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್ ಸೇಲ್‌ನಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳ 5G ಫೋನ್‌ಗಳನ್ನು ನೀವು ಊಹಿಸದ ರೀತಿಯ ಡಿಸ್ಕೌಂಟ್‌ನಲ್ಲಿ ನೀಡುತ್ತಿದೆ.

ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 5G ಸ್ಮಾರ್ಟ್‌ಫೋನ್‌ಗಳು ವಿಶೇಷ ರಿಯಾಯಿತಿ ಪಡೆದುಕೊಂಡಿವೆ. ಇವುಗಳಲ್ಲಿ ಅತ್ಯುತ್ತಮ ಬಜೆಟ್ 5G ಫೋನ್‌ಗಳು ಇನ್ನಷ್ಟು ಅಗ್ಗದ ಬೆಲೆಯಲ್ಲಿ ಲಭ್ಯವಾಗುತ್ತಿವೆ. ಮುಂದಿನ ದಿನಗಳಲ್ಲಿ ಭಾರತದಲ್ಲಿ 5G ನೆಟ್‌ವರ್ಕ್ ಲಭ್ಯವಾಗುವುದರಿಂದ 5G ಫೋನ್‌ಗಳನ್ನು ಖರೀದಿಸುವವರಿಗೆ ಇದು ಬೆಸ್ಟ್ ಆಯ್ಕೆ ಆಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ X4 ಪ್ರೊ 5G
ಪೊಕೊ X4 ಪ್ರೊ 5G ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 32% ಡಿಸ್ಕೌಂಟ್ ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್ 15,499ರೂ. ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 11T 5G
ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 21% ಡಿಸ್ಕೌಂಟ್ ಪಡೆದಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ 90hz IPS LCD ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಐಕ್ಯೂ Z6 5G
ಐಕ್ಯೂ Z6 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 18,498ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ 6.58 ಇಂಚಿನ 120Hz LCD ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ.

ರಿಯಲ್‌ಮಿ 9i 5G
ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 16% ಡಿಸ್ಕೌಂಟ್ ಅನ್ನು ಪಡೆದಿದೆ. ಆದರಿಂದ ಈ ಸ್ಮಾರ್ಟ್‌ಫೋನ್ ಅನ್ನು 14,999ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ 90Hz LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 810 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೊಟೊರೊಲಾ G71
ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಮೊಟೊರಲಾ G71 ಸ್ಮಾರ್ಟ್‌ಫೋನ್ 30% ಡಿಸ್ಕೌಂಟ್ ಪಡೆದಿದೆ. ಆದರಿಂದ ಈ ಸ್ಮಾರ್ಟ್‌ಫೋನ್ 15,999ರೂ. ಗೆ ಖರೀದಿಸಬಹುದು. ಈ ಫೋನ್ 6.4 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.


Click it and Unblock the Notifications








