ಭಾರತದ ಮಾರುಕಟ್ಟೆಯಲ್ಲಿ 15,000 ರೂ ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು!
ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಾಗುತ್ತಲೇ ಇದೆ. ಪ್ರತಿಯೊಬ್ಬರೂ ಸ್ಮಾರ್ಟ್‌ಫೋನ್ ಹೊಂದುವುದಕ್ಕೆ ಬಯಸುತ್ತಾರೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ತಮ್ಮದೇ ಆದ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಹೈ ಎಂಡ್ ಮಾದರಿಯಿಂದ ಹಿಡಿದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ಲಭ್ಯವಿವೆ. ಇನ್ನು 2021 ರ ಆರಂಭದಲ್ಲಿಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಇವುಗಳಲ್ಲಿ ಶಿಯೋಮಿ, ರಿಯಲ್‌ಮಿ, ಮತ್ತು ರೆಡ್‌ಮಿ ಬ್ರ್ಯಾಂಡ್‌ನ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿವೆ.

ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿವೆ. ಈ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಮನಗೆದ್ದಿವೆ. ಸದ್ಯ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಲಭ್ಯವಿದ್ದರೂ ಹೆಚ್ಚಿನ ಗ್ರಾಹಕರು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಕಡೆಗೆ ಆಸಕ್ತಿ ವಹಿಸುತ್ತಾರೆ. ಇನ್ನು ಈ ಲೇಖನದಲ್ಲಿ ನೀವು ಮಾರುಕಟ್ಟೆಯಲ್ಲಿ ಹದಿನೈದು ಸಾವಿರ ರೂ ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಸಿಕೊಡ್ತೀವಿ ಓದಿರಿ.

ಮೈಕ್ರೋಮ್ಯಾಕ್ಸ್ IN 1
ಭಾರತದ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಮೈಕ್ರೋಮ್ಯಾಕ್ಸ್ ಕಂಪೆನಿ ಈ ವರ್ಷ ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ನ ಬೇಸ್ ಮಾಡೇಲ್ 4GB RAM ಮತ್ತು 64GB ಸ್ಟೋರೇಜ್ ಮಾದರಿಗೆ 10,499 ರೂ. ಬೆಲೆಯನ್ನು ಹೊಂದಿದೆ. ಜೊತೆಗೆ 6GB RAM ಮತ್ತು 128GB ಆಯ್ಕೆಯ ಬೆಲೆ 11,999 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G 80 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಇದೇ ಮಾರ್ಚ್ 26 ರಿಂದ (ಮಧ್ಯಾಹ್ನ 12 ಗಂಟೆಗೆ) ಫ್ಲಿಪ್‌ಕಾರ್ಟ್ ಅಥವಾ ಮೈಕ್ರೋಮ್ಯಾಕ್ಸ್ ಆಫ್‌ಲೈನ್ ಮತ್ತು ಆನ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಸಬಹುದಾಗಿದೆ.

ಪೊಕೊ X3
ಪೊಕೊ X3 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 64GB ಮಾದರಿಯು ಫ್ಲಿಪ್‌ಕಾರ್ಟ್‌ನಲ್ಲಿ 14,499 ರೂ.ಬೆಲೆಯನ್ನು ಹೊಂದಿದೆ.

ನೋಕಿಯಾ 5.4
ನೋಕಿಯಾ 5.4 ಸ್ಮಾರ್ಟ್‌ಫೋನ್ ಕೂಡ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು 4GB RAM+ 64GB ಇಂಟರ್ ಸ್ಟೋರೇಜ್ ಆಯ್ಕೆಗೆ 13,999 ರೂ. ಮತ್ತು 6GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 15,499 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.4-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 4,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ರಿಯಲ್‌ಮಿ ನಾರ್ಜೊ 20 ಪ್ರೊ
ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಕೇವಲ 38 ನಿಮಿಷಗಳಲ್ಲಿ ಸಾಧನವನ್ನು 0 ರಿಂದ 100 ಪ್ರತಿಶತದಷ್ಟು ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಫ್ಲಿಪ್‌ಕಾರ್ಟ್‌ನಲ್ಲಿ 6GB RAM + 64GB ರೂಪಾಂತರಕ್ಕೆ 13,999 ರೂ.ಗಳಲ್ಲಿ ಲಭ್ಯವಾಗಲಿದೆ.

ರೆಡ್ಮಿ ನೋಟ್ 10
ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 30 ನಿಮಿಷಗಳಲ್ಲಿ 0 ರಿಂದ 67 ಪ್ರತಿಶತದವರೆಗೆ ಸಾಧನವನ್ನು ಚಾರ್ಜ್ ಮಾಡಬಹುದು. ಭಾರತದಲ್ಲಿ ಇದರ ಬೆಲೆ ಬೇಸ್ ಮಾಡೆಲ್ 4GB RAM + 64GB ರೂಪಾಂತರಕ್ಕೆ 11,999 ರೂ. ಬೆಲೆಯನ್ನು ಹೊಂದಿದೆ.


Click it and Unblock the Notifications




