ಕರ್ವ್ ಡಿಸ್‌ಪ್ಲೇ ಸ್ಮಾರ್ಟ್‌ಫೋನ್ ಖರೀದಿಸಬೇಕೆ?..ಹಾಗಿದ್ರೆ ಈ ಲಿಸ್ಟ್ ನೋಡಿ!
ಸ್ಮಾರ್ಟ್‌ಫೋನ್ ವಲಯದಲ್ಲಿ ಸಾಕಷ್ಟು ಅಪ್‌ಡೇಟ್ ಆಗುತ್ತಾ ಸಾಗಿದ್ದು, ನೂತನ ಫೋನ್‌ಗಳು ಹೊಸ ಹೊಸ ಬಗೆಯ ಫೀಚರ್ಸ್‌ಗಳೊಂದಿಗೆ ಲಗ್ಗೆ ಇಡುತ್ತಿವೆ. ಆ ಪೈಕಿ ಫೋನ್ ಡಿಸ್‌ಪ್ಲೇನಲ್ಲಿಯೂ ಬಹಳಷ್ಟು ಬದಲಾವಣೆ ಆಗಿವೆ. ಸದ್ಯ ಅಮೋಲೆಡ್, ಸೂಪರ್ ಅಮೋಲೆಡ್, OLED ಮಾದರಿಯ ಡಿಸ್‌ಪ್ಲೇಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಇದರೊಂದಿಗೆ ಕರ್ವ್ಡ್ ಮಾದರಿಯ ಡಿಸ್‌ಪ್ಲೇಗಳು ಗ್ರಾಹಕರ ಗಮನ ಸೆಳೆದಿವೆ.
ಹೌದು, ಇತ್ತೀಚಿಗೆ ಕರ್ವ್ಡ್ ಮಾದರಿಯ ಡಿಸ್‌ಪ್ಲೇಗಳು ಹೆಚ್ಚು ಆಕರ್ಷಕ ಎನಿಸುತ್ತಿವೆ. ಈ ಡಿಸ್‌ಪ್ಲೇಯ ರೆಸಲ್ಯೂಶನ್ ಅಧಿಕ ಇದ್ದು, ಗುಣಮ್ಟಟವು ಸಹ ಉತ್ತಮವಾಗಿರುತ್ತದೆ. ಹೀಗಾಗಿ ಬಳಕೆದಾರರಿಗೆ ಕರ್ವ್ಡ್ ಮಾದರಿಯ ಡಿಸ್‌ಪ್ಲೇಗಳು ಹೊಸ ಅನುಭವ ನೀಡುತ್ತವೆ.

ಅನೇಕರು ಹೊಸ ಫೋನ್ ಖರೀದಿಸುವಾಗ ಕರ್ವ್ಡ್ ಮಾದರಿಯ ಡಿಸ್‌ಪ್ಲೇ ಫೋನ್‌ಗಳಿಗೆ ಆದ್ಯತೆ ನೀಡುತ್ತಾರೆ. ಹೀಗೆ ನೀವು ಕರ್ವ್ಡ್ ರೀತಿಯ ಡಿಸ್‌ಪ್ಲೇ ಇರುವ ಫೋನ್ ನೋಡುತ್ತಿದ್ದರೆ, ಈ ಲೇಖನ ಓದಿರಿ.
ಶಿಯೋಮಿ 13 ಪ್ರೊ ಸ್ಮಾರ್ಟ್‌ಫೋನ್
ಶಿಯೋಮಿ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.7 ಇಂಚಿನ OLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಸ್ಕ್ರೀನ್ 120 Hz ರಿಫ್ರೆಶ್ ದರ ಹೊಂದಿದೆ. ಇದರ ಜೊತೆಗೆ ಇದರ ಡಿಸ್‌ಪ್ಲೇ ಡಾಲ್ಬಿ ವಿಷನ್ ಮತ್ತು HDR10 ಗೆ ಬೆಂಬಲ ಒಳಗೊಂಡಿದೆ. ಇದರೊಂದಿಗೆ ಸ್ಕ್ರೀನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ನಿಂದ ರಕ್ಷಣೆ ಪಡೆದಿದ್ದು, QHD+ ರೆಸಲ್ಯೂಶನ್‌ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಸ್ಕ್ರೀನ್ 1900 nits ಸಾಮರ್ಥ್ಯದಲ್ಲಿ ಇದ್ದು, ಡಿಸ್‌ಪ್ಲೇಯು LTPO ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಮೊಬೈಲ್ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ ಡೈನಾಮಿಕ್ ರಿಫ್ರೆಶ್ ರೇಟ್ 1-120Hz ಸಪೋರ್ಟ್ ಮಾಡುತ್ತದೆ. ಅಲ್ಲದೆ ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಜೊತೆಗೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಹಾಗೂ ವಿಷನ್ ಬೂಸ್ಟರ್ ಅನ್ನು ಒಳಗೊಂಡಿದೆ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಪವರ್ ಹೊಂದಿದೆ.
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್
ಒನ್‌ಪ್ಲಸ್ ಸಂಸ್ಥೆಯ ಈ ಫೋನ್ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಡಿಸ್‌ಪ್ಲೇಯು 2772 x 1240 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒದಗಿಸುತ್ತದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್ ಪಡೆದಿದೆ.

ವಿವೋ X90 ಪ್ರೊ ಫೋನ್
ವಿವೋ ಕಂಪನಿಯ ಈ ಹೈ ಎಂಡ್ ಫೋನ್ 6.78 ಇಂಚಿನ ಅಲ್ಟ್ರಾ ವಿಷನ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಹಾಗೆಯೇ ಇದರ ಸ್ಕ್ರೀನ್ ಕರ್ವ್ ಮಾದರಿಯ ರಚನೆಯನ್ನು ಒಳಗೊಂಡಿದ್ದು, ಹೋಲ್-ಪಂಚ್ ಕಟೌಟ್ ವಿನ್ಯಾಸ ಒಳಗೊಂಡಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಪ್ರೊಸೆಸರ್ ವೇಗದಲ್ಲಿ ಕೆಲಸ ನಿರ್ವಹಿಸಲಿದೆ.


Click it and Unblock the Notifications








