Home
ಸುದ್ದಿಜಾಲ

ಅತ್ಯುತ್ತಮ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಇಂದಿನ ದಿನಗಳಲ್ಲಿ ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ವಿಭಿನ್ನ ಶೈಲಿಯ ಕ್ಯಾಮೆರಾ ಸೆಟ್‌ಅಪ್‌, ಮಾಡ್ಯೂಲ್‌ ವಿನ್ಯಾಸದಿಂದಾಗಿ ಗಮನಸೆಳೆದಿವೆ. ಅದರಲ್ಲೂ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳ ಡಿವೈಸ್‌ಗಳಿಗೆ ಭಾರಿ ಬೇಡಿಕೆಯಿದೆ. ಇವುಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಸುಧಾರಿತ ಕ್ಯಾಮೆರಾ ಟೆಕ್ನಾಲಜಿಯನ್ನು ಕಾಣಬಹುದಾಗಿದೆ.

ಹೌದು, ಸ್ಮಾರ್ಟ್‌ಫೋನ್‌ ಕ್ಯಾಮೆರಾ ಟೆಕ್ನಾಲಜಿ ಇಂದು ಸಾಕಷ್ಟು ಬೆಳೆದಿದೆ. ಸ್ಮಾರ್ಟ್‌ಫೋನ್‌ ಕ್ಯಾಮೆರಾಗಳ ಮೂಲಕವೇ ಚಲನಚಿತ್ರವನ್ನು ಕೂಡ ಚಿತ್ರೀಕರಣ ಮಾಡುವಷ್ಟು ಟೆಕ್ನಾಲಜಿ ಮುಂದುವರೆದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಮಲ್ಟಿ ಲೆನ್ಸ್‌ಗಳು, ಹೆಚ್ಚಿನ ಮೆಗಾಪಿಕ್ಸೆಲ್ ಕೌಂಟ್‌, ಸುಧಾರಿತ ಇಮೇಜ್ ಪ್ರೊಸೆಸಿಂಗ್‌ನಂತಹ ಫೀಚರ್ಸ್‌ಗಳನ್ನು ನೀಡಲಿವೆ. ಹಾಗಾದ್ರೆ ಪ್ರಸ್ತುತ ದಿನಗಳಲ್ಲಿ ಬೆಸ್ಟ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬೇಕೆ? ಇಲ್ಲಿದೆ  ಡಿಟೇಲ್ಸ್‌

ವಿವೋ X90 ಪ್ರೊ
ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ Zeiss-ಬ್ರಾಂಡ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಪ್ರಮುಖ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX 989 1-ಇಂಚಿನ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX758 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX ಸೆಲ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12GB ಮತ್ತು 256GB ಸ್ಟೋರೇಜ್‌ ಆಯ್ಕೆಯು 84,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಅತ್ಯುತ್ತಮ ಕ್ಯಾಮೆರಾ ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್‌ ಲೆನ್ಸ್‌ ಹೊಂದಿದೆ. ಇದರ ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಹೊಂದಿದೆ. ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ವಿವೋ V27 ಪ್ರೊ
ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಬೆಸ್ಟ್‌ ಕ್ಯಾಮೆರಾ ಸೆಟ್‌ಅಪ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೆನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ನೈಟ್‌ ಟೈಂನಲ್ಲಿಯೂ ಸಹ ಬೆಸ್ಟ್‌ ಫೋಟೋ ಸೆರೆಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೈಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ.

ಶಿಯೋಮಿ 13 ಪ್ರೊ
ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬೆಟರ್‌ ಫೋನ್‌ ಆಗಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾ ಕೂಡ 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿವೆ. ಇದರೊಂದಿಗೆ ಸೆಲ್ಫಿಗಾಗಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಬೆಸ್ಟ್‌ ಫೋಟೋಗಳಿಗಾಗಿ ನೀವು ವಿಭಿನ್ನ ಶೈಲಿಗಳನ್ನು ಸಹ ಆಯ್ಕೆ ಮಾಡಬಹುದು.

ಒಪ್ಪೋ ರೆನೋ 10ಪ್ರೊ ಪ್ಲಸ್‌
ಒಪ್ಪೋ ರೆನೋ 10ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

Best Mobiles in India

English summary
Best camera smartphones you can buy right now: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+