15,000 ರೂ ಒಳಗೆ ಲಭ್ಯವಿರುವ ಗೊರಿಲ್ಲಾ ಗ್ಲಾಸ್ ಹೊಂದಿರುವ 5 ಅತ್ಯುತ್ತಮ ಫೋನ್‌ಗಳು !
ಟೆಕ್ ವಲಯದಲ್ಲಿ ನಾನಾ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದನ್ನ ಆಯ್ಕೆ ಮಾಡಿಕೊಲ್ಳಬೇಕೆಮಬ ಗೊಮದಲ ಗ್ರಾಹಕರಲ್ಲಿ ಇದ್ದೇ ಇರುತ್ತದೆ. ಅದರಲ್ಲೂ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಖರೀದಿಸಲು ಇಚ್ಚಿಸುವ ಗ್ರಾಹಕರಿಗೆ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗಲಿವೆ. ಇನ್ನು ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಡಿಸ್‌ಪ್ಲೇ ವಿನ್ಯಾಸದ ಬಗ್ಗ ಎಲ್ಲರೂ ಗಮನ ವಹಿಸುತ್ತಾರೆ. ಸದ್ಯ ನಾವಿಂದು ಮಾರುಕಟ್ಟೆಯಲ್ಲಿ ಲಭ್ಯವಿರುವ ಗೊರಿಲ್ಲಾ ಗ್ಲಾಸ್ ಹೊಂದಿರುವ ಟಾಪ್ 5 ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಸಿಕೊಡ್ತೀವಿ ಓದಿರಿ.

ಹೌದು, ಬಜೆಟ್ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವಾಗ ಹೆಚ್ಚಿನ ಗ್ರಾಹಕರು ಡಿಸ್‌ಪ್ಲೇ ವಿನ್ಯಾಸ ಹಾಗೂ ಡಿಸ್‌ಪ್ಲೇ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗೆ ಡಿಸ್‌ಪ್ಲೇಗೆ ಆದ್ಯತೆ ನೀಡುವ ಹಾಗೂ ಗೊರಿಲ್ಲಾ ಗ್ಲಾಸ್ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಸಿಲು ಇಚ್ಚಿಸುವ ಗ್ರಾಹಕರಿಗೆ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಸದ್ಯ ಭಾರತದಲ್ಲಿ ಗೊರಿಲ್ಲಾ ಗ್ಲಾಸ್ ಡಿಸ್‌ಪ್ಲೇ ಹೊಂದಿರುವ, 15000 ರೂ ಕ್ಕಿಂತ ಕಡಿಮೆ ಬೆಲೆಯ ಟಾಪ್ 5 ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

1. ಮೊಟೊರೊಲಾ ಮೋಟೋ G6 ಪ್ಲೇ
ಗೊರಿಲ್ಲಾ ಗ್ಲಾಸ್ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಮೊಟೊರೊಲಾ ಮೋಟೋ G6 ಪ್ಲೇ ಸ್ಮಾರ್ಟ್‌ಫೋನ್ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 720 x 1440 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 5.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 1.4 GHz ಆಕ್ಟಾ ಕೋರ್ ಕ್ವಾಲ್ಕಾಮ್ MSM8937ಸ್ನಾಪ್‌ಡ್ರಾಗನ್ 430 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ 12,999ರೂ ಆಗಿದೆ.

2. ಜಿಯೋನಿ S6 ಪ್ರೊ
ಇನ್ನು ಜಿಯೋನಿ S6 ಪ್ರೊ ಸ್ಮಾರ್ಟ್‌ಫೋನ್ ಕೂಡ ಗೋರಿಲ್ಲಾ ಗ್ಲಾಸ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 5.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 1.8 GHz ಆಕ್ಟಾ ಕೋರ್ ಮೀಡಿಯಾಟೆಕ್ MT6755M ಹೆಲಿಯೊ P10 ಪ್ರೊಸೆಸರ್ ಹೊಂದಿದೆ. ಹಾಗೇಯೇ ಇದು 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ರಿಯರ್ ಕ್ಯಾಮೆರಾ ಹೊಂದಿದೆ. ಅಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಇದು 3130 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದರ ಬೆಲೆ 10,000 ರೂ ಆಗಿದೆ.

3. ಜಿಯೋನಿ A1 ಲೈಟ್
ಜಿಯೋನಿ A1 ಲೈಟ್ ಸ್ಮಾರ್ಟ್‌ಫೋನ್ 5.3 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದು 720 x 1280 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 1.3 GHz ಆಕ್ಟಾ ಕೋರ್ ಮೀಡಿಯಾಟೆಕ್ MT6753 ಪ್ರೊಸೆಸರ್ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದರ ಬೆಲೆ 12,000 ರೂ ಆಗಿದೆ.

4. ಲೆನೊವೊ K8 ನೋಟ್
ಲೆನೊವೊ K8 ನೋಟ್ ಸ್ಮಾರ್ಟ್‌ಫೋನ್ ಕೂಡ ಗೋರಿಲ್ಲಾ ಗ್ಲಾಸ್ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು 5.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 1920 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಆಕ್ಟಾಕೋರ್ ಮೀಡಿಯಾಟೆಕ್ MT6797 ಪ್ರೊಸೆಸರ್ ಹೊಂದಿದೆ. ಇದು 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದರ ಬೆಲೆ 13,880ರೂ ಆಗಿದೆ.

5. ಜಿಯೋನಿ A1 ಪ್ಲಸ್
ಇನ್ನು ಈ ಸ್ಮಾರ್ಟ್‌ಫೋನ್ 6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 1080 x 1920 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿದೆ. ಅಲ್ಲದೆ ಇದು ಆಕ್ಟಾ ಕೋರ್ ಮೀಡಿಯಾಟೆಕ್ ಹಿಲಿಯೊ P25 ಪ್ರೊಸೆಸರ್ ಹೊಂದಿದೆ. 4550 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.


Click it and Unblock the Notifications