ಭಾರತದಲ್ಲಿ 10,000ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!
ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದಾಗಿ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ. ಇದರ ನಡುವೆಯೂ ಕೆಲವು ಪ್ರಮಖ ಕಂಪೆನಿಗಳು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿವೆ. ಅದರಲ್ಲೂ 10,000ರೂ.ಒಳಗಿನ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ಇನ್ನು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಆಕರ್ಷಕ ಫೀಚರ್ಸ್ ಮತ್ತು ಕ್ಯಾಮೆರಾ ಕಾರಣಕ್ಕೆ ಸಾಕಷ್ಟು ಗಮನ ಸೆಳೆದಿವೆ.

ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಹೆಚ್ಚಿನ ಮಂದಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗಿಂತ ಕಡಿಮೆ ಬೆಲೆಯಲ್ಲಿ ಉತ್ತಮ ಕಾರ್ಯದಕ್ಷತೆ ನೀಡುವ ಬಜೆಟ್ ಸ್ಮಾರ್ಟ್‌ಫೋನ್‌ಗಳ ಕಡೆಗೆ ಆಸಕ್ತಿ ವಹಿಸುತ್ತಾರೆ. ಆದರಿಂದ ರಿಯಲ್‌ಮಿ, ರೆಡ್ಮಿ, ಪೊಕೊ, ಸ್ಯಾಮ್‌ಸಂಗ್ ನಂತಹ ಪ್ರಮುಖ ಬ್ರ್ಯಾಂಡ್‌ಗಳು ಅನೇಕ ಬಜೆಟ್ ಫೋನ್‌ಗಳನ್ನು ಪರಿಚಯಿಸಿವೆ. ಹಾಗಾದ್ರೆ ಪ್ರಸ್ತುತ ಭಾರತದಲ್ಲಿ 10,000ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ 9
ರೆಡ್ಮಿ 9 ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿಯ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರ ಆರಂಭಿಕ ಬೆಲೆ 9,499ರೂ.ಗಳಿಂದ ಪ್ರಾರಂಭವಾಗುತ್ತದೆ.

ಪೊಕೊ C31
ಪೊಕೊ C31 ಸ್ಮಾರ್ಟ್‌ಫೋನ್ 6.53-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ.ಇದು ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 540 ಗಂಟೆಗಳ ಸ್ಟ್ಯಾಂಡ್‌ಬೈ, 30 ಗಂಟೆಗಳ ಇ-ಲರ್ನಿಂಗ್, 34 ಗಂಟೆಗಳ VoLTE ಕರೆ, 10 ಗಂಟೆಗಳ ಗೇಮಿಂಗ್ ಮತ್ತು 91 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ನೀಡಲಿದೆ. ಈ ಸ್ಮಾರ್ಟ್‌ಫೋನಿನ 32GB ಮತ್ತು 64GB ರೂಪಾಂತರವೂ 8,499ರೂ.ಬೆಲೆಗೆ ಲಭ್ಯವಾಗಲಿದೆ.

ಮೈಕ್ರೋಮ್ಯಾಕ್ಸ್ ಇನ್ 2b
ಮೈಕ್ರೊಮ್ಯಾಕ್ಸ್ ಇನ್ 2b ಸ್ಮಾರ್ಟ್‌ಫೋನ್ 6.52-ಇಂಚಿನ HD+ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸಾಕ್ ಟಿ 610 ಆಕ್ಟಾ-ಕೋರ್ SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 30A
ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್ ಕೂಡ 10,000ರೂ. ಗಿಂತ ಕಡಿಮೆಬೆಲೆಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ 3GB RAM + 32GB ಸ್ಟೋರೇಜ್ ಮಾದರಿಗೆ 8,999ರೂ. ಬೆಲೆಯನ್ನು ಹೊಂದಿದೆ.

ರಿಯಲ್‌ಮಿ C31
ರಿಯಲ್‌ಮಿ C31 ಸ್ಮಾರ್ಟ್‌ಫೋನ್ ಭಾರತದಲ್ಲಿ 10,000 ರೂಪಾಯಿಗಳ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು 12nm ಯೂನಿಸೊಕ್ T612 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ 3GB RAM + 32GB ಇಂಟರ್ ಸ್ಟೋರೇಜ್ 8,999ರೂ. ಬೆಲೆಯಲ್ಲಿ ದೊರೆಯಲಿದೆ.


Click it and Unblock the Notifications








