ಭಾರತದಲ್ಲಿ 15,000 ರೂ.ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು!
ಟೆಕ್ ವಲಯದಲ್ಲಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಪ್ರತಿನಿತ್ಯ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ನಡೆಯುತ್ತಿರುತ್ತದೆ. ಮಾರುಕಟ್ಟೆಯಲ್ಲಿ ಹಲವು ಬ್ರಾಂಡ್‌ನ ಸ್ಮಾರ್ಟ್‌ಫೋನ್‌ಳು ಲಭ್ಯವಿದ್ದರೂ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಬ್ರಾಂಡ್ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ.

ಹೌದು, ಸ್ಮಾರ್ಟ್‌ಫೋನ್ ಪ್ರಿಯರು ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಸದ್ಯ ಭಾರತದಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈ ಎಂಡ್ ಮಾದರಿಯವರೆಗೂ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಹಾಗಾದ್ರೆ 15,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸಬೇಕಾದರೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ G 9 ಪವರ್
ಮೋಟೋ G 9 ಪವರ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಲೆನೊವೊ ಒಡೆತನದ ಮೊಟೊರೊಲಾ ಮೊಟೋ G 9 ಪವರ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ IP 52-ರೇಟೆಡ್ ವಾಟರ್-ರಿಪಲ್ಲೆಂಟ್ ಬಿಲ್ಡ್ ಅನ್ನು ಸಹ ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 11,999 ರೂ ಆಗಿದೆ.

ರಿಯಲ್‌ಮಿ ನಾರ್ಜೊ 20 ಪ್ರೊ
ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 480 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ. ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. Narzo 20 ಪ್ರೊ ಫೋನಿನ 6GB + 64GB ವೇರಿಯಂಟ್ ದರವು 14,999ರೂ. ಆಗಿದೆ.

ರೆಡ್ಮಿ 9 ಪವರ್
ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್ ಕೂಡ 15,000 ರೂ ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಇದು ಕೂಡ ಒಂದು. ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಇದರ ಬೆಲೆ ಭಾರತದಲ್ಲಿ ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 10,999ರೂ. ಆಗಿದೆ. ಅದೇ ರೀತಿ 4GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆಯು 11,999 ರೂ. ಆಗಿದೆ.

ನೋಕಿಯಾ 2.4
ನೋಕಿಯಾ 2.4 ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡಸ್ಕ್, ಫ್ಜಾರ್ಡ್ ಮತ್ತು ಚಾರ್ಕೋಲ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು 3GB ಮತ್ತು 64GB ರೂಪಾಂತರಕ್ಕೆ 10,399 ರೂ ಬೆಲೆಯನ್ನು ಹೊಂದಿದೆ.


Click it and Unblock the Notifications




